ಕೀರ್ತನೆಗಳು 127 : 1 (ERVKN)
ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ.
ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.
ಕೀರ್ತನೆಗಳು 127 : 2 (ERVKN)
ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ.
ಯಾಕೆಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.
ಕೀರ್ತನೆಗಳು 127 : 3 (ERVKN)
ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ.
ಕೀರ್ತನೆಗಳು 127 : 4 (ERVKN)
ಯೌವನಸ್ಥನ ಗಂಡುಮಕ್ಕಳು ಸೈನಿಕನ ಬತ್ತಳಿಕೆಯಲ್ಲಿರುವ ಬಾಣಗಳಂತಿದ್ದಾರೆ.
ಕೀರ್ತನೆಗಳು 127 : 5 (ERVKN)
ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.
❮
❯