ಕೀರ್ತನೆಗಳು 115 : 1 (ERVKN)
ಯೆಹೋವನೇ, ಘನಮಾನಗಳು ನಮ್ಮವಲ್ಲ! ಅವು ನಿನ್ನವೇ. ನಿನ್ನ ಪ್ರೀತಿಯ ನಿಮಿತ್ತವಾಗಿಯೂ ನಂಬಿಗಸ್ತಿಕೆಯ ನಿಮಿತ್ತವಾಗಿಯೂ ಘನಮಾನಗಳು ನಿನಗೇ ಸಲ್ಲತಕ್ಕದ್ದು.
ಕೀರ್ತನೆಗಳು 115 : 2 (ERVKN)
ಅವರ ದೇವರು ಎಲ್ಲಿದ್ದಾನೆಂದು ಜನಾಂಗಗಳು ಯಾಕೆ ಹೇಳಬೇಕು?
ಕೀರ್ತನೆಗಳು 115 : 3 (ERVKN)
ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಬಯಸಿದ್ದನ್ನೆಲ್ಲಾ ಮಾಡುತ್ತಾನೆ.
ಕೀರ್ತನೆಗಳು 115 : 4 (ERVKN)
ಅನ್ಯಜನಾಂಗಗಳ “ದೇವರುಗಳು” ಬೆಳ್ಳಿಬಂಗಾರಗಳಿಂದ ಮಾಡಿದ ವಿಗ್ರಹಗಳಷ್ಟೇ. ಅವುಗಳನ್ನು ಮಾಡಿದವರು ಮನುಷ್ಯರೇ.
ಕೀರ್ತನೆಗಳು 115 : 5 (ERVKN)
ಆ ವಿಗ್ರಹಗಳಿಗೆ ಬಾಯಿಗಳಿವೆ, ಆದರೆ ಮಾತಾಡಲಾರವು. ಕಣ್ಣುಗಳಿವೆ, ಆದರೆ ನೋಡಲಾರವು.
ಕೀರ್ತನೆಗಳು 115 : 6 (ERVKN)
ಕಿವಿಗಳಿವೆ, ಆದರೆ ಕೇಳಲಾರವು. ಮೂಗುಗಳಿವೆ, ಆದರೆ ಮೂಸಲಾರವು.
ಕೀರ್ತನೆಗಳು 115 : 7 (ERVKN)
ಕೈಗಳಿವೆ, ಆದರೆ ಯಾವುದನ್ನೂ ಮುಟ್ಟಲಾರವು. ಕಾಲುಗಳಿವೆ, ಆದರೆ ನಡೆಯಲಾರವು. ಅವುಗಳ ಗಂಟಲುಗಳಿಂದ ಶಬ್ದವೇ ಹೊರಡದು.
ಕೀರ್ತನೆಗಳು 115 : 8 (ERVKN)
ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಟ್ಟಿರುವವರೂ ಅವುಗಳಂತೆಯೇ.
ಕೀರ್ತನೆಗಳು 115 : 9 (ERVKN)
ಇಸ್ರೇಲರೇ, ಯೆಹೋವನಲ್ಲಿ ಭರವಸವಿಡಿರಿ. ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ.
ಕೀರ್ತನೆಗಳು 115 : 10 (ERVKN)
ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ.
ಕೀರ್ತನೆಗಳು 115 : 11 (ERVKN)
ಯೆಹೋವನ ಭಕ್ತರು ಆತನಲ್ಲಿ ಭರವಸವಿಡುವರು, ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ.
ಕೀರ್ತನೆಗಳು 115 : 12 (ERVKN)
ಯೆಹೋವನು ನಮ್ಮನ್ನು ಜ್ಞಾಪಕಮಾಡಿಕೊಂಡು ಆಶೀರ್ವದಿಸುವನು. ಆತನು ಇಸ್ರೇಲನ್ನೂ ಆರೋನನ ಮನೆತನವನ್ನೂ ಆಶೀರ್ವದಿಸುವನು.
ಕೀರ್ತನೆಗಳು 115 : 13 (ERVKN)
ಆತನು ದೊಡ್ಡವರೂ ಚಿಕ್ಕವರೂ ಎಂದೆನ್ನದೆ ತನ್ನ ಭಕ್ತರನ್ನೆಲ್ಲಾ ಆಶೀರ್ವದಿಸುವನು.
ಕೀರ್ತನೆಗಳು 115 : 14 (ERVKN)
ಯೆಹೋವನು ನಿಮ್ಮ ಕುಟುಂಬಗಳನ್ನೂ ನಿಮ್ಮ ಮಕ್ಕಳ ಕುಟುಂಬಗಳನ್ನೂ ಅಭಿವೃದ್ಧಿಪಡಿಸಲಿ.
ಕೀರ್ತನೆಗಳು 115 : 15 (ERVKN)
ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಪರಲೋಕವನ್ನೂ ಭೂಲೋಕವನ್ನೂ ಸೃಷ್ಟಿಮಾಡಿದಾತನು ಆತನೇ.
ಕೀರ್ತನೆಗಳು 115 : 16 (ERVKN)
ಪರಲೋಕವು ಯೆಹೋವನದು. ಆತನು ಭೂಲೋಕವನ್ನು ಮನುಷ್ಯರಿಗೆ ಕೊಟ್ಟನು.
ಕೀರ್ತನೆಗಳು 115 : 17 (ERVKN)
ಸತ್ತುಹೋದವರು ಯೆಹೋವನನ್ನು ಕೊಂಡಾಡುವುದಿಲ್ಲ. ಸಮಾಧಿಯೊಳಗಿರುವವರು ಆತನನ್ನು ಸ್ತುತಿಸುವುದಿಲ್ಲ.
ಕೀರ್ತನೆಗಳು 115 : 18 (ERVKN)
ನಾವಾದರೊ ಯೆಹೋವನನ್ನು ಈಗಲೂ ಯಾವಾಗಲೂ ಸ್ತುತಿಸುವೆವು! ಯೆಹೋವನಿಗೆ ಸ್ತೋತ್ರ!

1 2 3 4 5 6 7 8 9 10 11 12 13 14 15 16 17 18

BG:

Opacity:

Color:


Size:


Font: