ಕೀರ್ತನೆಗಳು 15 : 1 (ERVKN)
ಯೆಹೋವನೇ, ನಿನ್ನ ಪವಿತ್ರ ಗುಡಾರದಲ್ಲಿ ಎಂಥವನು ವಾಸಿಸಬಲ್ಲನು? ನಿನ್ನ ಪವಿತ್ರ ಪರ್ವತದ ಮೇಲೆ ಎಂಥವನು ನೆಲಸಬಲ್ಲನು?
ಕೀರ್ತನೆಗಳು 15 : 2 (ERVKN)
ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಹೃದಯದಿಂದ ಸತ್ಯವನ್ನು ಮಾತಾಡುವವನೂ ಆಗಿರಬೇಕು.
ಕೀರ್ತನೆಗಳು 15 : 3 (ERVKN)
ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು.
ಕೀರ್ತನೆಗಳು 15 : 4 (ERVKN)
ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.
ಕೀರ್ತನೆಗಳು 15 : 5 (ERVKN)
ಅವನು ಕೊಟ್ಟ ಸಾಲಕ್ಕೆ ಬಡ್ಡಿಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.

1 2 3 4 5

BG:

Opacity:

Color:


Size:


Font: