ಕೀರ್ತನೆಗಳು 21 : 1 (ERVKN)
ಯೆಹೋವನೇ, ನಿನ್ನ ಬಲವು ರಾಜನನ್ನು ಸಂತೋಷಗೊಳಿಸುವುದು. [QBR2] ನಿನ್ನ ರಕ್ಷಣೆಯು ಅವನನ್ನು ಹರ್ಷಗೊಳಿಸುವುದು. [QBR]
ಕೀರ್ತನೆಗಳು 21 : 2 (ERVKN)
ರಾಜನು ನಿನ್ನಲ್ಲಿ ಪ್ರಾರ್ಥಿಸಿದಾಗ [QBR2] ನೀನು ಅವನ ಕೋರಿಕೆಗಳನ್ನೆಲ್ಲಾ ಈಡೇರಿಸಿದೆ.
ಕೀರ್ತನೆಗಳು 21 : 3 (ERVKN)
ನೀನು ರಾಜನನ್ನು ಬಹಳವಾಗಿ ಆಶೀರ್ವದಿಸಿರುವೆ. [QBR2] ಅವನ ತಲೆಗೆ ಬಂಗಾರದ ಕಿರೀಟವನ್ನು ತೊಡಿಸಿರುವೆ. [QBR]
ಕೀರ್ತನೆಗಳು 21 : 4 (ERVKN)
ಅವನು ದೀರ್ಘಾಯುಷ್ಯವನ್ನು ಕೇಳಿಕೊಂಡಾಗ ನೀನು ದಯಪಾಲಿಸಿದೆ. [QBR2] ದೇವರೇ, ನೀನು ರಾಜನಿಗೆ ಶಾಶ್ವತವಾದ ಜೀವಿತವನ್ನು ಅನುಗ್ರಹಿಸಿದೆ. [QBR]
ಕೀರ್ತನೆಗಳು 21 : 5 (ERVKN)
ನೀನು ರಾಜನಿಗೆ ಜಯವನ್ನು ದೊರಕಿಸಿ [QBR2] ಅವನಿಗೆ ಗೌರವವನ್ನೂ ಹೊಗಳಿಕೆಯನ್ನೂ ಬರಮಾಡಿದೆ. [QBR]
ಕೀರ್ತನೆಗಳು 21 : 6 (ERVKN)
ನೀನು ರಾಜನಿಗೆ ಶಾಶ್ವತವಾದ ಆಶೀರ್ವಾದವನ್ನು ಕೊಟ್ಟಿರುವೆ. [QBR2] ಅವನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡುವನು. [QBR]
ಕೀರ್ತನೆಗಳು 21 : 7 (ERVKN)
ರಾಜನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; [QBR2] ಮಹೋನ್ನತನಾದ ದೇವರು ಅವನನ್ನು ನಿರಾಶೆಗೊಳಿಸುವುದಿಲ್ಲ. [QBR]
ಕೀರ್ತನೆಗಳು 21 : 8 (ERVKN)
ದೇವರೇ, ನಿನ್ನ ಬಲಿಷ್ಠತನವನ್ನು ನಿನ್ನ ಶತ್ರುಗಳಿಗೆಲ್ಲ ನೀನು ತೋರಿಸುವೆ. [QBR2] ನೀನು ದ್ವೇಷಿಸುವವರನ್ನು ನಿನ್ನ ಶಕ್ತಿಯು ಸೋಲಿಸುವುದು. [QBR]
ಕೀರ್ತನೆಗಳು 21 : 9 (ERVKN)
ಯೆಹೋವನೇ, ನೀನು ರಾಜನೊಂದಿರುವಾಗ [QBR2] ಅವನು ಉರಿಯುವ ಕುಲಿಮೆಯಂತಿರುವನು. [QBR] ಅವನ ಕೋಪವು ಧಗಧಗಿಸುವ ಬೆಂಕಿಯಂತೆ ಸುಡುವುದು; [QBR2] ಅವನು ಶತ್ರುಗಳನ್ನು ನಾಶಮಾಡುವನು. [QBR]
ಕೀರ್ತನೆಗಳು 21 : 10 (ERVKN)
ಅವನ ಶತ್ರುಗಳ ಕುಟುಂಬಗಳು ನಾಶವಾಗುತ್ತವೆ; [QBR2] ಅವು ಭೂಮಿಯ ಮೇಲೆ ಇಲ್ಲವಾಗುತ್ತವೆ. [QBR]
ಕೀರ್ತನೆಗಳು 21 : 11 (ERVKN)
ಯಾಕೆಂದರೆ, ಅವರು ನಿನಗೆ ವಿರೋಧವಾಗಿ ದುರಾಲೋಚನೆಗಳನ್ನು ಮಾಡಿದರು. [QBR2] ಅವರು ಕುತಂತ್ರಗಳನ್ನು ಮಾಡಿದರೂ ಯಶಸ್ವಿಯಾಗಲಿಲ್ಲ. [QBR]
ಕೀರ್ತನೆಗಳು 21 : 12 (ERVKN)
ನಿನ್ನ ಬಿಲ್ಲುಗಳಿಂದ ಬಾಣಗಳನ್ನು ನೀನು ಎಸೆಯುವಾಗ [QBR2] ಅವರು ಬೆನ್ನುಕೊಟ್ಟು ಓಡಿಹೋಗುವರು.
ಕೀರ್ತನೆಗಳು 21 : 13 (ERVKN)
ಯೆಹೋವನೇ, ನಿನ್ನ ಪರಾಕ್ರಮಕ್ಕಾಗಿ ನಿನ್ನನ್ನು ಕೊಂಡಾಡುವೆನು. [QBR2] ನಿನ್ನ ಮಹತ್ವದ ಬಗ್ಗೆ ವಾದ್ಯ ನುಡಿಸುತ್ತಾ ಹಾಡುವೆವು. [PE]
❮
❯