ಕೀರ್ತನೆಗಳು 135 : 1 (ERVKN)
ಯೆಹೋವನಿಗೆ ಸ್ತೋತ್ರವಾಗಲಿ! ಯೆಹೋವನ ಸೇವಕರೇ, ಆತನ ಹೆಸರನ್ನು ಸ್ತುತಿಸಿರಿ!
ಕೀರ್ತನೆಗಳು 135 : 2 (ERVKN)
ಯೆಹೋವನ ಆಲಯದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ! ದೇವಾಲಯದ ಅಂಗಳದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ!
ಕೀರ್ತನೆಗಳು 135 : 3 (ERVKN)
ಯೆಹೋವನಿಗೆ ಸ್ತೋತ್ರ ಮಾಡಿರಿ, ಯಾಕೆಂದರೆ ಆತನು ಒಳ್ಳೆಯವನು. ಆತನ ಹೆಸರನ್ನು ಸ್ತುತಿಸಿರಿ, ಅದು ಮನೋಹರವಾಗಿದೆ.
ಕೀರ್ತನೆಗಳು 135 : 4 (ERVKN)
ಯೆಹೋವನು ಯಾಕೋಬನನ್ನು ಆರಿಸಿಕೊಂಡನು. ಇಸ್ರೇಲ್, ಆತನಿಗೆ ಸೇರಿದ್ದು.
ಕೀರ್ತನೆಗಳು 135 : 5 (ERVKN)
ಯೆಹೋವನು ಮಹೋನ್ನತನೆಂದೂ ನಮ್ಮ ಒಡೆಯನು ಬೇರೆಲ್ಲಾ ದೇವರುಗಳಿಗಿಂತ ಮಹೋನ್ನತನೆಂದೂ ನಮಗೆ ಗೊತ್ತಿದೆ.
ಕೀರ್ತನೆಗಳು 135 : 6 (ERVKN)
ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು.
ಕೀರ್ತನೆಗಳು 135 : 7 (ERVKN)
ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏಳಮಾಡುವನು; ಮಿಂಚನ್ನೂ ಮಳೆಯನ್ನೂ ಬರಮಾಡುವನು; ಗಾಳಿಯನ್ನು ಬೀಸಮಾಡುವನು.
ಕೀರ್ತನೆಗಳು 135 : 8 (ERVKN)
ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ನಾಶಮಾಡಿದನು.
ಕೀರ್ತನೆಗಳು 135 : 9 (ERVKN)
ಆತನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ಫರೋಹನಿಗೂ ಅವನ ಸೇವಕರುಗಳಿಗೂ ವಿರೋಧವಾಗಿ ಮಾಡಿದನು.
ಕೀರ್ತನೆಗಳು 135 : 10 (ERVKN)
ಆತನು ಅನೇಕ ಜನಾಂಗಗಳನ್ನು ಸೋಲಿಸಿದನು. ಬಲಿಷ್ಠ ರಾಜರುಗಳನ್ನು ಕೊಂದುಹಾಕಿದನು.
ಕೀರ್ತನೆಗಳು 135 : 11 (ERVKN)
ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು; ಬಾಷಾನಿನ ರಾಜನಾದ ಓಗನನ್ನೂ ಕಾನಾನ್ ದೇಶದ ಎಲ್ಲಾ ಜನಾಂಗಗಳನ್ನೂ ಸೋಲಿಸಿದನು.
ಕೀರ್ತನೆಗಳು 135 : 12 (ERVKN)
ಆತನು ಅವರ ದೇಶವನ್ನು ತನ್ನ ಜನರಾದ ಇಸ್ರೇಲರಿಗೆ ಕೊಟ್ಟನು.
ಕೀರ್ತನೆಗಳು 135 : 13 (ERVKN)
ಯೆಹೋವನೇ, ನೀನು ಸದಾಕಾಲ ಪ್ರಸಿದ್ಧನಾಗಿರುವೆ! ಯೆಹೋವನೇ, ಜನರು ನಿನ್ನನ್ನು ಸದಾಕಾಲ ನೆನಸಿಕೊಳ್ಳುವರು.
ಕೀರ್ತನೆಗಳು 135 : 14 (ERVKN)
ಯೆಹೋವನು ಜನಾಂಗಗಳನ್ನು ದಂಡಿಸಿದನು. ತನ್ನ ಜನರಿಗಾದರೋ ಕರುಣೆಯುಳ್ಳವನಾಗಿದ್ದನು.
ಕೀರ್ತನೆಗಳು 135 : 15 (ERVKN)
ಅನ್ಯಜನರ ದೇವರುಗಳು ಮನುಷ್ಯರಿಂದಲೇ ಮಾಡಲ್ಪಟ್ಟ ಬೆಳ್ಳಿಬಂಗಾರಗಳ ಪ್ರತಿಮೆಗಳಾಗಿದ್ದವು.
ಕೀರ್ತನೆಗಳು 135 : 16 (ERVKN)
ಆ ಪ್ರತಿಮೆಗಳಿಗೆ ಬಾಯಿಗಳಿದ್ದರೂ ಮಾತಾಡಲಾಗಲಿಲ್ಲ; ಕಣ್ಣುಗಳಿದ್ದರೂ ನೋಡಲಾಗಲಿಲ್ಲ;
ಕೀರ್ತನೆಗಳು 135 : 17 (ERVKN)
ಆ ಪ್ರತಿಮೆಗಳಿಗೆ ಕಿವಿಗಳಿದ್ದರೂ ಕೇಳಲಾಗಲಿಲ್ಲ; ಮೂಗುಗಳಿದ್ದರೂ ಮೂಸಿನೋಡಲಾಗಲಿಲ್ಲ;
ಕೀರ್ತನೆಗಳು 135 : 18 (ERVKN)
ಆ ಪ್ರತಿಮೆಗಳನ್ನು ಮಾಡಿದವರೂ ಅವುಗಳಂತೆಯೇ ಆಗುವರು! ಯಾಕೆಂದರೆ, ಅವರು ಸಹಾಯಕ್ಕಾಗಿ ಆ ಪ್ರತಿಮೆಗಳನ್ನೇ ನಂಬಿಕೊಂಡಿದ್ದಾರೆ.
ಕೀರ್ತನೆಗಳು 135 : 19 (ERVKN)
ಇಸ್ರೇಲಿನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ. ಆರೋನನ ಮನೆತನದವರೇ, ಯೆಹೋವನನ್ನು ಸ್ತುತಿಸಿರಿ.
ಕೀರ್ತನೆಗಳು 135 : 20 (ERVKN)
ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ! ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ.
ಕೀರ್ತನೆಗಳು 135 : 21 (ERVKN)
ಯೆಹೋವನಿಗೆ ಚೀಯೋನಿನಿಂದಲೂ ಆತನ ವಾಸಸ್ಥಾನವಾದ ಜೆರುಸಲೇಮಿನಿಂದಲೂ ಸ್ತೋತ್ರವಾಗಲಿ! ಯೆಹೋವನಿಗೆ ಸ್ತೋತ್ರವಾಗಲಿ!
❮
❯
1
2
3
4
5
6
7
8
9
10
11
12
13
14
15
16
17
18
19
20
21