ಕೀರ್ತನೆಗಳು 106 : 1 (ERVKN)
ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು! ಆತನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಪ್ರೀತಿಯು ಶಾಶ್ವತವಾದದ್ದು!
ಕೀರ್ತನೆಗಳು 106 : 2 (ERVKN)
ಯೆಹೋವನ ಮಹತ್ವವನ್ನು ಸಂಪೂರ್ಣವಾಗಿ ವರ್ಣಿಸಲು ಯಾರಿಗೂ ಆಗದು; ಆತನನ್ನು ಸಂಪೂರ್ಣವಾಗಿ ಸ್ತುತಿಸುವುದಕ್ಕೂ ಯಾರಿಗೂ ಸಾಧ್ಯವಿಲ್ಲ.
ಕೀರ್ತನೆಗಳು 106 : 3 (ERVKN)
ದೇವರ ಆಜ್ಞೆಗಳಿಗೆ ವಿಧೇಯರಾಗಿರುವವರು ಭಾಗ್ಯವಂತರೇ ಸರಿ! ಅವರು ಸತ್ಕಾರ್ಯಗಳನ್ನು ಯಾವಾಗಲೂ ಮಾಡುತ್ತಿರುವರು.
ಕೀರ್ತನೆಗಳು 106 : 4 (ERVKN)
ಯೆಹೋವನೇ, ನಿನ್ನ ಜನರಿಗೆ ದಯೆತೋರುವಾಗ ನನ್ನನ್ನು ಜ್ಞಾಪಿಸಿಕೊಂಡು ದಯೆತೋರು. ನಿನ್ನ ಜನರನ್ನು ರಕ್ಷಿಸುವಾಗ ನನ್ನನ್ನು ನೆನಪು ಮಾಡಿಕೊಂಡು ರಕ್ಷಿಸು.
ಕೀರ್ತನೆಗಳು 106 : 5 (ERVKN)
ಯೆಹೋವನೇ, ನಿನ್ನ ಜನರಿಗೋಸ್ಕರ ನೀನು ಮಾಡುವ ಒಳ್ಳೆಯವುಗಳಲ್ಲಿ ನನಗೂ ಪಾಲು ದೊರೆಯಲಿ. ನಿನ್ನ ಜನರೊಂದಿಗೆ ನಾನೂ ಸಂತೋಷಪಡುವಂತೆ ಮಾಡು. ನಿನ್ನ ಜನರೊಂದಿಗೆ ನಾನೂ ನಿನ್ನ ಬಗ್ಗೆ ಹೆಮ್ಮೆಪಡುವಂತಾಗಲಿ.
ಕೀರ್ತನೆಗಳು 106 : 6 (ERVKN)
ನಮ್ಮ ಪೂರ್ವಿಕರು ಪಾಪಮಾಡಿದಂತೆಯೇ ನಾವು ಪಾಪ ಮಾಡಿದೆವು. ನಾವು ಆಪರಾಧಿಗಳಾಗಿದ್ದೆವು; ದುಷ್ಕೃತ್ಯಗಳನ್ನು ಮಾಡಿದೆವು!
ಕೀರ್ತನೆಗಳು 106 : 7 (ERVKN)
ನೀನು ಈಜಿಪ್ಟಿನಲ್ಲಿ ಮಾಡಿದ ಮಹತ್ಕಾರ್ಯಗಳಿಂದ ನಮ್ಮ ಪೂರ್ವಿಕರು ಏನೂ ಕಲಿತುಕೊಳ್ಳಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ತಿರುಗಿದರು.
ಕೀರ್ತನೆಗಳು 106 : 8 (ERVKN)
ಆದರೆ ಆತನು ತನ್ನ ಹೆಸರಿನ ನಿಮಿತ್ತವಾಗಿ ನಮ್ಮ ಪೂರ್ವಿಕರನ್ನು ರಕ್ಷಿಸಿದನು; ತನ್ನ ಮಹಾಶಕ್ತಿಯನ್ನು ತೋರಿಸುವುದಕ್ಕಾಗಿ ಅವರನ್ನು ರಕ್ಷಿಸಿದನು.
ಕೀರ್ತನೆಗಳು 106 : 9 (ERVKN)
ಆತನು ಆಜ್ಞಾಪಿಸಲು ಕೆಂಪು ಸಮುದ್ರವು ಒಣಗಿಹೋಯಿತು. ಆತನು ಆಳವಾದ ಸಮುದ್ರವನ್ನು ಇಬ್ಭಾಗ ಮಾಡಿ ಮರಳುಗಾಡಿನಂತೆ ಒಣಗಿಹೋಗಿದ್ದ ಭೂಮಿಯ ಮೇಲೆ ನಮ್ಮ ಪೂರ್ವಿಕರನ್ನು ನಡೆಸಿದನು.
ಕೀರ್ತನೆಗಳು 106 : 10 (ERVKN)
ನಮ್ಮ ಪೂರ್ವಿಕರನ್ನು ಅವರ ಶತ್ರುಗಳಿಂದ ರಕ್ಷಿಸಿದನು! ವೈರಿಗಳಿಂದ ಪಾರುಮಾಡಿದನು!
ಕೀರ್ತನೆಗಳು 106 : 11 (ERVKN)
ಅವರ ಶತ್ರುಗಳನ್ನು ಸಮುದ್ರದಲ್ಲಿ ಮುಳುಗಿಸಿಬಿಟ್ಟನು. ಅವರ ಶತ್ರುಗಳಲ್ಲಿ ಒಬ್ಬರೂ ತಪ್ಪಿಸಿಕೊಳ್ಳಲಾಗಲಿಲ್ಲ!
ಕೀರ್ತನೆಗಳು 106 : 12 (ERVKN)
ನಮ್ಮ ಪೂರ್ವಿಕರು ಆತನ ಆಜ್ಞೆಗಳನ್ನು ನಂಬಿ ಆತನನ್ನು ಸಂಕೀರ್ತಿಸಿದರು.
ಕೀರ್ತನೆಗಳು 106 : 13 (ERVKN)
ಆದರೆ ಆತನ ಕಾರ್ಯಗಳನ್ನು ಅವರು ಬೇಗನೆ ಮರೆತುಬಿಟ್ಟರು; ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ.
ಕೀರ್ತನೆಗಳು 106 : 14 (ERVKN)
ನಮ್ಮ ಪೂರ್ವಿಕರು ಮರಳುಗಾಡಿನಲ್ಲಿ ಆಶಾತುರರಾಗಿ ಆತನನ್ನು ಪರೀಕ್ಷಿಸಿದರು.
ಕೀರ್ತನೆಗಳು 106 : 15 (ERVKN)
ಆತನು ಅವರ ಆಸೆಯನ್ನು ಪೂರೈಸಿದರೂ ಅವರಿಗೆ ಭಯಂಕರವಾದ ರೋಗವನ್ನು ಬರಮಾಡಿದನು.
ಕೀರ್ತನೆಗಳು 106 : 16 (ERVKN)
ಅವರು ಮೋಶೆಯ ಮೇಲೆಯೂ ಯೆಹೋವನ ಪವಿತ್ರ ಯಾಜಕನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು.
ಕೀರ್ತನೆಗಳು 106 : 17 (ERVKN)
ಭೂಮಿಯು ಬಾಯ್ದೆರೆದು ಹೊಟ್ಟೇಕಿಚ್ಚುಪಟ್ಟ ದಾತಾನನ್ನೂ ಅಬಿರಾಮನ ಪಂಗಡದವರನ್ನೂ ನುಂಗಿಬಿಟ್ಟಿತು.
ಕೀರ್ತನೆಗಳು 106 : 18 (ERVKN)
ಬಳಿಕ ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಆಗ್ನಿ ಜ್ವಾಲೆಯು ಆ ದುಷ್ಟರನ್ನು ದಹಿಸಿಬಿಟ್ಟಿತು.
ಕೀರ್ತನೆಗಳು 106 : 19 (ERVKN)
ಹೋರೇಬ್ ಬೆಟ್ಟದ ಬಳಿಯಲ್ಲಿ ಅವರು ಚಿನ್ನದ ಬಸವನನ್ನು ಮಾಡಿ ಅಡ್ಡಬಿದ್ದರು.
ಕೀರ್ತನೆಗಳು 106 : 20 (ERVKN)
ಹುಲ್ಲುತ್ತಿನ್ನುವ ಹೋರಿಯ ಮೂರ್ತಿಗಾಗಿ ಅವರು ಮಹಿಮಾಸ್ವರೂಪನಾದ ದೇವರನೇ ಮಾರಿಬಿಟ್ಟರು!
ಕೀರ್ತನೆಗಳು 106 : 21 (ERVKN)
ಆತನು ನಮ್ಮ ಪೂರ್ವಿಕರನ್ನು ರಕ್ಷಿಸಿದರೂ ಅವರು ಆತನನ್ನು ಮರೆತುಬಿಟ್ಟರು! ಈಜಿಪ್ಟಿನಲ್ಲಿ ಮಹತ್ಕಾರ್ಯಗಳನ್ನು ಮಾಡಿದ ದೇವರನ್ನು ಅವರು ಮರೆತುಬಿಟ್ಟರು.
ಕೀರ್ತನೆಗಳು 106 : 22 (ERVKN)
ಆತನು ಹಾಮನ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದನು. ಆತನು ಕೆಂಪು ಸಮುದ್ರದ ಸಮೀಪದಲ್ಲಿ ಭಯಂಕರವಾದ ಕಾರ್ಯಗಳನ್ನು ಮಾಡಿದನು!
ಕೀರ್ತನೆಗಳು 106 : 23 (ERVKN)
ಆತನು ಅವರನ್ನು ನಾಶಮಾಡಬೇಕೆಂದಿದ್ದನು. ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮಧ್ಯಸ್ಥನಾಗಿ ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು.
ಕೀರ್ತನೆಗಳು 106 : 24 (ERVKN)
ಬಳಿಕ ಅವರು ರಮಣೀಯವಾದ ಕಾನಾನ್ ದೇಶಕ್ಕೆ ಹೋಗಲು ಒಪ್ಪಲಿಲ್ಲ. ಅಲ್ಲಿಯ ನಿವಾಸಿಗಳನ್ನು ಸೋಲಿಸಲು ಆತನು ತಮಗೆ ಸಹಾಯ ಮಾಡುತ್ತಾನೆಂಬ ನಂಬಿಕೆ ಅವರಲ್ಲಿರಲಿಲ್ಲ.
ಕೀರ್ತನೆಗಳು 106 : 25 (ERVKN)
ನಮ್ಮ ಪೂರ್ವಿಕರು ತಮ್ಮತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ದೇವರ ಮಾತಿಗೆ ವಿಧೇಯರಾಗಲಿಲ್ಲ.
ಕೀರ್ತನೆಗಳು 106 : 26 (ERVKN)
ಆದ್ದರಿಂದ ಅವರು ಅರಣ್ಯದಲ್ಲಿ ಸಾಯುವುದಾಗಿ ದೇವರು ಪ್ರಮಾಣ ಮಾಡಿದನು.
ಕೀರ್ತನೆಗಳು 106 : 27 (ERVKN)
ಅವರ ಸಂತತಿಗಳವರು ಬೇರೆಯವರಿಂದ ಸೋಲಿಸಲ್ಪಡುವುದಾಗಿ ಆತನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರನ್ನು ಜನಾಂಗಗಳ ಮಧ್ಯೆ ಚದರಿಸುವುದಾಗಿ ಆತನು ಪ್ರಮಾಣ ಮಾಡಿದನು.
ಕೀರ್ತನೆಗಳು 106 : 28 (ERVKN)
ಬಳಿಕ ಬಾಳ್ ಪೆಗೋರಿನಲ್ಲಿ ದೇವಜನರು ಬಾಳನನ್ನು ಪೂಜಿಸಲು ಸೇರಿಕೊಂಡರು. ಜೀವವಿಲ್ಲದ ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ದೇವಜನರು ತಿಂದರು.
ಕೀರ್ತನೆಗಳು 106 : 29 (ERVKN)
ಯೆಹೋವನು ತನ್ನ ಜನರ ಮೇಲೆ ಬಹು ಕೋಪಗೊಂಡು ಅವರಿಗೆ ಭಯಂಕರವಾದ ಕಾಯಿಲೆಯನ್ನು ಬರಮಾಡಿದನು.
ಕೀರ್ತನೆಗಳು 106 : 30 (ERVKN)
ಆದರೆ ಫೀನೆಹಾಸನು ಎದ್ದು ಅವರನ್ನು ದಂಡಿಸಲು ಆತನು (ಯೆಹೋವನು) ಆ ಕಾಯಿಲೆಯನ್ನು ನಿಲ್ಲಿಸಿದನು.
ಕೀರ್ತನೆಗಳು 106 : 31 (ERVKN)
ಫೀನೆಹಾಸನ ಈ ಕಾರ್ಯವು ಅವನನ್ನು ತಲೆತಲೆಮಾರುಗಳವರೆಗೂ ನೀತಿವಂತನನ್ನಾಗಿ ಮಾಡಿತು.
ಕೀರ್ತನೆಗಳು 106 : 32 (ERVKN)
ಮೆರೀಬಾದಲ್ಲಿ ಜನರು ಮತ್ತೆ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡಾಯಿತು.
ಕೀರ್ತನೆಗಳು 106 : 33 (ERVKN)
ಅವರು ಆತನಿಗೆ (ದೇವಾರಾತ್ಮನಿಗೆ) ವಿರೋಧವಾಗಿ ನಿಂತರು. ಇದರಿಂದ ಬೇಸರಗೊಂಡಿದ್ದ ಮೋಶೆಯು ದುಡುಕಿ ಮಾತಾಡಿದನು.
ಕೀರ್ತನೆಗಳು 106 : 34 (ERVKN)
ಕಾನಾನಿನಲ್ಲಿ ವಾಸವಾಗಿದ್ದ ಅನ್ಯ ಜನಾಂಗಗಳನ್ನು ನಾಶಮಾಡಲು ಯೆಹೋವನು ಅವರಿಗೆ ಹೇಳಿದನು. ಆದರೆ ಇಸ್ರೇಲರು ದೇವರಿಗೆ ವಿಧೇಯರಾಗಲಿಲ್ಲ.
ಕೀರ್ತನೆಗಳು 106 : 35 (ERVKN)
ಅವರು ಬೇರೆಯವರೊಂದಿಗೆ ಸೇರಿಕೊಂಡು ಅವರ ದುರಾಚಾರಗಳನ್ನೇ ಮಾಡಿದರು.
ಕೀರ್ತನೆಗಳು 106 : 36 (ERVKN)
ಅವರು ದೇವಜನರಿಗೆ ಉರುಲಿನಂತಾದರು. ಅವರ ದೇವರುಗಳನ್ನು ದೇವಜನರು ಪೂಜಿಸತೊಡಗಿದರು.
ಕೀರ್ತನೆಗಳು 106 : 37 (ERVKN)
ದೇವಜನರು ತಮ್ಮ ಸ್ವಂತ ಮಕ್ಕಳನ್ನೂ ಆ ದೆವ್ವಗಳಿಗೆ ಅರ್ಪಿಸಿದರು.
ಕೀರ್ತನೆಗಳು 106 : 38 (ERVKN)
ದೇವಜನರು ನಿರಪರಾಧಿಗಳಾದ ತಮ್ಮ ಮಕ್ಕಳನ್ನು ಆ ಸುಳ್ಳುದೇವರುಗಳಿಗೆ ಅರ್ಪಿಸಿದರು.
ಕೀರ್ತನೆಗಳು 106 : 39 (ERVKN)
ತಮ್ಮ ಪಾಪಕಾರ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯಜನರು ಮಾಡಿದವುಗಳನ್ನು ಮಾಡಿದರು.
ಕೀರ್ತನೆಗಳು 106 : 40 (ERVKN)
ಆತನು ತನ್ನ ಜನರ ಮೇಲೆ ಕೋಪಗೊಂಡನು; ಅವರ ವಿಷಯದಲ್ಲಿ ಬೇಸರಗೊಂಡನು!
ಕೀರ್ತನೆಗಳು 106 : 41 (ERVKN)
ಆತನು ತನ್ನ ಜನರನ್ನು ಅನ್ಯಜನಾಂಗಗಳಿಗೆ ಒಪ್ಪಿಸಿದನು; ಅವರ ಮೇಲೆ ದೊರೆತನ ಮಾಡುವಂತೆ ವೈರಿಗಳಿಗೆ ಅವರನ್ನು ಬಿಟ್ಟುಕೊಟ್ಟನು.
ಕೀರ್ತನೆಗಳು 106 : 42 (ERVKN)
ಶತ್ರುಗಳು ಅವರನ್ನು ತಮ್ಮ ಅಧೀನದಲ್ಲಿಟ್ಟುಕೊಂಡು ಅವರ ಜೀವಿತವನ್ನು ಸಂಕಷ್ಟಕ್ಕೆ ಗುರಿಮಾಡಿದರು.
ಕೀರ್ತನೆಗಳು 106 : 43 (ERVKN)
ಆತನು ತನ್ನ ಜನರನ್ನು ಅನೇಕ ಸಲ ರಕ್ಷಿಸಿದರೂ ಅವರು ಆತನಿಗೆ ವಿರೋಧವಾಗಿ ತಿರುಗಿ ತಮ್ಮ ಇಷ್ಟಾನುಸಾರವಾಗಿ ಮಾಡಿದರು. ಅವರು ಅನೇಕ, ಅನೇಕ ಕೆಟ್ಟಕಾರ್ಯಗಳನ್ನು ಮಾಡಿದರು.
ಕೀರ್ತನೆಗಳು 106 : 44 (ERVKN)
ಆದರೆ ಅವರು ಆಪತ್ತಿನಲ್ಲಿದ್ದಾಗಲೆಲ್ಲಾ ದೇವರಿಗೆ ಮೊರೆಯಿಟ್ಟರು; ಆತನು ಅವರ ಪ್ರಾರ್ಥನೆಗಳಿಗೆ ಸದುತ್ತರವನ್ನು ದಯಪಾಲಿಸಿದನು.
ಕೀರ್ತನೆಗಳು 106 : 45 (ERVKN)
ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಂಡನು. ತನ್ನ ಮಹಾಪ್ರೀತಿಯಿಂದ ಅವರನ್ನು ಸಂತೈಸಿದನು.
ಕೀರ್ತನೆಗಳು 106 : 46 (ERVKN)
ಅನ್ಯಜನಾಂಗಗಳು ಆತನ ಜನರನ್ನು ಸೆರೆಯಾಳುಗಳನ್ನಾಗಿ ಎಳೆದೊಯ್ದರು. ಅನ್ಯಜನಾಂಗಗಳು ತನ್ನ ಜನರಿಗೆ ದಯೆತೋರುವಂತೆ ಆತನು ಮಾಡಿದನು.
ಕೀರ್ತನೆಗಳು 106 : 47 (ERVKN)
ನಮ್ಮ ದೇವರಾದ ಯೆಹೋವನು ನಮ್ಮನ್ನು ರಕ್ಷಿಸಿದನು! ಅನ್ಯಜನಾಂಗಗಳಿಂದ ನಮ್ಮನ್ನು ಬಿಡಿಸಿಕೊಂಡು ಬಂದನು. ಆಗ ನಾವು ಆತನ ಪವಿತ್ರ ಹೆಸರನ್ನು ಕೊಂಡಾಡುವುದಕ್ಕೂ ಆತನನ್ನು ಸಂಕೀರ್ತಿಸುವುದಕ್ಕೂ ಸಾಧ್ಯವಾಯಿತು.
ಕೀರ್ತನೆಗಳು 106 : 48 (ERVKN)
ಇಸ್ರೇಲಿನ ದೇವರಾದ ಯೆಹೋವನನ್ನು ಕೊಂಡಾಡಿರಿ. ಆತನು ಯಾವಾಗಲೂ ಇದ್ದವನೂ ಎಂದೆಂದಿಗೂ ಇರುವಾತನೂ ಆಗಿದ್ದಾನೆ. “ಆಮೆನ್! ಯೆಹೋವನಿಗೆ ಸ್ತೋತ್ರವಾಗಲಿ!” ಎಂದು ಜನರೆಲ್ಲರೂ ಹೇಳಿದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48

BG:

Opacity:

Color:


Size:


Font: