ಕೀರ್ತನೆಗಳು 25 : 1 (ERVKN)
ಯೆಹೋವನೇ, ನಿನ್ನಲ್ಲೇ ಮನಸ್ಸಿಟ್ಟಿದ್ದೇನೆ.
ಕೀರ್ತನೆಗಳು 25 : 2 (ERVKN)
ನನ್ನ ದೇವರೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ವೈರಿಗಳು ನನ್ನನ್ನು ನೋಡಿ ಗೇಲಿ ಮಾಡದಂತಾಗಲಿ!
ಕೀರ್ತನೆಗಳು 25 : 3 (ERVKN)
ನಿನ್ನಲ್ಲಿ ಭರವಸವಿಟ್ಟಿರುವವರು ನಿರಾಶರಾಗುವುದಿಲ್ಲ ದ್ರೋಹಿಗಳಾದರೋ ನಿರಾಶರಾಗುವರು. ಅವರಿಗೆ ಏನೂ ದೊರೆಯುವುದಿಲ್ಲ.
ಕೀರ್ತನೆಗಳು 25 : 4 (ERVKN)
ಯೆಹೋವನೇ ನಿನ್ನ ಮಾರ್ಗಗಳನ್ನು ನನಗೆ ತಿಳಿಸು. ನಿನ್ನ ಮಾರ್ಗಗಳನ್ನು ನನಗೆ ಉಪದೇಶಿಸು.
ಕೀರ್ತನೆಗಳು 25 : 5 (ERVKN)
ನನಗೆ ಮಾರ್ಗದರ್ಶನ ನೀಡು; ನಿನ್ನ ಸತ್ಯಗಳನ್ನು ನನಗೆ ಉಪದೇಶಿಸು. ನೀನೇ ನನ್ನ ದೇವರು, ನೀನೇ ನನ್ನ ರಕ್ಷಕ. ಹಗಲೆಲ್ಲಾ ನಿನ್ನಲ್ಲಿ ಭರವಸವಿಟ್ಟಿರುವೆ.
ಕೀರ್ತನೆಗಳು 25 : 6 (ERVKN)
ಯೆಹೋವನೇ, ನನಗೆ ಕರುಣೆ ತೋರಬೇಕೆಂಬುದನ್ನು ಜ್ಞಾಪಿಸಿಕೊ. ನಿನ್ನ ಶಾಶ್ವತವಾದ ಪ್ರೀತಿಯನ್ನು ನನಗೆ ತೋರಿಸು.
ಕೀರ್ತನೆಗಳು 25 : 7 (ERVKN)
ನಾನು ಯೌವನಸ್ಥನಾಗಿದ್ದಾಗ ಮಾಡಿದ ಪಾಪಗಳನ್ನಾಗಲಿ ಕೆಟ್ಟಕಾರ್ಯಗಳನ್ನಾಗಲಿ ಜ್ಞಾಪಿಸಿಕೊಳ್ಳಬೇಡ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿನ ನಿಮಿತ್ತ ನನ್ನನ್ನು ಪ್ರೀತಿಯಿಂದ ಜ್ಞಾಪಿಸಿಕೊ.
ಕೀರ್ತನೆಗಳು 25 : 8 (ERVKN)
ಯೆಹೋವನು ಒಳ್ಳೆಯವನೂ ಸತ್ಯಸ್ವರೂಪನೂ ಆಗಿದ್ದಾನೆ. ಆತನು ಪಾಪಿಗಳಿಗೆ ಜೀವಮಾರ್ಗವನ್ನು ಬೋಧಿಸುವನು.
ಕೀರ್ತನೆಗಳು 25 : 9 (ERVKN)
ಆತನು ದೀನರಿಗೆ ತನ್ನ ಮಾರ್ಗಗಳನ್ನು ಉಪದೇಶಿಸುವನು. ಆತನು ಅವರನ್ನು ತನ್ನ ನ್ಯಾಯಾನುಸಾರವಾಗಿ ನಡೆಸುವನು.
ಕೀರ್ತನೆಗಳು 25 : 10 (ERVKN)
ಯೆಹೋವನ ಒಡಂಬಡಿಕೆಯನ್ನೂ ವಾಗ್ದಾನಗಳನ್ನೂ ಅನುಸರಿಸುವ ಜನರಿಗೆ ಆತನ ಮಾರ್ಗಗಳೆಲ್ಲ ಕರುಣೆಯುಳ್ಳವೂ ಸತ್ಯವೂ ಆಗಿವೆ.
ಕೀರ್ತನೆಗಳು 25 : 11 (ERVKN)
ಯೆಹೋವನೇ, ನಾನು ಅನೇಕ ಪಾಪಗಳನ್ನು ಮಾಡಿದ್ದೇನೆ. ಆದರೆ ನೀನು ನಿನ್ನ ಹೆಸರಿನ ನಿಮಿತ್ತ ಅವುಗಳನ್ನೆಲ್ಲಾ ಕ್ಷಮಿಸಿಬಿಟ್ಟೆ.
ಕೀರ್ತನೆಗಳು 25 : 12 (ERVKN)
ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಅತ್ಯುತ್ತಮವಾದ ಜೀವಮಾರ್ಗವನ್ನು ತೋರಿಸುವನು.
ಕೀರ್ತನೆಗಳು 25 : 13 (ERVKN)
ಅವನು ಸುಖದಿಂದಿರುವನು. ಆತನು ವಾಗ್ದಾನ ಮಾಡಿದ ದೇಶವನ್ನು ಅವನ ಮಕ್ಕಳು ಅನುಭವಿಸುವರು.
ಕೀರ್ತನೆಗಳು 25 : 14 (ERVKN)
ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.
ಕೀರ್ತನೆಗಳು 25 : 15 (ERVKN)
ನನ್ನ ಕಣ್ಣುಗಳು ಸಹಾಯಕ್ಕಾಗಿ ಯೆಹೋವನನ್ನೇ ದೃಷ್ಟಿಸುತ್ತಿವೆ. ಆತನು ನನ್ನನ್ನು ತೊಂದರೆಗಳಿಂದ ಖಂಡಿತವಾಗಿ ಬಿಡುಸುವನು. *ಆತನು … ಬಿಡಿಸುವನು ಅಕ್ಷರಶಃ, “ಆತನು ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವನು.”
ಕೀರ್ತನೆಗಳು 25 : 16 (ERVKN)
ಯೆಹೋವನೇ, ನಾನು ಬಾಧೆಪಡುವವನೂ ಒಬ್ಬಂಟಿಗನೂ ಆಗಿದ್ದೇನೆ. ನನಗೆ ಅಭಿಮುಖನಾಗಿ ಕರುಣೆತೋರು.
ಕೀರ್ತನೆಗಳು 25 : 17 (ERVKN)
ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸು. ನನ್ನ ಸಮಸ್ಯೆಗಳನ್ನು ಪರಿಹರಿಸು.
ಕೀರ್ತನೆಗಳು 25 : 18 (ERVKN)
ಯೆಹೋವನೇ, ನನ್ನ ಸಂಕಟವನ್ನೂ ತೊಂದರೆಗಳನ್ನೂ ನೋಡು. ನನ್ನ ಪಾಪಗಳನ್ನೆಲ್ಲ ಕ್ಷಮಿಸು.
ಕೀರ್ತನೆಗಳು 25 : 19 (ERVKN)
ನನ್ನ ವೈರಿಗಳನ್ನೆಲ್ಲ ದೃಷ್ಟಿಸಿನೋಡು. ಅವರು ನನ್ನನ್ನು ದ್ವೇಷಿಸುತ್ತಾ ಕೇಡುಮಾಡಬೇಕೆಂದಿದ್ದಾರೆ.
ಕೀರ್ತನೆಗಳು 25 : 20 (ERVKN)
ದೇವರೇ, ನನ್ನನ್ನು ಕಾಪಾಡು, ನನ್ನನ್ನು ರಕ್ಷಿಸು. ನಾನು ನಿನ್ನಲ್ಲಿ ಭರವಸವಿಟ್ಟಿರುವುದರಿಂದ ನನ್ನನ್ನು ನಿರಾಶೆಗೊಳಿಸಬೇಡ.
ಕೀರ್ತನೆಗಳು 25 : 21 (ERVKN)
ದೇವರೇ, ನೀನು ನಿಜವಾಗಿಯೂ ಒಳ್ಳೆಯವನು. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ಕಾಪಾಡು.
ಕೀರ್ತನೆಗಳು 25 : 22 (ERVKN)
ದೇವರೇ, ಇಸ್ರೇಲರನ್ನು ವೈರಿಗಳಿಂದ ತಪ್ಪಿಸಿ ಕಾಪಾಡು.

1 2 3 4 5 6 7 8 9 10 11 12 13 14 15 16 17 18 19 20 21 22