ಕೀರ್ತನೆಗಳು 144 : 1 (ERVKN)
ಯೆಹೋವನು ನನಗೆ ಬಂಡೆಯಾಗಿದ್ದಾನೆ. ಆತನಿಗೆ ಸ್ತೋತ್ರವಾಗಲಿ.
ಆತನು ನನ್ನನ್ನು ಯುದ್ಧಕ್ಕೂ ಕದನಕ್ಕೂ ತರಬೇತು ಮಾಡುವನು.
ಕೀರ್ತನೆಗಳು 144 : 2 (ERVKN)
ಆತನು ನನ್ನನ್ನು ಪ್ರೀತಿಸುವ ದೇವರೂ ನನ್ನ ಕೋಟೆಯೂ ನನ್ನ ದುರ್ಗವೂ ನನ್ನ ರಕ್ಷಕನೂ ನನ್ನ ಗುರಾಣಿಯೂ ನನ್ನ ಆಶ್ರಯವೂ ಆಗಿದ್ದಾನೆ.
ಕೀರ್ತನೆಗಳು 144 : 3 (ERVKN)
ಯೆಹೋವನೇ, ಮನುಷ್ಯರು ಎಷ್ಟು ಮಾತ್ರದವರು? ನೀನು ಅವರನ್ನು ಯಾಕೆ ನೆನಸಬೇಕು?
ಮನುಷ್ಯರು ಎಷ್ಟರವರು? ನೀನು ಅವರನ್ನು ಯಾಕೆ ಗಮನಿಸಬೇಕು?
ಕೀರ್ತನೆಗಳು 144 : 4 (ERVKN)
ಮನುಷ್ಯರು ಕೇವಲ ಉಸಿರೇ. ಅವರ ಜೀವಮಾನವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.
ಕೀರ್ತನೆಗಳು 144 : 5 (ERVKN)
ಯೆಹೋವನೇ, ಆಕಾಶವನ್ನು ಹರಿದು ಇಳಿದು ಬಾ. ಪರ್ವತಗಳನ್ನು ಮುಟ್ಟು. ಆಗ ಅವುಗಳಿಂದ ಹೊಗೆಯು ಮೇಲೇರುವುದು.
ಕೀರ್ತನೆಗಳು 144 : 6 (ERVKN)
ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು. ನಿನ್ನ ಬಾಣಗಳಿಂದ ಅವರನ್ನು ಓಡಿಸಿಬಿಡು.
ಕೀರ್ತನೆಗಳು 144 : 7 (ERVKN)
ಮೇಲಿನ ಲೋಕದಿಂದ ಕೈಚಾಚಿ ಮಹಾ ಜಲರಾಶಿಯಂತಿರುವ ನನ್ನ ಶತ್ರುಗಳಿಂದ ನನ್ನನ್ನು ಎಳೆದುಕೊ. ಅನ್ಯಜನರ ಕೈಯಿಂದ ನನ್ನನ್ನು ಬಿಡಿಸು.
ಕೀರ್ತನೆಗಳು 144 : 8 (ERVKN)
ಅವರ ಬಾಯಿ ಸುಳ್ಳುಗಳಿಂದ ತುಂಬಿವೆ. ಅವರ ಬಲಗೈ ಮೋಸದಿಂದ ತುಂಬಿವೆ.
ಕೀರ್ತನೆಗಳು 144 : 9 (ERVKN)
ಯೆಹೋವನೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು. ನಾನು ಹತ್ತು ತಂತಿಗಳ ಹಾರ್ಪ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಸ್ತುತಿಸುವೆನು.
ಕೀರ್ತನೆಗಳು 144 : 10 (ERVKN)
ರಾಜರುಗಳಿಗೆ ಸಹಾಯಮಾಡಿ ಯುದ್ಧಗಳಲ್ಲಿ ಗೆಲ್ಲಿಸುವವನೂ ನೀನೇ. ನಿನ್ನ ಸೇವಕನಾದ ದಾವೀದನನ್ನು ಅವನ ಶತ್ರುಗಳ ಖಡ್ಗಗಳಿಂದ ರಕ್ಷಿಸಿದವನೂ ನೀನೇ.
ಕೀರ್ತನೆಗಳು 144 : 11 (ERVKN)
ಈ ಅನ್ಯಜನರಿಂದ ನನ್ನನ್ನು ರಕ್ಷಿಸು. ಅವರ ಬಾಯಿಗಳು ಸುಳ್ಳುಗಳಿಂದ ತುಂಬಿವೆ. ಅವರ ಬಲಗೈಗಳು ಮೋಸದಿಂದ ತುಂಬಿವೆ.
ಕೀರ್ತನೆಗಳು 144 : 12 (ERVKN)
ನಮ್ಮ ಯುವಕರು ಮಹಾವೃಕ್ಷಗಳಂತಿದ್ದಾರೆ. ನಮ್ಮ ಯುವತಿಯರು ಅರಮನೆಯಲ್ಲಿ ಸುಂದರವಾಗಿ ಕೆತ್ತಲ್ಪಟ್ಟ ಕಂಬಗಳಂತಿರುವರು.
ಕೀರ್ತನೆಗಳು 144 : 13 (ERVKN)
ನಮ್ಮ ಕಣಜಗಳು ಸಕಲ ಬಗೆಯ ದವಸಧಾನ್ಯಗಳಿಂದ ತುಂಬಿರುತ್ತವೆ. ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುತ್ತವೆ.
ಕೀರ್ತನೆಗಳು 144 : 14 (ERVKN)
ನಮ್ಮ ಸೈನಿಕರು ಸುರಕ್ಷಿತವಾಗಿದ್ದಾರೆ.
ಯಾವ ಶತ್ರುಗಳೂ ನುಗ್ಗಿಬರಲು ಪ್ರಯತ್ನಿಸುತ್ತಿಲ್ಲ. ನಾವು ಯುದ್ಧಕ್ಕೆ ಹೋಗುವುದೂ ಇಲ್ಲ;
ನಮ್ಮ ಬೀದಿಗಳಲ್ಲಿ ಗೋಳಾಟವೂ ಇರುವುದಿಲ್ಲ.
ಕೀರ್ತನೆಗಳು 144 : 15 (ERVKN)
ಇಂಥ ಸುಸ್ಥಿತಿಯಲ್ಲಿರುವ ಜನರೇ ಧನ್ಯರು. ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರೇ ಭಾಗ್ಯವಂತರು.
❮
❯
1
2
3
4
5
6
7
8
9
10
11
12
13
14
15