ಕೀರ್ತನೆಗಳು 22 : 1 (ERVKN)
ನನ್ನ ದೇವರೇ, ನನ್ನ ದೇವರೇ! ಯಾಕೆ ನನ್ನನ್ನು ತೊರೆದಿರುವೆ? ನನ್ನನ್ನು ರಕ್ಷಿಸದೆ ಯಾಕೆ ಬಹುದೂರವಾಗಿರುವೆ! ಸಹಾಯಕ್ಕಾಗಿ ನಾನು ಗೋಳಾಡುತ್ತಿದ್ದರೂ ಕೇಳದೆ ಯಾಕೆ ಬಹದೂರವಾಗಿರುವೆ?
ಕೀರ್ತನೆಗಳು 22 : 2 (ERVKN)
ನನ್ನ ದೇವರೇ, ಹಗಲಿನಲ್ಲಿ ನಾನು ನಿನ್ನನ್ನು ಕೂಗಿಕೊಂಡೆನು, ಆದರೂ ನೀನು ನನಗೆ ಉತ್ತರಿಸಲಿಲ್ಲ.
ರಾತ್ರಿಯಲ್ಲೂ ನಿನ್ನನ್ನು ಕೂಗಿಕೊಳ್ಳುತ್ತಲೇ ಇದ್ದೆನು.
ಕೀರ್ತನೆಗಳು 22 : 3 (ERVKN)
ದೇವರೇ, ಪರಿಶುದ್ಧನು ನೀನೇ. ನೀನು ರಾಜನಂತೆ ಕುಳಿತಿರುವೆ. ಇಸ್ರೇಲರ ಸ್ತುತಿಗಳೇ ನಿನ್ನ ಸಿಂಹಾಸನ.
ಕೀರ್ತನೆಗಳು 22 : 4 (ERVKN)
ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟಿದ್ದರು. ಅವರು ನಿನ್ನಲ್ಲಿಯೇ ಭರವಸವಿಟ್ಟಿದ್ದರು, ನೀನು ಅವರನ್ನು ರಕ್ಷಿಸಿದೆ.
ಕೀರ್ತನೆಗಳು 22 : 5 (ERVKN)
ನಮ್ಮ ಪೂರ್ವಿಕರು ನಿನ್ನಲ್ಲಿ ಮೊರೆಯಿಟ್ಟಾಗ ಅವರನ್ನು ಶತ್ರುಗಳಿಂದ ಬಿಡಿಸಿದೆ. ನಿನ್ನಲ್ಲಿ ಭರವಸವಿಟ್ಟಿದ್ದ ಅವರಿಗೆ ನಿರಾಶೆಯಾಗಲಿಲ್ಲ.
ಕೀರ್ತನೆಗಳು 22 : 6 (ERVKN)
ಹೀಗಿರಲು, ನಾನು ಹುಳವೇ? ನಾನು ಮನುಷ್ಯನಲ್ಲವೇ? ನನ್ನ ವಿಷಯದಲ್ಲಿ ಜನರು ನಾಚಿಕೆಪಡುತ್ತಾರೆ; ಅವರು ನನ್ನನ್ನು ತಿರಸ್ಕರಿಸುತ್ತಾರೆ.
ಕೀರ್ತನೆಗಳು 22 : 7 (ERVKN)
ನನ್ನನ್ನು ನೋಡಿದವರೆಲ್ಲರೂ ಗೇಲಿಮಾಡುವರು. ಅವರು ಓರೆ ತುಟಿಮಾಡಿ ತಲೆಯಾಡಿಸುತ್ತಾ,
ಕೀರ್ತನೆಗಳು 22 : 8 (ERVKN)
“ಯೆಹೋವನಿಗೆ ಮೊರೆಯಿಡು, ಆತನು ನಿನ್ನನ್ನು ರಕ್ಷಿಸಬಹುದು. ಆತನು ನಿನ್ನನ್ನು ಬಹಳವಾಗಿ ಇಷ್ಟಪಡುವುದಾದರೆ ನಿನ್ನನ್ನು ಖಂಡಿತವಾಗಿ ರಕ್ಷಿಸುವನು” ಅನ್ನುತ್ತಾರೆ.
ಕೀರ್ತನೆಗಳು 22 : 9 (ERVKN)
ನಾನಂತೂ ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ಹುಟ್ಟಿದ ದಿನದಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ. ನಾನಿನ್ನೂ ತಾಯಿಯ ಗರ್ಭದಲ್ಲಿದ್ದಾಗ ನನಗೆ ಭರವಸೆ ನೀಡಿ ಸಂತೈಸಿದವನು ನೀನೇ.
ಕೀರ್ತನೆಗಳು 22 : 10 (ERVKN)
ಹುಟ್ಟಿದ ದಿನದಿಂದಲೂ ನೀನೇ ನನ್ನ ದೇವರಾಗಿರುವೆ. ತಾಯಿಯ ಗರ್ಭದಿಂದ ಬಂದಂದಿನಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ.
ಕೀರ್ತನೆಗಳು 22 : 11 (ERVKN)
ಹೀಗಿರಲು, ನನ್ನನ್ನು ತೊರೆಯಬೇಡ! ಆಪತ್ತು ಸಮೀಪಿಸಿದೆ, ನನಗೆ ಸಹಾಯಮಾಡಲು ಯಾರೂ ಇಲ್ಲ.
ಕೀರ್ತನೆಗಳು 22 : 12 (ERVKN)
ಜನರು ನನ್ನನ್ನು ಸುತ್ತುಗಟ್ಟಿದ್ದಾರೆ; ಅವರು ಬಲಿಷ್ಠವಾದ ಹೋರಿಗಳಂತಿದ್ದಾರೆ.
ಕೀರ್ತನೆಗಳು 22 : 13 (ERVKN)
ಪ್ರಾಣಿಯೊಂದನ್ನು ಸೀಳಿಹಾಕುತ್ತಾ ಗರ್ಜಿಸುವ ಸಿಂಹದಂತೆ ಅವರ ಬಾಯಿಗಳು ಅಗಲವಾಗಿ ತೆರೆದಿವೆ.
ಕೀರ್ತನೆಗಳು 22 : 14 (ERVKN)
ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ;
ಮೂಳೆಗಳು ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ.
ಕೀರ್ತನೆಗಳು 22 : 15 (ERVKN)
ನನ್ನ ಶಕ್ತಿಯು ಒಡೆದುಹೋದ ಮಡಿಕೆಯ ಒಣ ತುಂಡಿನಂತಿದೆ. ನನ್ನ ನಾಲಿಗೆಯು ಬಾಯಿ ಮೇಲ್ಭಾಗಕ್ಕೆ ಅಂಟಿಕೊಳ್ಳುತ್ತಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸಿರುವೆ.
ಕೀರ್ತನೆಗಳು 22 : 16 (ERVKN)
ದುಷ್ಟರು ನಾಯಿಗಳಂತೆ ನನ್ನನ್ನು ಸುತ್ತಿಕೊಂಡಿದ್ದಾರೆ. ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. *ಅವರು … ತಿವಿದಿದ್ದಾರೆ ಪುರಾತನ ಕಾಲದ ಗ್ರೀಕ್ ಅನುವಾದದ ಪ್ರಕಾರ. “ಅವರು ನನ್ನ ಕೈಗಳನ್ನು ಮತ್ತು ಕಾಲುಗಳನ್ನು ತಿವಿದಿದ್ದಾರೆ.” ಹೀಬ್ರೂವಿನಲ್ಲಿ, “ತಿವಿದಿದ್ದಾರೆ” ಎಂಬ ಪದವೇ “ಸಿಂಹದಂತೆ” ಎಂಬರ್ಥವನ್ನು ಕೊಡುತ್ತದೆ.
ಕೀರ್ತನೆಗಳು 22 : 17 (ERVKN)
ನನ್ನ ಮೂಳೆಗಳು ಎದ್ದುಕಾಣುತ್ತಿವೆ! ಜನರು ನನ್ನನ್ನು ದಿಟ್ಟಿಸಿ ನೋಡುತ್ತಿದ್ದಾರೆ! ಅವರು ನನ್ನನ್ನೇ ನೋಡುತ್ತಿದ್ದಾರೆ!
ಕೀರ್ತನೆಗಳು 22 : 18 (ERVKN)
ಅವರು ನನ್ನ ಮೇಲ್ಹೊದಿಕೆಯನ್ನು ಪಾಲು ಮಾಡಿಕೊಳ್ಳುವರು; ನನ್ನ ನಿಲುವಂಗಿಗಾಗಿ ಚೀಟುಹಾಕುವರು.
ಕೀರ್ತನೆಗಳು 22 : 19 (ERVKN)
ಯೆಹೋವನೇ, ನನ್ನನ್ನು ತೊರೆಯಬೇಡ! ನೀನೇ ನನ್ನ ಬಲ! ಬೇಗನೆ ನನಗೆ ಸಹಾಯಮಾಡು!
ಕೀರ್ತನೆಗಳು 22 : 20 (ERVKN)
ಖಡ್ಗಕ್ಕೆ ಸಿಕ್ಕದಂತೆ ತನ್ನ ಜೀವವನ್ನು ರಕ್ಷಿಸು. ನನ್ನ ಅಮೂಲ್ಯವಾದ ಜೀವವು ನಾಯಿಗಳ ಪಾಲಾಗದಂತೆ ರಕ್ಷಿಸು.
ಕೀರ್ತನೆಗಳು 22 : 21 (ERVKN)
ನನ್ನನ್ನು ಸಿಂಹದ ಬಾಯಿಂದ ಬಿಡಿಸು; ಹೋರಿಯ ಕೊಂಬುಗಳಿಂದ ನನ್ನನ್ನು ಸಂರಕ್ಷಿಸು.
ಕೀರ್ತನೆಗಳು 22 : 22 (ERVKN)
ನಿನ್ನ ಕುರಿತು ನನ್ನ ಸಹೋದರರಿಗೆ ಹೇಳುವೆನು; ಮಹಾಸಭೆಯಲ್ಲಿ ನಿನ್ನನ್ನು ಸುತ್ತಿಸುವೆನು.
ಕೀರ್ತನೆಗಳು 22 : 23 (ERVKN)
ಯೆಹೋವನನ್ನು ಆರಾಧಿಸುವವರೇ, ಆತನಿಗೆ ಸ್ತೋತ್ರಮಾಡಿರಿ. ಯಾಕೋಬನ ಸಂತತಿಗಳವರೇ, ಯೆಹೋವನಿಗೆ ಘನಮಾನವನ್ನು ಸಲ್ಲಿಸಿರಿ! ಇಸ್ರೇಲರೇ, ಆತನಲ್ಲಿ ಭಯಭಕ್ತಿಯಿಂದಿರಿ!
ಕೀರ್ತನೆಗಳು 22 : 24 (ERVKN)
ಯಾಕೆಂದರೆ ಇಕ್ಕಟ್ಟಿನಲ್ಲಿರುವ ಬಡವರಿಗೆ ಆತನು ಸಹಾಯಮಾಡುತ್ತಾನೆ; ಅವರ ವಿಷಯದಲ್ಲಿ ಆತನು ನಾಚಿಕೊಳ್ಳುವುದಿಲ್ಲ; ಆತನು ಅವರನ್ನು ದ್ವೇಷಿಸುವುದಿಲ್ಲ.
ಅವರು ಆತನನ್ನು ಕೂಗಿಕೊಳ್ಳುವಾಗ ಆತನು ಅವರಿಗೆ ಮರೆಯಾಗುವುದಿಲ್ಲ.
ಕೀರ್ತನೆಗಳು 22 : 25 (ERVKN)
ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ನನ್ನ ಯಜ್ಞಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.
ಕೀರ್ತನೆಗಳು 22 : 26 (ERVKN)
ಬಡವರು ತಿಂದು ತೃಪ್ತರಾಗುವರು. ಯೆಹೋವನಿಗಾಗಿ ಹುಡುಕುತ್ತಾ ಬಂದವರೇ, ಆತನಿಗೆ ಸ್ತೋತ್ರಮಾಡಿರಿ! ನಿಮ್ಮ ಹೃದಯಗಳು ಯಾವಾಗಲೂ ಸಂತೋಷವಾಗಿರಲಿ. ಸಂತೋಷವಾಗಿರಲಿ ಅಕ್ಷರಶಃ, “ಜೀವಿಸಲಿ.”
ಕೀರ್ತನೆಗಳು 22 : 27 (ERVKN)
ದೂರದೇಶಗಳಲ್ಲಿರುವ ಜನರೆಲ್ಲರೂ ಯೆಹೋವನನ್ನು ಜ್ಞಾಪಿಸಿಕೊಂಡು ಆತನ ಬಳಿಗೆ ಹಿಂತಿರುಗಲಿ. ವಿದೇಶಗಳಿಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸಲಿ.
ಕೀರ್ತನೆಗಳು 22 : 28 (ERVKN)
ಯಾಕೆಂದರೆ ಯೆಹೋವನೇ ರಾಜನು! ಆತನು ಜನಾಂಗಗಳನ್ನೆಲ್ಲಾ ಆಳುವನು.
ಕೀರ್ತನೆಗಳು 22 : 29 (ERVKN)
ಬಲಿಷ್ಠರೂ ದೃಢಕಾಯರೂ ತಿಂದು ದೇವರಮುಂದೆ ಅಡ್ಡಬೀಳುವರು. ಸಾಯುವವರೂ ಸತ್ತುಹೋಗಿರುವವರೂ ಆತನ ಮುಂದೆ ಅಡ್ಡಬೀಳುವರು.
ಕೀರ್ತನೆಗಳು 22 : 30 (ERVKN)
ಮುಂದಿನ ಕಾಲದಲ್ಲಿ ನಮ್ಮ ಸಂತತಿಗಳವರು ಯೆಹೋವನ ಸೇವೆಮಾಡುವರು. ಆತನ ಕುರಿತಾಗಿ ಯಾವಾಗಲೂ ಹೇಳುತ್ತಿರುವರು.
ಕೀರ್ತನೆಗಳು 22 : 31 (ERVKN)
ಪ್ರತಿಯೊಂದು ತಲೆಮಾರಿನವರೂ ತಮ್ಮ ಮಕ್ಕಳಿಗೆ ಆತನ ಒಳ್ಳೆಯ ಕಾರ್ಯಗಳ ಬಗ್ಗೆ ಹೇಳುವರು. ಈ ವಚನಗಳನ್ನು ಹೀಬ್ರೂ ಭಾಷೆಯಲ್ಲಿ ಅರ್ಥಮಾಡಿಕೊಳ್ಳಲು ಕಷ್ಟ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31