ಕೀರ್ತನೆಗಳು 146 : 1 (ERVKN)
ಯೆಹೋವನಿಗೆ ಸ್ತೋತ್ರವಾಗಲಿ! ನನ್ನ ಮನವೇ, ಯೆಹೋವನನ್ನು ಸ್ತುತಿಸು!
ಕೀರ್ತನೆಗಳು 146 : 2 (ERVKN)
ನನ್ನ ಜೀವಮಾನವೆಲ್ಲಾ ಯೆಹೋವನನ್ನು ಸ್ತುತಿಸುವೆನು; ಆತನನ್ನು ಸಂಕೀರ್ತಿಸುವೆನು.
ಕೀರ್ತನೆಗಳು 146 : 3 (ERVKN)
ಸಹಾಯಕ್ಕಾಗಿ ನಿಮ್ಮ ನಾಯಕರುಗಳನ್ನು ಅವಲಂಬಿಸಿಕೊಳ್ಳಬೇಡಿ. ಮನುಷ್ಯರಲ್ಲಿ ಭರವಸವಿಡಬೇಡಿ, ಅವರು ನಿಮ್ಮನ್ನು ರಕ್ಷಿಸಲಾರರು.
ಕೀರ್ತನೆಗಳು 146 : 4 (ERVKN)
ಮನುಷ್ಯರು ಸತ್ತು ಸಮಾಧಿಗೆ ಸೇರುವರು; ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ.
ಕೀರ್ತನೆಗಳು 146 : 5 (ERVKN)
ಯಾರಿಗೆ ದೇವರು ಸಹಾಯಕನೋ, ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು.
ಕೀರ್ತನೆಗಳು 146 : 6 (ERVKN)
ಯೆಹೋವನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು.
ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು.
ಕೀರ್ತನೆಗಳು 146 : 7 (ERVKN)
ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ; ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ.
ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುವನು.
ಕೀರ್ತನೆಗಳು 146 : 8 (ERVKN)
ಯೆಹೋವನು ಕುರುಡರಿಗೆ ದೃಷ್ಟಿಕೊಡುವನು.
ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು. ಯೆಹೋವನು ನೀತಿವಂತರನ್ನು ಪ್ರೀತಿಸುವನು.
ಕೀರ್ತನೆಗಳು 146 : 9 (ERVKN)
ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ. ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ. ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು.
ಕೀರ್ತನೆಗಳು 146 : 10 (ERVKN)
ಯೆಹೋವನು ಸದಾಕಾಲ ಆಳುವನು! ಚೀಯೋನೇ, ನಿನ್ನ ದೇವರು ಶಾಶ್ವತವಾಗಿ ಆಳುವನು! ಯೆಹೋವನಿಗೆ ಸ್ತೋತ್ರವಾಗಲಿ!

1 2 3 4 5 6 7 8 9 10