ಕೀರ್ತನೆಗಳು 130 : 1 (ERVKN)
ಯೆಹೋವನೇ, ಮಹಾ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದೇನೆ; ಸಹಾಯಕ್ಕಾಗಿ ನಿನ್ನನ್ನೇ ಕೂಗಿಕೊಳ್ಳುತ್ತಿದ್ದೇನೆ.
ಕೀರ್ತನೆಗಳು 130 : 2 (ERVKN)
ನನ್ನ ಒಡೆಯನೇ, ನನಗೆ ಕಿವಿಗೊಡು. ನನ್ನ ಮೊರೆಯನ್ನು ಆಲಿಸು.
ಕೀರ್ತನೆಗಳು 130 : 3 (ERVKN)
ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ ಒಬ್ಬನೂ ಜೀವಂತವಾಗಿ ಉಳಿಯಲಾರ.
ಕೀರ್ತನೆಗಳು 130 : 4 (ERVKN)
ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು.
ಕೀರ್ತನೆಗಳು 130 : 5 (ERVKN)
ನಾನು ಯೆಹೋವನ ಸಹಾಯಕ್ಕಾಗಿ ಕಾಯುತ್ತಿದ್ದೇನೆ. ನನ್ನ ಪ್ರಾಣವು ಆತನಿಗಾಗಿ ಕಾದುಕೊಂಡಿರುವುದು. ಆತನು ನುಡಿಯನ್ನು ನಂಬಿಕೊಂಡಿದ್ದೇನೆ.
ಕೀರ್ತನೆಗಳು 130 : 6 (ERVKN)
ನಾನು ನನ್ನ ಒಡೆಯನಿಗಾಗಿ ಮುಂಜಾನೆಗೋಸ್ಕರ ಎದುರು ನೋಡುತ್ತಿರುವ ಕಾವಲುಗಾರರಂತೆ ನಿರೀಕ್ಷಿಸುತ್ತಿದ್ದೇನೆ.
ಕೀರ್ತನೆಗಳು 130 : 7 (ERVKN)
ಇಸ್ರೇಲೇ, ಯೆಹೋವನಲ್ಲಿ ಭರವಿಸವಿಡು. ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು.
ಕೀರ್ತನೆಗಳು 130 : 8 (ERVKN)
ಆತನೇ ಇಸ್ರೇಲರ ಎಲ್ಲಾ ಪಾಪಗಳನ್ನು ಕ್ಷಮಿಸುವನು.

1 2 3 4 5 6 7 8

BG:

Opacity:

Color:


Size:


Font: