ಙ್ಞಾನೋಕ್ತಿಗಳು 9 : 1 (ERVKN)
ಜ್ಞಾನ ಮತ್ತು ಮೂರ್ಖತನ ಜ್ಞಾನವೆಂಬಾಕೆ ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ. ಆಕೆ ಅದಕ್ಕೆ ಏಳು ಕಂಬಗಳನ್ನು ಹಾಕಿದ್ದಾಳೆ.
ಙ್ಞಾನೋಕ್ತಿಗಳು 9 : 2 (ERVKN)
ಜ್ಞಾನವೆಂಬಾಕೆ ಮಾಂಸದ ಅಡಿಗೆಯನ್ನೂ ದ್ರಾಕ್ಷಾರಸವನ್ನೂ ತಯಾರಿಸಿದ್ದಾಳೆ. ಆಕೆ ತನ್ನ ಮೇಜಿನ ಮೇಲೆ ಆಹಾರವನ್ನು ಇಟ್ಟಿದ್ದಾಳೆ.
ಙ್ಞಾನೋಕ್ತಿಗಳು 9 : 3 (ERVKN)
ಆಮೇಲೆ ಆಕೆ, ತನ್ನ ಸೇವಕಿಯರನ್ನು ಕಳುಹಿಸಿ ನಗರದ ಎತ್ತರವಾದ ಸ್ಥಳದಿಂದ,
ಙ್ಞಾನೋಕ್ತಿಗಳು 9 : 4 (ERVKN)
“ಕಲಿತುಕೊಳ್ಳಬೇಕಾಗಿರುವ ಜನರೇ, ಬನ್ನಿರಿ” ಎಂದು ಕೂಗುತ್ತಾಳೆ. ಆಕೆಯು ಬುದ್ಧಿಹೀನರಿಗೆ,
ಙ್ಞಾನೋಕ್ತಿಗಳು 9 : 5 (ERVKN)
“ಬನ್ನಿರಿ, ನನ್ನ ಜ್ಞಾನದ ಆಹಾರವನ್ನು ತಿನ್ನಿರಿ. ನಾನು ತಯಾರಿಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.
ಙ್ಞಾನೋಕ್ತಿಗಳು 9 : 6 (ERVKN)
ನಿಮ್ಮ ಮೂರ್ಖ ಮಾರ್ಗಗಳನ್ನು ತೊರೆದುಬಿಡಿ. ಆಗ ನಿಮಗೆ ಜೀವವು ದೊರೆಯುವುದು. ವಿವೇಕಮಾರ್ಗದಲ್ಲಿ ಮುಂದೆ ಸಾಗಿರಿ” ಎಂದು ಆಕೆ ಹೇಳಿದಳು.
ಙ್ಞಾನೋಕ್ತಿಗಳು 9 : 7 (ERVKN)
ನೀನು ಅಹಂಕಾರಿಗೆ ಅವನ ತಪ್ಪನ್ನು ತಿಳಿಸಲು ಪ್ರಯತ್ನಿಸಿದರೆ ಅವನು ನಿನ್ನನ್ನೇ ಖಂಡಿಸುವನು. ನೀನು ಕೆಡುಕನಿಗೆ ಅವನ ತಪ್ಪನ್ನು ತಿಳಿಸಿದರೆ ಅವನು ನಿನ್ನನ್ನೇ ಗೇಲಿಮಾಡುವನು.
ಙ್ಞಾನೋಕ್ತಿಗಳು 9 : 8 (ERVKN)
ದುರಾಭಿಮಾನಿಯನ್ನು ಗದರಿಸಬೇಡ; ಅವನು ನಿನ್ನನ್ನೇ ದ್ವೇಷ ಮಾಡುವನು. ಆದರೆ ನೀನು ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿಸುವನು.
ಙ್ಞಾನೋಕ್ತಿಗಳು 9 : 9 (ERVKN)
ನೀನು ಜ್ಞಾನಿಗೆ ಉಪದೇಶಿಸಿದರೆ ಅವನು ಮತ್ತಷ್ಟು ಜ್ಞಾನಿಯಾಗುವನು. ನೀನು ನೀತಿವಂತನಿಗೆ ಬೋಧಿಸಿದರೆ, ಅವನು ಮತ್ತಷ್ಟು ತಿಳುವಳಿಕೆಯನ್ನು ಪಡೆದುಕೊಳ್ಳುವನು.
ಙ್ಞಾನೋಕ್ತಿಗಳು 9 : 10 (ERVKN)
ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನದ ಮೂಲ. ಯೆಹೋವನ ತಿಳುವಳಿಕೆಯನ್ನು ಪಡೆದುಕೊಳ್ಳುವುದೇ ವಿವೇಕದ ಮೂಲ.
ಙ್ಞಾನೋಕ್ತಿಗಳು 9 : 11 (ERVKN)
ನೀನು ಜ್ಞಾನಿಯಾಗಿದ್ದರೆ, ಬಹುಕಾಲ ಬದುಕುವೆ.
ಙ್ಞಾನೋಕ್ತಿಗಳು 9 : 12 (ERVKN)
ನೀನು ಜ್ಞಾನಿಯಾಗಿದ್ದರೆ ನಿನ್ನ ಜ್ಞಾನವು ನಿನಗೇ ಲಾಭಕರ. ಆದರೆ ನೀನು ದುರಾಭಿಮಾನದಿಂದ ಬೇರೆಯವರನ್ನು ಗೇಲಿಮಾಡಿದರೆ ನಿನ್ನನ್ನೇ ಕಷ್ಟಕ್ಕೆ ಗುರಿಮಾಡಿಕೊಳ್ಳುವೆ.
ಙ್ಞಾನೋಕ್ತಿಗಳು 9 : 13 (ERVKN)
ಅಜ್ಞಾನಿಯೆಂಬ ಹೆಂಗಸು ಅಜ್ಞಾನವೆಂಬಾಕೆಯು ಬಾಯಿಬಡುಕಿ; ಮಂದಮತಿ ಮತ್ತು ಮೂಢಳು,
ಙ್ಞಾನೋಕ್ತಿಗಳು 9 : 14 (ERVKN)
ಅವಳು ತನ್ನ ಮನೆಯ ಬಾಗಿಲ ಬಳಿಯಲ್ಲಿ ನಗರದ ಎತ್ತರವಾದ ಸ್ಥಳಗಳಲ್ಲಿ ಕುಳಿತಿದ್ದಾಳೆ.
ಙ್ಞಾನೋಕ್ತಿಗಳು 9 : 15 (ERVKN)
ತಮ್ಮ ಕೆಲಸಕಾರ್ಯಗಳ ನಿಮಿತ್ತ ಹಾದುಹೋಗುವ ಜನರನ್ನು,
ಙ್ಞಾನೋಕ್ತಿಗಳು 9 : 16 (ERVKN)
“ಕಲಿತುಕೊಳ್ಳಬೇಕಾಗಿರುವ ಜನರೇ ಬನ್ನಿ” ಎಂದು ಕೂಗಿಕರೆಯುತ್ತಾಳೆ. ಅವಳು ಮೂಢರನ್ನು ಸಹ ಕರೆದು,
ಙ್ಞಾನೋಕ್ತಿಗಳು 9 : 17 (ERVKN)
“ನೀವು ಕದ್ದ ನೀರು ಸ್ವಂತ ನೀರಿಗಿಂತಲೂ ಹೆಚ್ಚು ರುಚಿಯಾಗಿರುವುದು. ನೀವು ಕದ್ದ ರೊಟ್ಟಿ ತಯಾರಿಸಿದ ರೊಟ್ಟಿಗಿಂತಲೂ ಹೆಚ್ಚು ರುಚಿಯಾಗಿರುವುದು” ಎಂದು ಹೇಳುವಳು.
ಙ್ಞಾನೋಕ್ತಿಗಳು 9 : 18 (ERVKN)
ಆದರೆ ಆ ಮೂಢರಿಗೆ, ಅವಳ ಮನೆ ಕೇವಲ ದೆವ್ವಗಳಿಂದ ತುಂಬಿರುವುದಾಗಲಿ ಆಕೆಯ ಅತಿಥಿಗಳು ಅಗಾಧವಾದ ಪಾತಾಳದಲ್ಲಿ ಬಿದ್ದಿರುವುದಾಗಲಿ ತಿಳಿದಿಲ್ಲ.
❮
❯
1
2
3
4
5
6
7
8
9
10
11
12
13
14
15
16
17
18