ಕೀರ್ತನೆಗಳು 13 : 1 (ERVKN)
ಯೆಹೋವನೇ, ಇನ್ನೆಷ್ಟುಕಾಲ ಮರೆತಿರುವೆ? ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ? ಇನ್ನೆಷ್ಟುಕಾಲ ನನಗೆ ಮರೆಯಾಗಿರುವೆ?
ಕೀರ್ತನೆಗಳು 13 : 2 (ERVKN)
ನಾನು ದುಃಖಕ್ರಾಂತನಾಗಿ ಇನ್ನೆಷ್ಟುಕಾಲ ಆಲೋಚಿಸುತ್ತಿರಬೇಕು? ನನ್ನ ವೈರಿಗಳು ಇನ್ನೆಷ್ಟುಕಾಲ ನನ್ನ ಮೇಲೆ ಜಯಗಳಿಸಬೇಕು?
ಕೀರ್ತನೆಗಳು 13 : 3 (ERVKN)
ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು. ಇಲ್ಲವಾದರೆ, ನಾನು ಸಾಯಲೇಬೇಕಾಗುವುದು!
ಕೀರ್ತನೆಗಳು 13 : 4 (ERVKN)
ಆಗ ವೈರಿಯು, “ನಾನು ಅವನನ್ನು ಸೋಲಿಸಿದೆ!” ಎಂದು ಹೇಳುತ್ತಾ ನನ್ನ ಬೀಳುವಿಕೆಯನ್ನು ಕಂಡು ಸಂತೋಷಪಡುವನು.
ಕೀರ್ತನೆಗಳು 13 : 5 (ERVKN)
ನಾನಂತೂ ನಿನ್ನ ಶಾಶ್ವತವಾದ ಪ್ರೀತಿಯಲ್ಲಿ ಭರವಸೆಯಿಟ್ಟಿದ್ದೇನೆ. ನಿನ್ನ ರಕ್ಷಣೆಯ ನಿಮಿತ್ತ ನನ್ನ ಹೃದಯವು ಹರ್ಷಿಸುವುದು.
ಕೀರ್ತನೆಗಳು 13 : 6 (ERVKN)
ಯೆಹೋವನು ಮಹೋಪಕಾರಗಳನ್ನು ಮಾಡಿರುವುದರಿಂದ ಆತನಿಗೆ ಹರ್ಷಗೀತೆಗಳನ್ನು ಹಾಡುವೆನು.
❮
❯