ಕೀರ್ತನೆಗಳು 107 : 1 (ERVKN)
ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನು ಒಳ್ಳೆಯವನು! ಆತನ ಪ್ರೀತಿ ಶಾಶ್ವತವಾದದ್ದು!
ಕೀರ್ತನೆಗಳು 107 : 2 (ERVKN)
ಯೆಹೋವನಿಂದ ರಕ್ಷಿಸಲ್ಪಟ್ಟ ಪ್ರತಿಯೊಬ್ಬರೂ ಆತನಿಗೆ ಕೃತಜ್ಞತಾಸ್ತುತಿ ಮಾಡಲಿ. ಯೆಹೋವನು ಅವರನ್ನು ವೈರಿಗಳಿಂದ ಬಿಡಿಸಿದನು.
ಕೀರ್ತನೆಗಳು 107 : 3 (ERVKN)
ಯೆಹೋವನು ತನ್ನ ಜನರನ್ನು ಅನೇಕ ದೇಶಗಳಿಂದ ಒಟ್ಟುಗೂಡಿಸಿದನು; ಪೂರ್ವಪಶ್ಚಿಮಗಳಿಂದಲೂ ಉತ್ತರ ದಕ್ಷಿಣಗಳಿಂದಲೂ ಬರಮಾಡಿದನು.
ಕೀರ್ತನೆಗಳು 107 : 4 (ERVKN)
ಅವರಲ್ಲಿ ಕೆಲವರು ಮರುಭೂಮಿಯಲ್ಲಿ ಅಲೆದಾಡಿದರು. ತಾವು ನೆಲೆಸತಕ್ಕ ಪಟ್ಟಣಕ್ಕಾಗಿ ಅವರು ಹುಡುಕಿದರೂ ಅದು ಅವರಿಗೆ ಕಾಣಲಿಲ್ಲ.
ಕೀರ್ತನೆಗಳು 107 : 5 (ERVKN)
ಅವರು ಹಸಿವೆಯಿಂದಲೂ ಬಾಯಾರಿಕೆಯಿಂದಲೂ ಬಲಹೀನರಾಗತೊಡಗಿದರು.
ಕೀರ್ತನೆಗಳು 107 : 6 (ERVKN)
ಆಗ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಎಲ್ಲಾ ಆಪತ್ತುಗಳಿಂದ ರಕ್ಷಿಸಿದನು.
ಕೀರ್ತನೆಗಳು 107 : 7 (ERVKN)
ಅವರು ನೆಲಸತಕ್ಕ ಪಟ್ಟಣಕ್ಕೆ ದೇವರು ಅವರನ್ನು ನೇರವಾಗಿ ನಡೆಸಿದನು.
ಕೀರ್ತನೆಗಳು 107 : 8 (ERVKN)
ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
ಕೀರ್ತನೆಗಳು 107 : 9 (ERVKN)
ಆತನು ಬಾಯರಿದವರನ್ನು ನೀರಿನಿಂದಲೂ ಹಸಿದವರನ್ನು ಮೃಷ್ಟಾನ್ನದಿಂದಲೂ ತೃಪ್ತಿಗೊಳಿಸುವನು.
ಕೀರ್ತನೆಗಳು 107 : 10 (ERVKN)
ದೇವಜನರಲ್ಲಿ ಕೆಲವರು ಸೆರೆಯಾಳುಗಳಾಗಿದ್ದರು; ಕಾರ್ಗತ್ತಲೆಯ ಸೆರೆಮನೆಗಳಲ್ಲಿ ಬಂಧಿತರಾಗಿದ್ದರು.
ಕೀರ್ತನೆಗಳು 107 : 11 (ERVKN)
ಯಾಕೆಂದರೆ ಅವರು ಯೆಹೋವನ ಆಜ್ಞೆಗಳಿಗೆ ವಿರೋಧವಾಗಿ ದಂಗೆ ಎದ್ದರು. ಮಹೋನ್ನತನಾದ ದೇವರ ಉಪದೇಶವನ್ನು ತಿರಸ್ಕರಿಸಿದರು.
ಕೀರ್ತನೆಗಳು 107 : 12 (ERVKN)
ಅವರ ಕಾರ್ಯಗಳ ನಿಮಿತ್ತವೇ ದೇವರು ಅವರ ಜೀವನವನ್ನು ಸಂಕಷ್ಟಕ್ಕೆ ಒಳಪಡಿಸಿದನು.
ಅವರು ಎಡವಿಬಿದ್ದರು, ಅವರಿಗೆ ಸಹಾಯಮಾಡಲು ಯಾರೂ ಇರಲಲ್ಲ.
ಕೀರ್ತನೆಗಳು 107 : 13 (ERVKN)
ಅವರು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟರು. ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.
ಕೀರ್ತನೆಗಳು 107 : 14 (ERVKN)
ಆತನು ಅವರನ್ನು ಕಾರ್ಗತ್ತಲೆಯ ಸೆರೆಮನೆಗಳಿಂದ ಹೊರತಂದನು; ಕಟ್ಟಿದ ಹಗ್ಗಗಳನ್ನು ಕಿತ್ತುಹಾಕಿದನು.
ಕೀರ್ತನೆಗಳು 107 : 15 (ERVKN)
ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
ಕೀರ್ತನೆಗಳು 107 : 16 (ERVKN)
ನಮ್ಮ ಶತ್ರುಗಳನ್ನು ಸೋಲಿಸಲು ದೇವರು ನಮಗೆ ಸಹಾಯಮಾಡುವನು. ಅವರ ತಾಮ್ರದ ಬಾಗಿಲುಗಳನ್ನು ಆತನು ಮುರಿದುಹಾಕಬಲ್ಲನು. ಅವರ ಬಾಗಿಲುಗಳ ಮೇಲಿರುವ ಕಬ್ಬಿಣದ ಸರಳುಗಳನ್ನು ಆತನು ನುಚ್ಚುನೂರು ಮಾಡಬಲ್ಲನು.
ಕೀರ್ತನೆಗಳು 107 : 17 (ERVKN)
ಕೆಲವರು ತಮ್ಮ ಪಾಪಗಳಿಂದಲೂ ದೋಷಗಳಿಂದಲೂ ಮೂಢರಾದರು.
ಕೀರ್ತನೆಗಳು 107 : 18 (ERVKN)
ಆ ಜನರು ಊಟವನ್ನು ನಿರಾಕರಿಸಿದ್ದರಿಂದ ಮರಣಾವಸ್ಥೆಗೆ ಬಂದರು.
ಕೀರ್ತನೆಗಳು 107 : 19 (ERVKN)
ಅವರು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟರು. ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.
ಕೀರ್ತನೆಗಳು 107 : 20 (ERVKN)
ಆತನು ಆಜ್ಞಾಪಿಸಲು ಜನರು ಗುಣಹೊಂದಿದರು. ಸಮಾಧಿಯಿಂದ ತಪ್ಪಿಸಿಕೊಂಡರು.
ಕೀರ್ತನೆಗಳು 107 : 21 (ERVKN)
ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
ಕೀರ್ತನೆಗಳು 107 : 22 (ERVKN)
ಯೆಹೋವನ ಕಾರ್ಯಗಳಿಗೆ ಕೃತಜ್ಞತಾ ಯಜ್ಞಗಳನ್ನು ಅರ್ಪಿಸಿರಿ. ಆತನ ಕಾರ್ಯಗಳ ಬಗ್ಗೆ ಹರ್ಷದಿಂದ ತಿಳಿಸಿರಿ.
ಕೀರ್ತನೆಗಳು 107 : 23 (ERVKN)
ಕೆಲವರು ತಮ್ಮ ಉದ್ಯೋಗಗಳ ನಿಮಿತ್ತ ಸಮುದ್ರಯಾನ ಮಾಡಿದರು.
ಕೀರ್ತನೆಗಳು 107 : 24 (ERVKN)
ಯೆಹೋವನು ಮಾಡಬಲ್ಲ ಕಾರ್ಯಗಳನ್ನು ಅವರು ನೋಡಿದರು. ಆತನು ಸಮುದ್ರದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಅವರು ಕಣ್ಣಾರೆ ಕಂಡರು.
ಕೀರ್ತನೆಗಳು 107 : 25 (ERVKN)
ಆತನು ಆಜ್ಞಾಪಿಸಲು ಬಲವಾದ ಗಾಳಿ ಬೀಸತೊಡಗಿತು; ಅಲೆಗಳು ದೊಡ್ಡದಾಗತೊಡಗಿದವು.
ಕೀರ್ತನೆಗಳು 107 : 26 (ERVKN)
ಅಲೆಗಳು ಆಕಾಶದಷ್ಟು ಎತ್ತರವಾಗಿದ್ದವು. ಭಯಂಕರವಾದ ಬಿರುಗಾಳಿಯಿಂದ ಅವರು ಭಯಗೊಂಡರು.
ಕೀರ್ತನೆಗಳು 107 : 27 (ERVKN)
ಅವರು ಅಮಲೇರಿದವರಂತೆ ಎಡವಿಬೀಳತೊಡಗಿದರು; ನಾವಿಕರಾಗಿದ್ದ ಅವರ ಕೌಶಲ್ಯವು ನಿಷ್ಪ್ರಯೋಜಕವಾಯಿತು.
ಕೀರ್ತನೆಗಳು 107 : 28 (ERVKN)
ಆಗ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.
ಕೀರ್ತನೆಗಳು 107 : 29 (ERVKN)
ಆತನು ಬಿರುಗಾಳಿಯನ್ನು ನಿಲ್ಲಿಸಿ ಅಲೆಗಳನ್ನು ಶಾಂತಗೊಳಿಸಿದನು.
ಕೀರ್ತನೆಗಳು 107 : 30 (ERVKN)
ಸಮುದ್ರವು ಶಾಂತವಾದದ್ದರಿಂದ ನಾವಿಕರು ಬಹು ಸಂತೋಷಪಟ್ಟರು. ಅವರು ತಲುಪಬೇಕಿದ್ದ ಸ್ಥಳಕ್ಕೆ ಆತನು ಅವರನ್ನು ಸುರಕ್ಷಿತವಾಗಿ ನಡೆಸಿದನು.
ಕೀರ್ತನೆಗಳು 107 : 31 (ERVKN)
ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ.
ಕೀರ್ತನೆಗಳು 107 : 32 (ERVKN)
ಆತನನ್ನು ಮಹಾಸಭೆಯಲ್ಲಿ ಸ್ತುತಿಸಿರಿ. ಹಿರಿಯರ ಸಭೆಯಲ್ಲಿ ಆತನನ್ನು ಕೊಂಡಾಡಿರಿ.
ಕೀರ್ತನೆಗಳು 107 : 33 (ERVKN)
ಆತನು ನದಿಗಳನ್ನು ಮರಳುಗಾಡನ್ನಾಗಿ ಮಾರ್ಪಡಿಸಿದನು; ಹರಿಯುವ ಒರತೆಗಳನ್ನು ತಡೆದು ನಿಲ್ಲಿಸಿದನು.
ಕೀರ್ತನೆಗಳು 107 : 34 (ERVKN)
ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.
ಕೀರ್ತನೆಗಳು 107 : 35 (ERVKN)
ಆತನು ಮರಳುಗಾಡನ್ನು ಸರೋವರಗಳುಳ್ಳ ನಾಡನ್ನಾಗಿ ಪರಿವರ್ತಿಸಿದನು; ಒಣನೆಲದಿಂದ ನೀರಿನ ಒರತೆಗಳನ್ನು ಹರಿಯಮಾಡಿದನು.
ಕೀರ್ತನೆಗಳು 107 : 36 (ERVKN)
ಆತನು ಹಸಿದವರನ್ನು ಒಳ್ಳೆಯ ನಾಡಿಗೆ ನಡೆಸಿದನು. ಅವರು ಅಲ್ಲಿ ನೆಲೆಸಿ ಪಟ್ಟಣವನ್ನು ಕಟ್ಟಿದರು.
ಕೀರ್ತನೆಗಳು 107 : 37 (ERVKN)
ಅವರು ಹೊಲಗಳಲ್ಲಿ ಬೀಜ ಬಿತ್ತಿ ತೋಟಗಳಲ್ಲಿ ದ್ರಾಕ್ಷಾಲತೆಗಳನ್ನು ನೆಟ್ಟು ಒಳ್ಳೆಯ ಸುಗ್ಗಿಗಳನ್ನು ಪಡೆದರು.
ಕೀರ್ತನೆಗಳು 107 : 38 (ERVKN)
ಆತನ ಆಶೀರ್ವಾದದಿಂದ ಅವರ ಕುಟುಂಬಗಳು ವೃದ್ಧಿಯಾದವು. ಅವರ ಪಶುಗಳು ಅಸಂಖ್ಯಾತಗೊಂಡವು.
ಕೀರ್ತನೆಗಳು 107 : 39 (ERVKN)
ವಿಪತ್ತುಗಳಿಂದಲೂ ತೊಂದರೆಗಳಿಂದಲೂ ಅವರ ಕುಟುಂಬಗಳು ಚಿಕ್ಕದಾಗಿದ್ದವು; ಬಲಹೀನವಾಗಿದ್ದವು.
ಕೀರ್ತನೆಗಳು 107 : 40 (ERVKN)
ಆತನು ಅವರ ನಾಯಕರುಗಳಿಗೆ ಅವಮಾನ ಮಾಡಿದನು; ದಾರಿಗಳಿಲ್ಲದ ಅರಣ್ಯದಲ್ಲಿ ಅಲೆದಾಡುವಂತೆ ಅವರನ್ನು ತೊರೆದುಬಿಟ್ಟನು.
ಕೀರ್ತನೆಗಳು 107 : 41 (ERVKN)
ಬಳಿಕ ಆತನು ದೀನರನ್ನು ಅವರ ಸಂಕಟದಿಂದ ಬಿಡಿಸಿದನು. ಈಗ ಅವರ ಕುಟುಂಬಗಳು ಕುರಿಮಂದೆಗಳಂತೆ ದೊಡ್ಡದಾದವು.
ಕೀರ್ತನೆಗಳು 107 : 42 (ERVKN)
ಒಳ್ಳೆಯವರು ಇದನ್ನು ಕಂಡು ಸಂತೋಷಪಡುವರು. ದುಷ್ಟರು ಇದನ್ನು ಕಂಡು ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು.
ಕೀರ್ತನೆಗಳು 107 : 43 (ERVKN)
ಜ್ಞಾನಿಯು ಇವುಗಳನ್ನು ನೆನಪು ಮಾಡಿಕೊಂಡು ದೇವರ ನಿಜಪ್ರೀತಿಯನ್ನು ಅರ್ಥಮಾಡಿಕೊಳ್ಳುವನು.
❮
❯