ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು. [QBR2] ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು. [QBR]
ಕೀರ್ತನೆಗಳು 138 : 2 (ERVKN)
ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. [QBR2] ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. [QBR] ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ. [QBR]
ಕೀರ್ತನೆಗಳು 138 : 3 (ERVKN)
ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ [QBR2] ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ.
ಕೀರ್ತನೆಗಳು 138 : 4 (ERVKN)
ಯೆಹೋವನೇ, ಭೂರಾಜರುಗಳೆಲ್ಲಾ ನಿನ್ನ ನುಡಿಗಳನ್ನು ಕೇಳಿ [QBR2] ನಿನ್ನನ್ನು ಕೊಂಡಾಡಬೇಕೆಂಬುದು ನನ್ನ ಅಪೇಕ್ಷೆ. [QBR]
ಕೀರ್ತನೆಗಳು 138 : 5 (ERVKN)
ಅವರೆಲ್ಲರೂ ಯೆಹೋವನ ಮಾರ್ಗವನ್ನು ಹಾಡಿ ಕೊಂಡಾಡುವರು; [QBR2] ಯಾಕೆಂದರೆ ಯೆಹೋವನ ಮಹಿಮೆಯು ಮಹತ್ವವಾದದ್ದು. [QBR]
ಕೀರ್ತನೆಗಳು 138 : 6 (ERVKN)
ಯೆಹೋವನೇ ಮಹೋನ್ನತನು. [QBR2] ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. [QBR] ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ. [QBR2] ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ. [QBR]
ಕೀರ್ತನೆಗಳು 138 : 7 (ERVKN)
ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. [QBR2] ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು. [QBR]
ಕೀರ್ತನೆಗಳು 138 : 8 (ERVKN)
ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು. [QBR2] ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು. [QBR] ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ! [PE]