ಕೀರ್ತನೆಗಳು 100 : 1 (ERVKN)
ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಗಾಯನ ಮಾಡಿರಿ!
ಕೀರ್ತನೆಗಳು 100 : 2 (ERVKN)
ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ; ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ!
ಕೀರ್ತನೆಗಳು 100 : 3 (ERVKN)
ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಪ್ರಜೆಯೂ ಮಂದೆಯೂ ಆಗಿದ್ದೇವೆ.
ಕೀರ್ತನೆಗಳು 100 : 4 (ERVKN)
ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ.
ಕೀರ್ತನೆಗಳು 100 : 5 (ERVKN)
ಯೆಹೋವನು ಒಳ್ಳೆಯವನು! ಆತನ ಪ್ರೀತಿಯು ಶಾಶ್ವತವಾದದ್ದು, ಆತನ ನಂಬಿಗಸ್ತಿಕೆಯು ನಿರಂತರವಾದದ್ದು.

1 2 3 4 5

BG:

Opacity:

Color:


Size:


Font: