ಕೀರ್ತನೆಗಳು 10 : 1 (ERVKN)
ಯೆಹೋವನೇ, ನೀನು ಬಹುದೂರವಾಗಿರುವುದೇಕೆ? ಕಷ್ಟಕಾಲದಲ್ಲಿ ನೀನು ಮರೆಯಾಗಿರುವುದೇಕೆ?
ಕೀರ್ತನೆಗಳು 10 : 2 (ERVKN)
ದುಷ್ಟರು ಗರ್ವಿಷ್ಠರಾಗಿ ಬಡವರನ್ನು ಹಿಂದಟ್ಟಿ ಹೋಗುತ್ತಿದ್ದರೆ, ಆ ದುಷ್ಟರ ಕುಯುಕ್ತಿಯಲ್ಲಿ ಅವರು ಸಿಕ್ಕಿಬೀಳುವರು.
ಕೀರ್ತನೆಗಳು 10 : 3 (ERVKN)
ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.
ಕೀರ್ತನೆಗಳು 10 : 4 (ERVKN)
ಆ ದುಷ್ಟರು ಗರ್ವದಿಂದ ದೇವರನ್ನು ತೊರೆದುಬಿಡುವರು; ದುಷ್ಟಾಲೋಚನೆಗಳನ್ನು ಮಾಡುತ್ತಾ ದೇವರಿಲ್ಲದಂತೆ ವರ್ತಿಸುವರು.
ಕೀರ್ತನೆಗಳು 10 : 5 (ERVKN)
ಅವರು ಕುಯುಕ್ತಿಗಳನ್ನೇ ಮಾಡುತ್ತಾ ದೇವರ ಕಟ್ಟಳೆಗಳನ್ನೂ ಬುದ್ಧಿಮಾತುಗಳನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ. *ಅವರು … ತೆಗೆದುಕೊಳ್ಳುವುದಿಲ್ಲ ಅಕ್ಷರಶಃ, “ನಿನ್ನ ನ್ಯಾಯತೀರ್ಪು ಅವನಿಗಿಂತ ಬಹು ಉನ್ನತವಾಗಿದೆ.” ದೇವರ ವೈರಿಗಳು ಆತನ ಉಪದೇಶಗಳನ್ನು ಕಡೆಗಣಿಸುವರು.
ಕೀರ್ತನೆಗಳು 10 : 6 (ERVKN)
ಅವರು, “ನಮ್ಮನ್ನು ಯಾವುದೂ ಕದಲಿಸದು; ನಮಗೆ ಕೇಡಾಗದಿರುವುದರಿಂದ ಸಂತೋಷವಾಗಿರೋಣ” ಎಂದುಕೊಂಡಿದ್ದಾರೆ.
ಕೀರ್ತನೆಗಳು 10 : 7 (ERVKN)
ಅವರು ಯಾವಾಗಲೂ ಶಪಿಸುತ್ತಾರೆ; ಕೆಟ್ಟ ಮಾತುಗಳನ್ನು ಆಡುತ್ತಾರೆ, ಕುಯುಕ್ತಿಗಳನ್ನು ಮಾಡುತ್ತಾರೆ.
ಕೀರ್ತನೆಗಳು 10 : 8 (ERVKN)
ಅವರು ನಿರಪರಾಧಿಗಳನ್ನು ಹಿಡಿದು ಕೊಲ್ಲಲು ಗುಪ್ತವಾದ ಸ್ಥಳಗಳಲ್ಲಿ ಅಡಗಿಕೊಂಡಿರುವರು; ಅಸಹಾಯಕರಿಗಾಗಿ ಎದುರುನೋಡುವರು.
ಕೀರ್ತನೆಗಳು 10 : 9 (ERVKN)
ಅವರು ಬೇಟೆಯಾಡುವ ಸಿಂಹಗಳಂತಿದ್ದಾರೆ. ಅವರು ನಿಸ್ಸಹಾಯಕರ ಮೇಲೆ ಆಕ್ರಮಣ ಮಾಡಿ ತಮ್ಮ ಬಲೆಗಳಲ್ಲಿ ಎಳೆದುಕೊಂಡು ಹೋಗುವರು.
ಕೀರ್ತನೆಗಳು 10 : 10 (ERVKN)
ಆ ದುಷ್ಟರು ಕುಗ್ಗಿಹೋದವರನ್ನು ಮತ್ತೆಮತ್ತೆ ಜಜ್ಜಿಹಾಕುವರು.
ಕೀರ್ತನೆಗಳು 10 : 11 (ERVKN)
ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.
ಕೀರ್ತನೆಗಳು 10 : 12 (ERVKN)
ಯೆಹೋವನೇ, ಎದ್ದೇಳು, ಕಾರ್ಯನಿರತನಾಗು! ದೇವರೇ, ಆ ದುಷ್ಟರನ್ನು ದಂಡಿಸು! ನಿಸ್ಸಹಾಯಕರನ್ನು ಮರೆತುಬಿಡಬೇಡ!
ಕೀರ್ತನೆಗಳು 10 : 13 (ERVKN)
ದುಷ್ಟರು ದೇವರಿಗೆ ವಿರೋಧವಾಗಿ ಎದ್ದಿರುವುದೇಕೆ? ಆತನು ತಮ್ಮನ್ನು ದಂಡಿಸುವುದಿಲ್ಲವೆಂದು ಅವರು ಆಲೋಚಿಸಿಕೊಂಡಿರುವುದೇಕೆ?
ಕೀರ್ತನೆಗಳು 10 : 14 (ERVKN)
ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು.
ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!
ಕೀರ್ತನೆಗಳು 10 : 15 (ERVKN)
ಕೆಡುಕರನ್ನು ನಾಶಮಾಡು. ನಿನ್ನ ದೇಶದಿಂದ ಅವರನ್ನು ನಿರ್ಮೂಲಮಾಡು!
ಕೀರ್ತನೆಗಳು 10 : 16 (ERVKN)
ಯೆಹೋವನು ಸದಾಕಾಲವೂ ರಾಜನಾಗಿರುವನು. ಆತನು ತನ್ನ ದೇಶದಿಂದ ಕೆಡುಕರನ್ನು ತೆಗೆದುಹಾಕುವನು.
ಕೀರ್ತನೆಗಳು 10 : 17 (ERVKN)
ಯೆಹೋವನೇ, ಕುಗ್ಗಿಹೋದವರ ಕೋರಿಕೆಯನ್ನು ನೀನು ಕೇಳುವೆ. ಅವರ ಮೊರೆಗೆ ಕಿವಿಗೊಟ್ಟು ಅವರನ್ನು ಪ್ರೋತ್ಸಾಹಿಸುವೆ.
ಕೀರ್ತನೆಗಳು 10 : 18 (ERVKN)
ಯೆಹೋವನೇ, ಅನಾಥರನ್ನೂ ಕುಗ್ಗಿಸಲ್ಪಟ್ಟವರನ್ನೂ ಸಂರಕ್ಷಿಸು. ಆಗ ಕೇವಲ ಮನುಷ್ಯರಿಂದ ಅವರಿಗೆ ಭಯವಾಗದು.
❮
❯
1
2
3
4
5
6
7
8
9
10
11
12
13
14
15
16
17
18