ಕೀರ್ತನೆಗಳು 145 : 1 (ERVKN)
ನನ್ನ ದೇವರೇ, ನನ್ನ ರಾಜನೇ, ನಿನ್ನನ್ನು ಸ್ತುತಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.
ಕೀರ್ತನೆಗಳು 145 : 2 (ERVKN)
ನಿನ್ನನ್ನು ಪ್ರತಿದಿನವೂ ಸ್ತುತಿಸುವೆನು. ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.
ಕೀರ್ತನೆಗಳು 145 : 3 (ERVKN)
ಯೆಹೋವನು ಮಹೋನ್ನತನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ. ಆತನ ಮಹತ್ಕಾರ್ಯಗಳು ಅಸಂಖ್ಯಾತವಾಗಿವೆ.
ಕೀರ್ತನೆಗಳು 145 : 4 (ERVKN)
ಯೆಹೋವನೇ, ನಿನ್ನ ಕಾರ್ಯಗಳನ್ನು ಜನರು ಎಂದೆಂದಿಗೂ ಸ್ತುತಿಸುವರು; ನಿನ್ನ ಮಹತ್ಕಾರ್ಯಗಳ ವಿಷಯವಾಗಿ ಜನರು ಬೇರೆಯವರಿಗೆ ಹೇಳುವರು.
ಕೀರ್ತನೆಗಳು 145 : 5 (ERVKN)
ನಿನ್ನ ಪ್ರಭಾವವುಳ್ಳ ಮಹಿಮೆಯ ಕುರಿತು ಜನರು ಹೇಳುವರು. ನಾನು ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವೆನು.
ಕೀರ್ತನೆಗಳು 145 : 6 (ERVKN)
ನಿನ್ನ ಅತ್ಯಾಶ್ಚರ್ಯಕರವಾದ ಕಾರ್ಯಗಳನ್ನು ಜನರು ಕೊಂಡಾಡುವರು. ನಿನ್ನ ಮಹತ್ಕಾರ್ಯಗಳನ್ನು ನಾನು ವರ್ಣಿಸುವೆನು.
ಕೀರ್ತನೆಗಳು 145 : 7 (ERVKN)
ನಿನ್ನ ಒಳ್ಳೆಯ ಕಾರ್ಯಗಳ ಕುರಿತಾಗಿ ಜನರು ಹೇಳುವರು. ನಿನ್ನ ನೀತಿಯು ಕುರಿತಾಗಿ ಜನರು ಹಾಡುವರು.
ಕೀರ್ತನೆಗಳು 145 : 8 (ERVKN)
ಯೆಹೋವನು ದಯೆಯುಳ್ಳವನೂ ಕನಿಕರವುಳ್ಳವನೂ ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ.
ಕೀರ್ತನೆಗಳು 145 : 9 (ERVKN)
ಯೆಹೋವನು ಪ್ರತಿಯೊಬ್ಬನಿಗೂ ಒಳ್ಳೆಯವನಾಗಿದ್ದಾನೆ. ಆತನು ತಾನು ನಿರ್ಮಿಸಿದವುಗಳಿಗೆಲ್ಲಾ ಕನಿಕರ ತೋರಿಸುವನು.
ಕೀರ್ತನೆಗಳು 145 : 10 (ERVKN)
ಯೆಹೋವನೇ, ನಿನ್ನ ಸೃಷ್ಟಿಯೆಲ್ಲವೂ ನಿನ್ನನ್ನು ಸ್ತುತಿಸುತ್ತವೆ. ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
ಕೀರ್ತನೆಗಳು 145 : 11 (ERVKN)
ಅವರು ನಿನ್ನ ರಾಜ್ಯದ ಮಹತ್ವವನ್ನು ಕುರಿತು ಹೇಳುವರು. ನಿನ್ನ ಪರಾಕ್ರಮವನ್ನು ವರ್ಣಿಸುವರು.
ಕೀರ್ತನೆಗಳು 145 : 12 (ERVKN)
ಹೀಗೆ ನಿನ್ನ ಮಹತ್ಕಾರ್ಯಗಳನ್ನು ಇತರ ಜನರು ತಿಳಿದು ಕೊಳ್ಳುವರು. ನಿನ್ನ ರಾಜ್ಯದ ಮಹತ್ವವನ್ನೂ ವೈಭವವನ್ನೂ ಅವರು ತಿಳಿದುಕೊಳ್ಳುವರು.
ಕೀರ್ತನೆಗಳು 145 : 13 (ERVKN)
ಯೆಹೋವನೇ, ನಿನ್ನ ರಾಜ್ಯವು ಶಾಶ್ವತವಾಗಿದೆ. ನೀನು ಎಂದೆಂದಿಗೂ ಆಳುವೆ.
ಕೀರ್ತನೆಗಳು 145 : 14 (ERVKN)
ಯೆಹೋವನು ಬಿದ್ದುಹೋಗಿರುವವರನ್ನು ಮೇಲೆತ್ತುವವನೂ; ಕುಗ್ಗಿಹೋದವರನ್ನು ಉದ್ಧರಿಸುವವನೂ ಆಗಿದ್ದಾನೆ.
ಕೀರ್ತನೆಗಳು 145 : 15 (ERVKN)
ಎಲ್ಲಾ ಜೀವಿಗಳು ತಮ್ಮ ಆಹಾರಕ್ಕಾಗಿ ನಿನ್ನನ್ನೇ ನೋಡುತ್ತವೆ. ನೀನು ಸಮಯಕ್ಕೆ ಸರಿಯಾಗಿ ಅವುಗಳಿಗೆ ಆಹಾರವನ್ನು ಕೊಡುವೆ.
ಕೀರ್ತನೆಗಳು 145 : 16 (ERVKN)
ನೀನು ಕೈಯನ್ನು ತೆರೆದು ಜೀವಿಗಳ ಅವಶ್ಯಕತೆಗಳನ್ನೆಲ್ಲಾ ಪೂರೈಸುವೆ.
ಕೀರ್ತನೆಗಳು 145 : 17 (ERVKN)
ಯೆಹೋವನ ಕಾರ್ಯಗಳೆಲ್ಲ ನೀತಿಯುಳ್ಳವುಗಳಾಗಿವೆ. ಆತನ ಪ್ರತಿಯೊಂದು ಕಾರ್ಯದಲ್ಲೂ ಆತನ ಶಾಶ್ವತ ಪ್ರೀತಿ ತೋರಿಬರುವುದು.
ಕೀರ್ತನೆಗಳು 145 : 18 (ERVKN)
ಯೆಹೋವನು ತನ್ನ ಭಕ್ತರಿಗೆ ಸಮೀಪವಾಗಿದ್ದಾನೆ. ಆತನು ತನ್ನನ್ನು ಯಥಾರ್ಥವಾಗಿ ಕರೆಯುವ ಪ್ರತಿಯೊಬ್ಬರಿಗೂ ಸಮೀಪವಾಗಿದ್ದಾನೆ.
ಕೀರ್ತನೆಗಳು 145 : 19 (ERVKN)
ಆತನು ತನ್ನ ಭಕ್ತರ ಇಷ್ಟವನ್ನು ನೆರವೇರಿಸುವನು. ಆತನು ಅವರ ಮೊರೆಗೆ ಕಿವಿಗೊಟ್ಟು ಅವರನ್ನು ರಕ್ಷಿಸುವನು.
ಕೀರ್ತನೆಗಳು 145 : 20 (ERVKN)
ಯೆಹೋವನು ತನ್ನನ್ನು ಪ್ರೀತಿಸುವ ಪ್ರತಿಯೊಬ್ಬರನ್ನೂ ಸಂರಕ್ಷಿಸುವನು, ದುಷ್ಟರನ್ನಾದರೊ ಆತನು ನಾಶ ಮಾಡುವನು.
ಕೀರ್ತನೆಗಳು 145 : 21 (ERVKN)
ನಾನು ಯೆಹೋವನನ್ನು ಕೊಂಡಾಡುತ್ತೇನೆ! ಎಲ್ಲಾ ಜೀವಿಗಳು ಆತನ ಪವಿತ್ರ ಹೆಸರನ್ನು ಸದಾಕಾಲ ಕೊಂಡಾಡಲಿ!

1 2 3 4 5 6 7 8 9 10 11 12 13 14 15 16 17 18 19 20 21

BG:

Opacity:

Color:


Size:


Font: