ಕೀರ್ತನೆಗಳು 143 : 1 (ERVKN)
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ನನ್ನ ಬಿನ್ನಹಕ್ಕೆ ಕಿವಿಗೊಡು. ನಿನ್ನ ನೀತಿಗೂ ನಂಬಿಗಸ್ತಿಕೆಗೂ ತಕ್ಕಂತೆ ನನ್ನ ಪ್ರಾರ್ಥನೆಗೆ ಉತ್ತರ ಕೊಡು.
ಕೀರ್ತನೆಗಳು 143 : 2 (ERVKN)
ನಿನ್ನ ಸೇವಕನಾದ ನನಗೆ ತೀರ್ಪುಮಾಡಬೇಡ. ನನ್ನ ಇಡೀ ಜೀವಮಾನದಲ್ಲಿ ನಿರಪರಾಧಿಯೆಂಬ ತೀರ್ಪನ್ನು ಹೊಂದಲು ನನಗೆ ಸಾಧ್ಯವೇ ಇಲ್ಲ.
ಕೀರ್ತನೆಗಳು 143 : 3 (ERVKN)
ಆದರೆ ನನ್ನ ಶತ್ರುಗಳು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಅವರು ನನ್ನ ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾರೆ.
ಬಹುಕಾಲದ ಹಿಂದೆ ಸತ್ತವರನ್ನು ಕಾರ್ಗತ್ತಲೆಯ ಸಮಾಧಿಗೆ ನೂಕುವಂತೆ ಅವರು ನನ್ನನ್ನು ನೂಕುತ್ತಿದ್ದಾರೆ.
ಕೀರ್ತನೆಗಳು 143 : 4 (ERVKN)
ನನ್ನ ಆತ್ಮವು ಕುಂದಿಹೋಗಿದೆ. ನನ್ನ ಧೈರ್ಯವು ಕಳೆದುಹೋಗುತ್ತಿದೆ.
ಕೀರ್ತನೆಗಳು 143 : 5 (ERVKN)
ಆದರೆ ಬಹುಕಾಲದ ಹಿಂದೆ ನಡೆದವುಗಳನ್ನು ಜ್ಞಾಪಿಸಿಕೊಳ್ಳುವೆನು. ನೀನು ಮಾಡಿದ ಅನೇಕ ಅದ್ಭುತಕಾರ್ಯಗಳನ್ನು ಆಲೋಚಿಸುವೆನು.
ಕೀರ್ತನೆಗಳು 143 : 6 (ERVKN)
ನನ್ನ ಕೈಗಳನ್ನು ಮೇಲೆತ್ತಿ ನಿನಗೆ ಪ್ರಾರ್ಥಿಸುವೆನು. ಒಣಭೂಮಿಯು ಮಳೆಗಾಗಿ ಕಾಯುವಂತೆ ನಾನು ನಿನ್ನ ಸಹಾಯಕ್ಕಾಗಿ ಕಾಯುತ್ತಿದ್ದೇನೆ.
ಕೀರ್ತನೆಗಳು 143 : 7 (ERVKN)
ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು. ನನ್ನ ಆತ್ಮವು ಕುಂದಿಹೋಗುತ್ತಿದೆ.
ನೀನು ನನಗೆ ವಿಮುಖನಾಗಬೇಡ. ಸತ್ತು ಸಮಾಧಿಯಲ್ಲಿರುವವರಂತೆ ನನ್ನನ್ನು ಸಾವಿಗೀಡು ಮಾಡಬೇಡ.
ಕೀರ್ತನೆಗಳು 143 : 8 (ERVKN)
ಮುಂಜಾನೆಯಲ್ಲಿ ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ.
ನಾನು ಮಾಡಬೇಕಾದವುಗಳನ್ನು ನನಗೆ ತೋರಿಸು. ನಾನು ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿದ್ದೇನೆ!
ಕೀರ್ತನೆಗಳು 143 : 9 (ERVKN)
ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ; ಶತ್ರುಗಳಿಂದ ನನ್ನನ್ನು ರಕ್ಷಿಸು.
ಕೀರ್ತನೆಗಳು 143 : 10 (ERVKN)
ನಿನ್ನ ಇಚ್ಛೆಗನುಸಾರವಾಗಿ ನಾನು ಮಾಡಬೇಕಾದುದನ್ನು ನನಗೆ ತೋರಿಸಿಕೊಡು. ನೀನೇ ನನ್ನ ದೇವರು.
ನನಗೆ ಒಳ್ಳೆಯವನಾಗಿದ್ದು ಸುರಕ್ಷಿತವಾದ ದಾರಿಯಲ್ಲಿ ನಡೆಸು.
ಕೀರ್ತನೆಗಳು 143 : 11 (ERVKN)
ಯೆಹೋವನೇ, ನನ್ನನ್ನು ಉಜ್ಜೀವಿಸಮಾಡು. ಆಗ ಜನರು ನಿನ್ನ ಹೆಸರನ್ನು ಕೊಂಡಾಡುವರು.
ನೀನು ನಿಜವಾಗಿಯೂ ಒಳ್ಳೆಯವನೆಂಬುದನ್ನು ನನಗೆ ತೋರಿಸಿಕೊಡು. ನನ್ನನ್ನು ಶತ್ರುಗಳಿಂದ ರಕ್ಷಿಸು.
ಕೀರ್ತನೆಗಳು 143 : 12 (ERVKN)
ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನನ್ನನ್ನು ಕೊಲ್ಲಬೇಕೆಂದಿರುವ ಶತ್ರುಗಳನ್ನು ಸೋಲಿಸು. ನಾನು ನಿನ್ನ ಸೇವಕನಾಗಿರುವೆ.
❮
❯
1
2
3
4
5
6
7
8
9
10
11
12