ಕೀರ್ತನೆಗಳು 137 : 1 (ERVKN)
ನಾವು ಬಾಬಿಲೋನ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು ಚೀಯೋನನ್ನು ನೆನಸಿಕೊಳ್ಳುತ್ತಾ ಅತ್ತೆವು.
ಕೀರ್ತನೆಗಳು 137 : 2 (ERVKN)
ಸಮೀಪದಲ್ಲಿದ್ದ ನೀರವಂಜಿ ಮರಗಳಿಗೆ ನಾವು ನಮ್ಮ ಹಾರ್ಪ್ವಾದ್ಯಗಳನ್ನು ತೂಗುಹಾಕಿದೆವು.
ಕೀರ್ತನೆಗಳು 137 : 3 (ERVKN)
ನಮ್ಮನ್ನು ಸೆರೆಹಿಡಿದಿದ್ದ ಜನರು ಬಾಬಿಲೋನಿನಲ್ಲಿ ನಮಗೆ ಚೀಯೋನಿನ ಕುರಿತು ಹರ್ಷಗೀತೆಗಳನ್ನು ಹಾಡಲು ಹೇಳಿದರು.
ಕೀರ್ತನೆಗಳು 137 : 4 (ERVKN)
ಆದರೆ ಪರದೇಶದಲ್ಲಿ ಯೆಹೋವನ ಹಾಡುಗಳನ್ನು ನಾವು ಹಾಡುವಂತಿಲ್ಲ!
ಕೀರ್ತನೆಗಳು 137 : 5 (ERVKN)
ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡನ್ನು ಬಾರಿಸದಂತಾಗಲಿ.
ಕೀರ್ತನೆಗಳು 137 : 6 (ERVKN)
ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡಲು ಶಕ್ತನಾಗದಂತಾಗಲಿ.
ಜೆರುಸಲೇಮೇ, ನಿನ್ನ ವಿಷಯದಲ್ಲೇ ನಾನು ಅತ್ಯಾನಂದಪಡುವೆನೆಂದು ಪ್ರಮಾಣ ಮಾಡುವೆ.
ಕೀರ್ತನೆಗಳು 137 : 7 (ERVKN)
ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ
ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.
ಕೀರ್ತನೆಗಳು 137 : 8 (ERVKN)
ಬಾಬಿಲೋನೇ, ನೀನು ನಾಶವಾಗುವೆ! ನಿನಗೆ ತಕ್ಕ ದಂಡನೆಯನ್ನು ಕೊಡುವವನು ಧನ್ಯನು. ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನು ಧನ್ಯನು.
ಕೀರ್ತನೆಗಳು 137 : 9 (ERVKN)
ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಧನ್ಯನು.
❮
❯