ಕೀರ್ತನೆಗಳು 21 : 1 (ERVKN)
ಯೆಹೋವನೇ, ನಿನ್ನ ಬಲವು ರಾಜನನ್ನು ಸಂತೋಷಗೊಳಿಸುವುದು. ನಿನ್ನ ರಕ್ಷಣೆಯು ಅವನನ್ನು ಹರ್ಷಗೊಳಿಸುವುದು.
ಕೀರ್ತನೆಗಳು 21 : 2 (ERVKN)
ರಾಜನು ನಿನ್ನಲ್ಲಿ ಪ್ರಾರ್ಥಿಸಿದಾಗ ನೀನು ಅವನ ಕೋರಿಕೆಗಳನ್ನೆಲ್ಲಾ ಈಡೇರಿಸಿದೆ.
ಕೀರ್ತನೆಗಳು 21 : 3 (ERVKN)
ನೀನು ರಾಜನನ್ನು ಬಹಳವಾಗಿ ಆಶೀರ್ವದಿಸಿರುವೆ. ಅವನ ತಲೆಗೆ ಬಂಗಾರದ ಕಿರೀಟವನ್ನು ತೊಡಿಸಿರುವೆ.
ಕೀರ್ತನೆಗಳು 21 : 4 (ERVKN)
ಅವನು ದೀರ್ಘಾಯುಷ್ಯವನ್ನು ಕೇಳಿಕೊಂಡಾಗ ನೀನು ದಯಪಾಲಿಸಿದೆ. ದೇವರೇ, ನೀನು ರಾಜನಿಗೆ ಶಾಶ್ವತವಾದ ಜೀವಿತವನ್ನು ಅನುಗ್ರಹಿಸಿದೆ.
ಕೀರ್ತನೆಗಳು 21 : 5 (ERVKN)
ನೀನು ರಾಜನಿಗೆ ಜಯವನ್ನು ದೊರಕಿಸಿ ಅವನಿಗೆ ಗೌರವವನ್ನೂ ಹೊಗಳಿಕೆಯನ್ನೂ ಬರಮಾಡಿದೆ.
ಕೀರ್ತನೆಗಳು 21 : 6 (ERVKN)
ನೀನು ರಾಜನಿಗೆ ಶಾಶ್ವತವಾದ ಆಶೀರ್ವಾದವನ್ನು ಕೊಟ್ಟಿರುವೆ. ಅವನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡುವನು.
ಕೀರ್ತನೆಗಳು 21 : 7 (ERVKN)
ರಾಜನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಮಹೋನ್ನತನಾದ ದೇವರು ಅವನನ್ನು ನಿರಾಶೆಗೊಳಿಸುವುದಿಲ್ಲ.
ಕೀರ್ತನೆಗಳು 21 : 8 (ERVKN)
ದೇವರೇ, ನಿನ್ನ ಬಲಿಷ್ಠತನವನ್ನು ನಿನ್ನ ಶತ್ರುಗಳಿಗೆಲ್ಲ ನೀನು ತೋರಿಸುವೆ. ನೀನು ದ್ವೇಷಿಸುವವರನ್ನು ನಿನ್ನ ಶಕ್ತಿಯು ಸೋಲಿಸುವುದು.
ಕೀರ್ತನೆಗಳು 21 : 9 (ERVKN)
ಯೆಹೋವನೇ, ನೀನು ರಾಜನೊಂದಿರುವಾಗ ಅವನು ಉರಿಯುವ ಕುಲಿಮೆಯಂತಿರುವನು.
ಅವನ ಕೋಪವು ಧಗಧಗಿಸುವ ಬೆಂಕಿಯಂತೆ ಸುಡುವುದು; ಅವನು ಶತ್ರುಗಳನ್ನು ನಾಶಮಾಡುವನು.
ಕೀರ್ತನೆಗಳು 21 : 10 (ERVKN)
ಅವನ ಶತ್ರುಗಳ ಕುಟುಂಬಗಳು ನಾಶವಾಗುತ್ತವೆ; ಅವು ಭೂಮಿಯ ಮೇಲೆ ಇಲ್ಲವಾಗುತ್ತವೆ.
ಕೀರ್ತನೆಗಳು 21 : 11 (ERVKN)
ಯಾಕೆಂದರೆ, ಅವರು ನಿನಗೆ ವಿರೋಧವಾಗಿ ದುರಾಲೋಚನೆಗಳನ್ನು ಮಾಡಿದರು. ಅವರು ಕುತಂತ್ರಗಳನ್ನು ಮಾಡಿದರೂ ಯಶಸ್ವಿಯಾಗಲಿಲ್ಲ.
ಕೀರ್ತನೆಗಳು 21 : 12 (ERVKN)
ನಿನ್ನ ಬಿಲ್ಲುಗಳಿಂದ ಬಾಣಗಳನ್ನು ನೀನು ಎಸೆಯುವಾಗ ಅವರು ಬೆನ್ನುಕೊಟ್ಟು ಓಡಿಹೋಗುವರು.
ಕೀರ್ತನೆಗಳು 21 : 13 (ERVKN)
ಯೆಹೋವನೇ, ನಿನ್ನ ಪರಾಕ್ರಮಕ್ಕಾಗಿ ನಿನ್ನನ್ನು ಕೊಂಡಾಡುವೆನು. ನಿನ್ನ ಮಹತ್ವದ ಬಗ್ಗೆ ವಾದ್ಯ ನುಡಿಸುತ್ತಾ ಹಾಡುವೆವು.

1 2 3 4 5 6 7 8 9 10 11 12 13