ಕೀರ್ತನೆಗಳು 2 : 1 (ERVKN)
ಅನ್ಯಜನಾಂಗಗಳು ಕೋಪಗೊಂಡಿರುವುದೇಕೆ? ಅವರು ಮೂರ್ಖತನದ ಸಂಚುಗಳನ್ನು ಮಾಡುತ್ತಿರುವುದೇಕೆ?
ಕೀರ್ತನೆಗಳು 2 : 2 (ERVKN)
ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.
ಕೀರ್ತನೆಗಳು 2 : 3 (ERVKN)
“ದೇವರಿಗೂ ಆತನು ಅಭಿಷೇಕಿಸಿದ ರಾಜನಿಗೂ ವಿರೋಧವಾಗಿ ದಂಗೆ ಎದ್ದು ಸ್ವತಂತ್ರರಾಗೋಣ” ಎಂದು ಅವರು ಮಾತಾಡಿಕೊಳ್ಳುತ್ತಿದ್ದಾರೆ.
ಕೀರ್ತನೆಗಳು 2 : 4 (ERVKN)
ಆದರೆ ಒಡೆಯನೂ ಪರಲೋಕದ ರಾಜನೂ ಅವರನ್ನು ನೋಡಿ ನಗುವನು; ಆತನು ಅವರನ್ನು ಪರಿಹಾಸ್ಯಮಾಡುವನು.
ಕೀರ್ತನೆಗಳು 2 : 5 (ERVKN)
(5-6) “ಇವನನ್ನು ರಾಜನನ್ನಾಗಿ ಅಭಿಷೇಕಿಸಿದವನು ನಾನೇ. ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ಆಳುವವನು ಇವನೇ”
ಎಂದು ಅವರಿಗೆ ಕೋಪದಿಂದ ಉತ್ತರಿಸುವನು. ಆಗ ಅವರೆಲ್ಲರೂ ಭಯಗೊಳ್ಳುವರು.
ಕೀರ್ತನೆಗಳು 2 : 7 (ERVKN)
ಯೆಹೋವನ ಒಡಂಬಡಿಕೆಯ ಕುರಿತು ಹೇಳುತ್ತಿರುವೆ. ಆತನು ನನಗೆ, “ಈ ಹೊತ್ತು ನಾನು ನಿನಗೆ ತಂದೆಯಾದೆ! ನೀನೇ ನನ್ನ ಮಗನು.
ಕೀರ್ತನೆಗಳು 2 : 8 (ERVKN)
ನೀನು ಕೇಳಿಕೊಂಡರೆ ಅನ್ಯಜನಾಂಗಗಳನ್ನು ನಿನಗೆ ಅಧೀನಪಡಿಸುವೆನು. ಭೂಮಿಯ ಮೇಲಿರುವ ಜನರೆಲ್ಲರೂ ನಿನ್ನವರಾಗುವರು!
ಕೀರ್ತನೆಗಳು 2 : 9 (ERVKN)
ಕಬ್ಬಿಣದ ಗದೆಯು ಮಣ್ಣಿನ ಮಡಿಕೆಯನ್ನು ನುಚ್ಚುನೂರುಮಾಡುವಂತೆ ನೀನು ಅನ್ಯಜನಾಂಗಗಳನ್ನು ನಾಶಪಡಿಸುವೆ” ಎಂದು ಹೇಳಿದನು.
ಕೀರ್ತನೆಗಳು 2 : 10 (ERVKN)
ಆದ್ದರಿಂದ ರಾಜರುಗಳೇ, ವಿವೇಕಿಗಳಾಗಿರಿ. ಅಧಿಪತಿಗಳೇ, ಬುದ್ಧಿಮಾತುಗಳಿಗೆ ಕಿವಿಗೊಡಿರಿ.
ಕೀರ್ತನೆಗಳು 2 : 11 (ERVKN)
ಯೆಹೋವನಿಗೆ ಭಯಭಕ್ತಿಯಿಂದ ವಿಧೇಯರಾಗಿರಿ, ನಡುಗುತ್ತಾ ಉಲ್ಲಾಸಪಡಿರಿ.
ಕೀರ್ತನೆಗಳು 2 : 12 (ERVKN)
ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು
ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!
❮
❯
1
2
3
4
5
6
7
8
9
10
11
12