ಕೀರ್ತನೆಗಳು 140 : 1 (ERVKN)
ಯೆಹೋವನೇ, ಕೆಡುಕರಿಂದ ನನ್ನನ್ನು ರಕ್ಷಿಸು. ಕ್ರೂರಿಗಳಿಂದ ನನ್ನನ್ನು ಕಾಪಾಡು.
ಕೀರ್ತನೆಗಳು 140 : 2 (ERVKN)
ಅವರು ಕೇಡುಮಾಡಬೇಕೆಂದಿದ್ದಾರೆ. ಅವರು ಯಾವಾಗಲೂ ಜಗಳವೆಬ್ಬಿಸುತ್ತಾರೆ.
ಕೀರ್ತನೆಗಳು 140 : 3 (ERVKN)
ಅವರ ನಾಲಿಗೆಗಳು ಸರ್ಪಗಳಂತಿವೆ. ಅವರ ನಾಲಿಗೆಯ ಕೆಳಗೆ ಹಾವಿನ ವಿಷವಿದೆ.
ಕೀರ್ತನೆಗಳು 140 : 4 (ERVKN)
ಯೆಹೋವನೇ, ದುಷ್ಟರಿಂದ ನನ್ನನ್ನು ರಕ್ಷಿಸು. ಕ್ರೂರಿಗಳಿಂದ ನನ್ನನ್ನು ಕಾಪಾಡು. ಅವರು ನನ್ನನ್ನು ಹಿಂದಟ್ಟಿ ನನಗೆ ಕೇಡುಮಾಡಬೇಕೆಂದಿದ್ದಾರೆ.
ಕೀರ್ತನೆಗಳು 140 : 5 (ERVKN)
ಆ ಗರ್ವಿಷ್ಠರು ನನಗೆ ಉರುಲನ್ನು ಒಡ್ಡಿದ್ದಾರೆ; ನನ್ನನ್ನು ಹಿಡಿಯಲು ಬಲೆಯನ್ನು ಹಾಸಿದ್ದಾರೆ; ನನ್ನ ದಾರಿಯಲ್ಲಿ ಬೋನನ್ನು ಇಟ್ಟಿದ್ದಾರೆ.
ಕೀರ್ತನೆಗಳು 140 : 6 (ERVKN)
ಯೆಹೋವನೇ, ನನ್ನ ದೇವರು ನೀನೇ. ನನ್ನ ಪ್ರಾರ್ಥನೆಗೆ ಕಿವಿಗೊಡು.
ಕೀರ್ತನೆಗಳು 140 : 7 (ERVKN)
ಯೆಹೋವನೇ, ನನ್ನ ಬಲಿಷ್ಠನಾದ ಒಡೆಯನು ನೀನೇ. ನನ್ನ ರಕ್ಷಕನೂ ನೀನೇ, ನನ್ನ ಶಿರಸ್ತ್ರಾಣವೂ ನೀನೇ.
ಕೀರ್ತನೆಗಳು 140 : 8 (ERVKN)
ಯೆಹೋವನೇ, ಆ ದುಷ್ಟರ ದುರಾಶೆಯೂ ದುರಾಲೋಚನೆಯೂ ನೆರವೇರಲು ಬಿಡಬೇಡ.
ಕೀರ್ತನೆಗಳು 140 : 9 (ERVKN)
ನನ್ನ ವೈರಿಗಳಿಗೆ ಜಯವಾಗಲು ಬಿಡಬೇಡ. ಅವರು ಕುಯುಕ್ತಿಗಳನ್ನು ಮಾಡುತ್ತಿದ್ದಾರೆ; ಅವುಗಳನ್ನು ವಿಫಲಗೊಳಿಸು.
ಕೀರ್ತನೆಗಳು 140 : 10 (ERVKN)
ಅವರ ತಲೆಗಳ ಮೇಲೆ ಉರಿಯುವ ಕೆಂಡಗಳನ್ನು ಸುರಿದು ಬೆಂಕಿಯೊಳಗೆ ಎಸೆದುಬಿಡು; ಎಂದಿಗೂ ಹತ್ತಿ ಬರಲಾಗದ ಗುಂಡಿಯೊಳಗೆ ಅವರನ್ನು ಎಸೆದುಬಿಡು.
ಕೀರ್ತನೆಗಳು 140 : 11 (ERVKN)
ಆ ಸುಳ್ಳುಗಾರರನ್ನು ಜೀವಂತವಾಗಿ ಉಳಿಸಬೇಡ. ಆ ಕೆಡುಕರಿಗೆ ಕೇಡುಗಳಾಗುವಂತೆ ಮಾಡು.
ಕೀರ್ತನೆಗಳು 140 : 12 (ERVKN)
ಯೆಹೋವನು ದೀನರಿಗೆ ನ್ಯಾಯವಾದ ತೀರ್ಪನ್ನು ಪಾಲಿಸುತ್ತಾನೆಂದು ನನಗೆ ಗೊತ್ತಿದೆ. ದೇವರು ಅಸಹಾಯಕರಿಗೆ ಸಹಾಯಮಾಡುವನು.
ಕೀರ್ತನೆಗಳು 140 : 13 (ERVKN)
ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು; ಯಥಾರ್ಥವಂತರು ನಿನ್ನ ಸನ್ನಿಧಿಯಲ್ಲಿ ಜೀವಿಸುವರು.
❮
❯
1
2
3
4
5
6
7
8
9
10
11
12
13