ಕೀರ್ತನೆಗಳು 141 : 1 (ERVKN)
ರಚನೆಗಾರ : ದಾವೀದ. ಯೆಹೋವನೇ, ಸಹಾಯಕ್ಕಾಗಿ ನಿನಗೆ ಮೊರೆಯಿಡುತ್ತಿದ್ದೇನೆ. ನನ್ನ ಪ್ರಾರ್ಥನೆಗೆ ಕಿವಿಗೊಡು. ಬೇಗನೆ ಬಂದು ನನಗೆ ಸಹಾಯಮಾಡು!
ಕೀರ್ತನೆಗಳು 141 : 2 (ERVKN)
ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ.
ಕೀರ್ತನೆಗಳು 141 : 3 (ERVKN)
ಯೆಹೋವನೇ, ನನ್ನ ಮಾತುಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದಕ್ಕೂ, ವಿವೇಚಿಸಿ ನುಡಿಯುವುದಕ್ಕೂ ನನಗೆ ಸಹಾಯ ಮಾಡು.
ಕೀರ್ತನೆಗಳು 141 : 4 (ERVKN)
ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ.
ಕೀರ್ತನೆಗಳು 141 : 5 (ERVKN)
ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.
ಕೀರ್ತನೆಗಳು 141 : 6 (ERVKN)
ಅವರ ಅಧಿಪತಿಗಳು ದಬ್ಬಲ್ಪಡಲಿ. ನಾನು ಹೇಳಿದ್ದು ಸತ್ಯವೆಂದು ಆಗ ಜನರು ತಿಳಿದುಕೊಳ್ಳುವರು.
ಕೀರ್ತನೆಗಳು 141 : 7 (ERVKN)
ಜನರು ಹೊಲವನ್ನು ಉತ್ತು ಹೆಂಟೆಗಳನ್ನು ಪುಡಿಮಾಡಿ ಚದರಿಸುವಂತೆಯೇ ಕೆಟ್ಟವರ ಎಲುಬುಗಳು ಅವರ ಸಮಾಧಿಗಳಲ್ಲಿ ಹರಡಿಕೊಂಡಿರುತ್ತವೆ.
ಕೀರ್ತನೆಗಳು 141 : 8 (ERVKN)
ನನ್ನ ಒಡೆಯನಾದ ಯೆಹೋವನೇ, ಸಹಾಯಕ್ಕಾಗಿ ನಿನ್ನನ್ನೇ ಎದುರುನೋಡುವೆನು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ದಯವಿಟ್ಟು ನನ್ನನ್ನು ಮರಣಕ್ಕೀಡು ಮಾಡಬೇಡ.
ಕೀರ್ತನೆಗಳು 141 : 9 (ERVKN)
ಕೆಟ್ಟವರು ನನಗೆ ಬಲೆಗಳನ್ನು ಒಡ್ಡಿದ್ದಾರೆ. ಅವರ ಬೋನುಗಳಿಂದ ನನ್ನನ್ನು ತಪ್ಪಿಸು.
ಕೀರ್ತನೆಗಳು 141 : 10 (ERVKN)
ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಬೀಳಲಿ. ಆಗ ನಾನು ತಪ್ಪಿಸಿಕೊಳ್ಳುವೆನು.

1 2 3 4 5 6 7 8 9 10

BG:

Opacity:

Color:


Size:


Font: