ಕೀರ್ತನೆಗಳು 129 : 1 (ERVKN)
“ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು” ಇಸ್ರೇಲೇ, ಆ ಶತ್ರುಗಳ ಬಗ್ಗೆ ನಮಗೆ ಹೇಳು.
ಕೀರ್ತನೆಗಳು 129 : 2 (ERVKN)
“ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು” ಆದರೆ ಅವರೆಂದೂ ಗೆಲ್ಲಲಿಲ್ಲ.
ಕೀರ್ತನೆಗಳು 129 : 3 (ERVKN)
ನನ್ನ ಬೆನ್ನಿನ ಮೇಲೆ ಹೊಡೆದು ಹೊಲವನ್ನು ಉಳುವಂತೆ ಗಾಯ ಮಾಡಿದರು.
ಕೀರ್ತನೆಗಳು 129 : 4 (ERVKN)
ಆದರೆ ನೀತಿಸ್ವರೂಪನಾದ ಯೆಹೋವನು ಹಗ್ಗಗಳನ್ನು ಕತ್ತರಿಸಿ ಆ ದುಷ್ಟರಿಂದ ನನ್ನನ್ನು ಬಿಡುಗಡೆ ಮಾಡಿದನು.
ಕೀರ್ತನೆಗಳು 129 : 5 (ERVKN)
ಚೀಯೋನನ್ನು ದ್ವೇಷಿಸಿದ ಜನರು ಸೋತುಹೋದರು. ಅವರು ಹೋರಾಟವನ್ನು ನಿಲ್ಲಿಸಿ ಓಡಿಹೋದರು.
ಕೀರ್ತನೆಗಳು 129 : 6 (ERVKN)
ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದರು. ಅದು ಬೆಳೆಯುವುದಕ್ಕಿಂತ ಮೊದಲೇ ಒಣಗಿ ಹೋಗುವುದು.
ಕೀರ್ತನೆಗಳು 129 : 7 (ERVKN)
ಅದನ್ನು ಕೊಯ್ಯುವವನ ಹಿಡಿಯೂ ತುಂಬುವುದಿಲ್ಲ ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.
ಕೀರ್ತನೆಗಳು 129 : 8 (ERVKN)
ಅವರ ಸಮೀಪದಲ್ಲಿ ನಡೆದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ” ಎಂದು ಹೇಳುವುದಿಲ್ಲ. “ಯೆಹೋವನ ಹೆಸರಿನಲ್ಲಿ ನಿಮಗೆ ಆಶೀರ್ವಾದವಾಗಲಿ” ಎಂದು ಜನರು ಅವರನ್ನು ಆಶೀರ್ವದಿಸುವುದಿಲ್ಲ.

1 2 3 4 5 6 7 8

BG:

Opacity:

Color:


Size:


Font: