ಕೀರ್ತನೆಗಳು 150 : 1 (ERVKN)
ಯೆಹೋವನಿಗೆ ಸ್ತೋತ್ರವಾಗಲಿ! ದೇವರನ್ನು ಆತನ ಆಲಯದಲ್ಲಿ ಸ್ತುತಿಸಿರಿ! ಆತನ ಶಕ್ತಿಯನ್ನು ಪರಲೋಕದಲ್ಲಿ ಸ್ತುತಿಸಿರಿ!
ಕೀರ್ತನೆಗಳು 150 : 2 (ERVKN)
ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ! ಆತನ ಮಹತ್ವಕ್ಕೆ ತಕ್ಕಂತೆ ಆತನನ್ನು ಸ್ತುತಿಸಿರಿ!
ಕೀರ್ತನೆಗಳು 150 : 3 (ERVKN)
ತುತ್ತೂರಿಗಳನ್ನೂ ಕೊಂಬುಗಳನ್ನೂ ಊದುತ್ತಾ ಆತನನ್ನು ಸ್ತುತಿಸಿರಿ! ಹಾರ್ಪ್‌ವಾದ್ಯಗಳನ್ನೂ ಲೈರ್‌ವಾದ್ಯಗಳನ್ನೂ ನುಡಿಸುತ್ತಾ ಆತನನ್ನು ಸ್ತುತಿಸಿರಿ.
ಕೀರ್ತನೆಗಳು 150 : 4 (ERVKN)
ದಮ್ಮಡಿಗಳನ್ನು ಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ. ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.
ಕೀರ್ತನೆಗಳು 150 : 5 (ERVKN)
ತಾಳಗಳಿಂದ ಆತನನ್ನು ಸ್ತುತಿಸಿರಿ! ಝಲ್ಲರಿಗಳಿಂದ ಆತನನ್ನು ಸ್ತುತಿಸಿರಿ!
ಕೀರ್ತನೆಗಳು 150 : 6 (ERVKN)
ಸಮಸ್ತಜೀವಿಗಳೇ, ಯೆಹೋವನಿಗೆ ಸ್ತೋತ್ರಮಾಡಿರಿ! ಯೆಹೋವನಿಗೆ ಸ್ತೋತ್ರವಾಗಲಿ!

1 2 3 4 5 6

BG:

Opacity:

Color:


Size:


Font: