ಕೀರ್ತನೆಗಳು 111 : 1 (ERVKN)
ಯೆಹೋವನಿಗೆ ಸ್ತೋತ್ರವಾಗಲಿ! [QBR] ನೀತಿವಂತರ ಸಭೆಯಲ್ಲಿ ನಾನು ಪೂರ್ಣಹೃದಯದಿಂದ [QBR2] ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು. [QBR]
ಕೀರ್ತನೆಗಳು 111 : 2 (ERVKN)
ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು. [QBR2] ಜನರು ಅವುಗಳಲ್ಲಿ ಸಂತೋಷಿಸುತ್ತಾ ಅವುಗಳನ್ನೇ ಧ್ಯಾನಿಸುವರು. [QBR]
ಕೀರ್ತನೆಗಳು 111 : 3 (ERVKN)
ಆತನು ಮಹತ್ವವಾದ ಮತ್ತು ಅದ್ಭುತವಾದ ಕಾರ್ಯಗಳನ್ನು ಮಾಡುವನು. [QBR2] ಆತನ ನೀತಿಯು ಶಾಶ್ವತವಾದದ್ದು. [QBR]
ಕೀರ್ತನೆಗಳು 111 : 4 (ERVKN)
ದೇವರು ಅಮೋಘವಾದ ಕಾರ್ಯಗಳನ್ನು ಮಾಡುವುದರಿಂದ [QBR2] ಆತನ ದಯೆಯನ್ನೂ ಕೃಪೆಯನ್ನೂ ಜ್ಞಾಪಿಸಿಕೊಳ್ಳುತ್ತೇವೆ. [QBR]
ಕೀರ್ತನೆಗಳು 111 : 5 (ERVKN)
ಆತನು ತನ್ನ ಭಕ್ತರಿಗೆ ಆಹಾರವನ್ನು ಒದಗಿಸುವನು; [QBR2] ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು. [QBR]
ಕೀರ್ತನೆಗಳು 111 : 6 (ERVKN)
ಆತನು ಅನ್ಯಜನಾಂಗಗಳ ದೇಶವನ್ನು [QBR2] ತನ್ನ ಜನರಿಗೆ ಕೊಡುವುದರ ಮೂಲಕ ಪ್ರಬಲವಾದ ಕಾರ್ಯಗಳನ್ನು ಮಾಡಿದ್ದಾನೆ. [QBR]
ಕೀರ್ತನೆಗಳು 111 : 7 (ERVKN)
ಆತನ ಪ್ರತಿಯೊಂದು ಕಾರ್ಯವು ಒಳ್ಳೆಯದೂ ನ್ಯಾಯವಾದದ್ದೂ ಆಗಿದೆ. [QBR2] ಆತನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ. [QBR]
ಕೀರ್ತನೆಗಳು 111 : 8 (ERVKN)
ದೇವರ ಆಜ್ಞೆಗಳು ಶಾಶ್ವತವಾಗಿವೆ. [QBR2] ಅವು ಯಥಾರ್ಥವಾಗಿಯೂ ಮತ್ತು ಶುದ್ಧವಾಗಿಯೂ ಇವೆ. [QBR]
ಕೀರ್ತನೆಗಳು 111 : 9 (ERVKN)
ಆತನು ತನ್ನ ಜನರನ್ನು ರಕ್ಷಿಸಿ ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆ. [QBR2] ಆತನ ಹೆಸರು ಅದ್ಭುತವಾಗಿಯೂ ಪರಿಶುದ್ಧವಾಗಿಯೂ ಇದೆ. [QBR]
ಕೀರ್ತನೆಗಳು 111 : 10 (ERVKN)
ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. [QBR2] ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ. [QBR] ಆತನಿಗೆ ಸದಾಕಾಲ ಸ್ತೋತ್ರವಾಗಲಿ. [PE]

1 2 3 4 5 6 7 8 9 10

BG:

Opacity:

Color:


Size:


Font: