ಕೀರ್ತನೆಗಳು 128 : 1 (ERVKN)
ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನ ಚಿತ್ತಾನುಸಾರವಾಗಿ ಜೀವಿಸುವವರೆಲ್ಲರು ಧನ್ಯರಾಗಿದ್ದಾರೆ.
ಕೀರ್ತನೆಗಳು 128 : 2 (ERVKN)
ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು.
ಕೀರ್ತನೆಗಳು 128 : 3 (ERVKN)
ಮನೆಯಲ್ಲಿರುವ ನಿನ್ನ ಹೆಂಡತಿ ಫಲಭರಿತವಾದ ದ್ರಾಕ್ಷಾ ಬಳ್ಳಿಯಂತಿರುವಳು. ಊಟದ ಮೇಜಿನ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ನೀನು ನೆಟ್ಟ ಆಲಿವ್ ಮರಗಳಂತಿರುವರು.
ಕೀರ್ತನೆಗಳು 128 : 4 (ERVKN)
ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಹೀಗೆಯೇ ಆಶೀರ್ವದಿಸುವನು.
ಕೀರ್ತನೆಗಳು 128 : 5 (ERVKN)
ಯೆಹೋವನು ನಿನ್ನನ್ನು ಚೀಯೋನಿನಿಂದ ಆಶೀರ್ವದಿಸಲಿ. ನಿನ್ನ ಜೀವಮಾನವೆಲ್ಲಾ ನೀನು ಜೆರುಸಲೇಮಿನಲ್ಲಿ ಆಶೀರ್ವಾದಗಳನ್ನು ಅನುಭವಿಸುವಂತಾಗಲಿ.
ಕೀರ್ತನೆಗಳು 128 : 6 (ERVKN)
ನೀನು ಜೀವದಿಂದಿದ್ದು ನಿನ್ನ ಮೊಮ್ಮಕ್ಕಳನ್ನು ಕಾಣುವಂತಾಗಲಿ. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.

1 2 3 4 5 6

BG:

Opacity:

Color:


Size:


Font: