ಕೀರ್ತನೆಗಳು 17 : 1 (ERVKN)
ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮೊರೆಯನ್ನು ಆಲೈಸು, ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.
ಕೀರ್ತನೆಗಳು 17 : 2 (ERVKN)
ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನಿನ್ನಿಂದಲೇ ಬರಲಿ. ನೀನು ಸತ್ಯವನ್ನು ನೋಡಬಲ್ಲಾತನಾಗಿರುವೆ.
ಕೀರ್ತನೆಗಳು 17 : 3 (ERVKN)
ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪ್ರಶ್ನಿಸಿದಾಗ
ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.
ಕೀರ್ತನೆಗಳು 17 : 4 (ERVKN)
ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ.
ಕೀರ್ತನೆಗಳು 17 : 5 (ERVKN)
ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ. ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ.
ಕೀರ್ತನೆಗಳು 17 : 6 (ERVKN)
ದೇವರೇ, ನಾನು ನಿನ್ನನ್ನು ಕರೆದಾಗಲ್ಲೆಲ್ಲಾ, ನೀನು ನನಗೆ ಉತ್ತರಿಸಿದೆ. ಆದ್ದರಿಂದ ಈಗಲೂ ನನಗೆ ಕಿವಿಗೊಡು.
ಕೀರ್ತನೆಗಳು 17 : 7 (ERVKN)
ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ ನೀನು ಸಹಾಯಮಾಡುವೆ;
ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು. ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು.
ಕೀರ್ತನೆಗಳು 17 : 8 (ERVKN)
ನಿನ್ನ ಕಣ್ಣಿನ ಗುಡ್ಡೆಯಂತೆ ನನ್ನನ್ನು ಸಂರಕ್ಷಿಸು. ನಿನ್ನ ರೆಕ್ಕೆಗಳ ಮರೆಯಲ್ಲಿ ನನ್ನನ್ನು ಅಡಗಿಸಿಕೊ.
ಕೀರ್ತನೆಗಳು 17 : 9 (ERVKN)
ಯೆಹೋವನೇ, ನನ್ನನ್ನು ನಾಶಮಾಡಬೇಕೆಂದಿರುವ ದುಷ್ಟರಿಂದ ನನ್ನನ್ನು ತಪ್ಪಿಸಿ ಕಾಪಾಡು. ನನಗೆ ಕೇಡುಮಾಡಬೇಕೆಂದು ಸುತ್ತುಗಟ್ಟಿರುವ ಜನರಿಂದ ನನ್ನನ್ನು ಸಂರಕ್ಷಿಸು.
ಕೀರ್ತನೆಗಳು 17 : 10 (ERVKN)
ಆ ದುಷ್ಟರು ಗರ್ವಿಷ್ಠರಾಗಿದ್ದಾರೆ. ಅವರು ಜಂಬಕೊಚ್ಚಿಕೊಳ್ಳುತ್ತಾರೆ.
ಕೀರ್ತನೆಗಳು 17 : 11 (ERVKN)
ಅವರು ನನ್ನನ್ನು ಬೆನ್ನಟ್ಟಿ ಬಂದು ಸುತ್ತುಗಟ್ಟಿದ್ದಾರೆ; ಆಕ್ರಮಣಮಾಡಲು ಸಿದ್ಧರಾಗಿದ್ದಾರೆ. *ಆಕ್ರಮಣಮಾಡಲು ಸಿದ್ಧರಾಗಿದ್ದಾರೆ ಅಕ್ಷರಶಃ, “ಅವರು ನೆಲದ ಮೇಲೆ ಬೀಳಿಸಲು ದೃಷ್ಟಿಯಿಟ್ಟಿದ್ದಾರೆ.”
ಕೀರ್ತನೆಗಳು 17 : 12 (ERVKN)
ಅವರು ಬೇಟೆಗಾಗಿ ಕಾಯುತ್ತಿರುವ ಸಿಂಹಗಳಂತಿದ್ದಾರೆ; ಅಡಗಿಕೊಂಡು ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಂತಿದ್ದಾರೆ.
ಕೀರ್ತನೆಗಳು 17 : 13 (ERVKN)
ಯೆಹೋವನೇ, ಎದ್ದೇಳು, †ಯೆಹೋವನೇ, ಎದ್ದೇಳು ಒಡಂಬಡಿಕೆಯ ಪೆಟ್ಟಿಗೆಯನ್ನು ಎತ್ತಿದಾಗ ಮತ್ತು ತಮ್ಮೊಂದಿಗೆ ಅದನ್ನು ಯುದ್ಧದೊಳಗೆ ತೆಗೆದುಕೊಂಡು ಹೋದಾಗ ಜನರು ಇದನ್ನು ಹೇಳಿದರು. ದೇವರು ಅವರೊಂದಿಗೆ ಇದ್ದನು ಎಂಬುದನ್ನು ಇದು ತೋರಿಸುತ್ತದೆ. ಅರಣ್ಯಕಾಂಡ 10:35-36 ನೆಯ ವಚನಗಳನ್ನು ನೋಡಿರಿ. ವೈರಿಗಳ ಬಳಿಗೆ ಹೋಗು. ಅವರನ್ನು ಶರಣಾಗತರನ್ನಾಗಿ ಮಾಡು. ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು.
ಕೀರ್ತನೆಗಳು 17 : 14 (ERVKN)
ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು.
ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.
ಕೀರ್ತನೆಗಳು 17 : 15 (ERVKN)
ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.
❮
❯
1
2
3
4
5
6
7
8
9
10
11
12
13
14
15