ಕೀರ್ತನೆಗಳು 148 : 1 (ERVKN)
ಯೆಹೋವನಿಗೆ ಸ್ತೋತ್ರವಾಗಲಿ!
ಮೇಲೋಕದಲ್ಲಿರುವ ದೇವದೂತರೇ, ಆಕಾಶಮಂಡಲದಿಂದ ಯೆಹೋವನನ್ನು ಸ್ತುತಿಸಿರಿ!
ಕೀರ್ತನೆಗಳು 148 : 2 (ERVKN)
ಎಲ್ಲಾ ದೂತರುಗಳೇ, ಆತನಿಗೆ ಸ್ತೋತ್ರಮಾಡಿರಿ! ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ!
ಕೀರ್ತನೆಗಳು 148 : 3 (ERVKN)
ಸೂರ್ಯಚಂದ್ರರೇ, ಆತನನ್ನು ಸ್ತುತಿಸಿರಿ! ಆಕಾಶದಲ್ಲಿರುವ ನಕ್ಷತ್ರಗಳೇ, ಬೆಳಕುಗಳೇ, ಆತನನ್ನು ಸ್ತುತಿಸಿರಿ!
ಆತನಿಗೆ ಸ್ತೋತ್ರಮಾಡಿರಿ! ಆತನ ಸರ್ವಸೈನ್ಯಗಳೇ ಆತನನ್ನು ಸ್ತುತಿಸಿರಿ!
ಕೀರ್ತನೆಗಳು 148 : 4 (ERVKN)
ಉನ್ನತೋನ್ನತವಾದ ಆಕಾಶವೇ, ಆತನನ್ನು ಸ್ತುತಿಸು! ಆಕಾಶದ ಮೇಲಿರುವ ನೀರುಗಳೇ ಆತನನ್ನು ಸ್ತುತಿಸಿರಿ!
ಕೀರ್ತನೆಗಳು 148 : 5 (ERVKN)
ಅವು ಯೆಹೋವನ ಹೆಸರನ್ನು ಸ್ತುತಿಸಲಿ. ಆತನು ಆಜ್ಞಾಪಿಸಲು ಅವುಗಳೆಲ್ಲಾ ಸೃಷ್ಟಿಯಾದವು!
ಕೀರ್ತನೆಗಳು 148 : 6 (ERVKN)
ಇವುಗಳೆಲ್ಲಾ ಶಾಶ್ವತವಾಗಿರುವಂತೆ ಆತನು ಮಾಡಿದನು. ಎಂದಿಗೂ ಕೊನೆಗೊಳ್ಳದ ನಿಯಮಗಳನ್ನು ಆತನು ಮಾಡಿದನು.
ಕೀರ್ತನೆಗಳು 148 : 7 (ERVKN)
ಭೂಮಿಯ ಮೇಲಿರುವ ಸಮಸ್ತವೇ, ಯೆಹೋವನಿಗೆ ಸ್ತೋತ್ರಮಾಡಿರಿ! ಮಹಾಸಮುದ್ರ ಪ್ರಾಣಿಗಳೇ, ಆತನನ್ನು ಸ್ತುತಿಸಿರಿ!
ಕೀರ್ತನೆಗಳು 148 : 8 (ERVKN)
ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.
ಕೀರ್ತನೆಗಳು 148 : 9 (ERVKN)
ಆತನು ಬೆಟ್ಟಗಳನ್ನೂ ಗುಡ್ಡಗಳನ್ನೂ ಹಣ್ಣಿನ ಮರಗಳನ್ನೂ ದೇವದಾರು ಮರಗಳನ್ನೂ ಸೃಷ್ಟಿಮಾಡಿದನು.
ಕೀರ್ತನೆಗಳು 148 : 10 (ERVKN)
ಆತನು ಎಲ್ಲಾ ಕಾಡುಪ್ರಾಣಿಗಳನ್ನೂ ಪಶುಗಳನ್ನೂ ಕ್ರಿಮಿಕೀಟಗಳನ್ನೂ ಪಕ್ಷಿಗಳನ್ನೂ ಸೃಷ್ಟಿಮಾಡಿದನು.
ಕೀರ್ತನೆಗಳು 148 : 11 (ERVKN)
ಆತನು ಭೂಮಿಯ ಮೇಲೆ ರಾಜರುಗಳನ್ನೂ ಜನಾಂಗಗಳನ್ನೂ ನಾಯಕರುಗಳನ್ನೂ ನ್ಯಾಯಾಧಿಪತಿಗಳನ್ನೂ ಸೃಷ್ಟಿಮಾಡಿದನು.
ಕೀರ್ತನೆಗಳು 148 : 12 (ERVKN)
ಆತನು ಪ್ರಾಯಸ್ಥರಾದ ಸ್ತ್ರೀಪುರುಷರನ್ನೂ ವೃದ್ಧರನ್ನೂ ಯೌವನಸ್ಥರನ್ನೂ ಸೃಷ್ಟಿಸಿದನು.
ಕೀರ್ತನೆಗಳು 148 : 13 (ERVKN)
ಯೆಹೋವನ ಹೆಸರನ್ನು ಕೊಂಡಾಡಿರಿ! ಆತನ ಹೆಸರನ್ನು ಶಾಶ್ವತವಾಗಿ ಸನ್ಮಾನಿಸಿರಿ! ಭೂಮ್ಯಾಕಾಶಗಳಲ್ಲಿರುವ ಸಮಸ್ತವೇ, ಆತನನ್ನು ಸ್ತುತಿಸು!
ಕೀರ್ತನೆಗಳು 148 : 14 (ERVKN)
ಆತನು ತನ್ನ ಜನರನ್ನು ಬಲಿಷ್ಠರನ್ನಾಗಿ ಮಾಡುತ್ತಾನೆ. ಆತನ ಭಕ್ತರನ್ನು ಜನರು ಹೊಗಳುವರು. ಜನರು ಇಸ್ರೇಲರನ್ನು ಹೊಗಳುವರು.
ಆತನು ಹೋರಾಡುತ್ತಿರುವುದು ಅವರಿಗಾಗಿಯೇ. ಯೆಹೋವನಿಗೆ ಸ್ತೋತ್ರವಾಗಲಿ!

1 2 3 4 5 6 7 8 9 10 11 12 13 14