ಕೀರ್ತನೆಗಳು 11 : 1 (ERVKN)
ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ?
ಕೀರ್ತನೆಗಳು 11 : 2 (ERVKN)
ದುಷ್ಟರು ಬೇಟೆಗಾರರಂತಿದ್ದಾರೆ; ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು; ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು.
ಕೀರ್ತನೆಗಳು 11 : 3 (ERVKN)
ಅಸ್ತಿವಾರಗಳೇ ನಾಶವಾಗುತ್ತಿದ್ದರೆ ನೀತಿವಂತನು ಏನು ಮಾಡಲಾದೀತು?
ಕೀರ್ತನೆಗಳು 11 : 4 (ERVKN)
ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು
ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ. ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ.
ಕೀರ್ತನೆಗಳು 11 : 5 (ERVKN)
ಯೆಹೋವನು ನೀತಿವಂತರಿಗಾಗಿ ಹುಡುಕುವನು. ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು.
ಕೀರ್ತನೆಗಳು 11 : 6 (ERVKN)
ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ.
ಕೀರ್ತನೆಗಳು 11 : 7 (ERVKN)
ಯಾಕೆಂದರೆ ಯೆಹೋವನು ನೀತಿಸ್ವರೂಪನಾಗಿದ್ದಾನೆ; ಆತನು ನ್ಯಾಯವನ್ನು ಪ್ರೀತಿಸುತ್ತಾನೆ. ನೀತಿವಂತರು ಆತನ ಮುಖವನ್ನು ನೋಡುವರು.
❮
❯