ಕೀರ್ತನೆಗಳು 12 : 1 (ERVKN)
ಯೆಹೋವನೇ, ನನ್ನನ್ನು ರಕ್ಷಿಸು! ಒಳ್ಳೆಯವರೆಲ್ಲಾ ಕೊನೆಗೊಂಡರು. ಭೂನಿವಾಸಿಗಳಲ್ಲಿ ನಿಜವಾದ ವಿಶ್ವಾಸಿಗಳು ಉಳಿದೇ ಇಲ್ಲ.
ಕೀರ್ತನೆಗಳು 12 : 2 (ERVKN)
ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.
ಕೀರ್ತನೆಗಳು 12 : 3 (ERVKN)
ಸುಳ್ಳಾಡುವ ಆ ತುಟಿಗಳನ್ನೂ ಕಟ್ಟುಕಥೆಗಳನ್ನು ಹೇಳುವ ಆ ನಾಲಿಗೆಗಳನ್ನೂ ಯೆಹೋವನು ಕತ್ತರಿಸಿಹಾಕಲಿ.
ಕೀರ್ತನೆಗಳು 12 : 4 (ERVKN)
“ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ.
ಕೀರ್ತನೆಗಳು 12 : 5 (ERVKN)
ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ.
ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”
ಕೀರ್ತನೆಗಳು 12 : 6 (ERVKN)
ಯೆಹೋವನ ಮಾತುಗಳು ಬೆಂಕಿಯಲ್ಲಿ ಏಳು ಸಲ ಶುದ್ಧೀಕರಿಸಿದ ಬೆಳ್ಳಿಯಂತೆ ಸತ್ಯವಾಗಿವೆ.
ಕೀರ್ತನೆಗಳು 12 : 7 (ERVKN)
ಯೆಹೋವನೇ, ಅಸಹಾಯಕರನ್ನು ಪರಿಪಾಲಿಸು. ಅವರನ್ನು ಶಾಶ್ವತವಾಗಿ ಸಂರಕ್ಷಿಸು.
ಕೀರ್ತನೆಗಳು 12 : 8 (ERVKN)
ಆ ದುಷ್ಟರು ಪ್ರಮುಖರಂತೆ ವರ್ತಿಸಿದರೂ ಅವರು ಕೇವಲ ನಕಲಿ ಆಭರಣಗಳಂತಿದ್ದಾರೆ.

1 2 3 4 5 6 7 8