ಕೀರ್ತನೆಗಳು 27 : 1 (ERVKN)
ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ. [QBR2] ನಾನು ಯಾರಿಗೂ ಭಯಪಡಬೇಕಿಲ್ಲ! [QBR] ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. [QBR2] ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ! [QBR]
ಕೀರ್ತನೆಗಳು 27 : 2 (ERVKN)
ದುಷ್ಟರು ನನ್ನನ್ನು ಕೊಲ್ಲಲು ಆಕ್ರಮಣಮಾಡುವಾಗ [QBR2] ತಾವೇ ಮುಗ್ಗರಿಸಿ ಬೀಳುವರು. [QBR]
ಕೀರ್ತನೆಗಳು 27 : 3 (ERVKN)
ಮಹಾಸೈನ್ಯವೇ ನನಗೆ ಮುತ್ತಿಗೆ ಹಾಕಿದರೂ ನಾನು ಭಯಪಡುವುದಿಲ್ಲ. [QBR2] ಸೈನಿಕರು ನನ್ನ ಮೇಲೆ ಆಕ್ರಮಣ ಮಾಡಿದರೂ ನಾನು ಹೆದರುವುದಿಲ್ಲ. ಯಾಕೆಂದರೆ ನಾನು ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.
ಕೀರ್ತನೆಗಳು 27 : 4 (ERVKN)
ನನ್ನ ಜೀವಮಾನವೆಲ್ಲಾ [QBR2] ಯೆಹೋವನ ಆಲಯದಲ್ಲಿ ವಾಸಿಸುತ್ತಾ [QBR] ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ [QBR2] ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ [QBR2] ಒಂದೇ ಒಂದು ಕೋರಿಕೆಯನ್ನು ಯೆಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರುನೋಡುತ್ತಿದ್ದೇನೆ.
ಕೀರ್ತನೆಗಳು 27 : 5 (ERVKN)
ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ; [QBR2] ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ. [QBR2] ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು. [QBR]
ಕೀರ್ತನೆಗಳು 27 : 6 (ERVKN)
ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು! [QBR2] ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು. [QBR2] ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು.
ಕೀರ್ತನೆಗಳು 27 : 7 (ERVKN)
ಯೆಹೋವನೇ, ನನ್ನ ಸ್ವರವನ್ನು ಕೇಳಿ ನನಗೆ ಉತ್ತರಿಸು. [QBR2] ನನ್ನನ್ನು ಕರುಣಿಸು. [QBR]
ಕೀರ್ತನೆಗಳು 27 : 8 (ERVKN)
ಯೆಹೋವನೇ, ನಾನು ನಿನ್ನೊಂದಿಗೆ ಹೃದಯಪೂರ್ವಕವಾಗಿ ಮಾತನಾಡಬೇಕೆಂದಿದ್ದೇನೆ. [QBR2] ದೇವರೇ, ನಾನು ನಿನ್ನ ಸನ್ನಿಧಿಗೆ ಬರುತ್ತೇನೆ. [QBR]
ಕೀರ್ತನೆಗಳು 27 : 9 (ERVKN)
ಯೆಹೋವನೇ, ನನಗೆ ವಿಮುಖನಾಗಬೇಡ: [QBR2] ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ. [QBR] ನನ್ನ ದೇವರೇ, ನನ್ನ ರಕ್ಷಕನು ನೀನೇ. [QBR2] ನನ್ನನ್ನು ಕೈ ಬಿಡಬೇಡ! ತೊರೆದುಬಿಡಬೇಡ! [QBR]
ಕೀರ್ತನೆಗಳು 27 : 10 (ERVKN)
ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; [QBR2] ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು. [QBR]
ಕೀರ್ತನೆಗಳು 27 : 11 (ERVKN)
ಯೆಹೋವನೇ, ನನಗೆ ವೈರಿಗಳಿರುವುದರಿಂದ ನಿನ್ನ ಮಾರ್ಗವನ್ನು ನನಗೆ ಉಪದೇಶಿಸಿ [QBR2] ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು. [QBR]
ಕೀರ್ತನೆಗಳು 27 : 12 (ERVKN)
ವೈರಿಗಳು ನನ್ನ ಮೇಲೆ ಆಕ್ರಮಣ ಮಾಡಿದ್ದಾರೆ. [QBR2] ನನಗೆ ಕೇಡಾಗಲೆಂದು ಸುಳ್ಳುಗಳನ್ನು ಹೇಳಿದ್ದಾರೆ. ಯೆಹೋವನೇ, ಇಂಥ ವೈರಿಗಳ ಕೈಗೆ ನನ್ನನ್ನು ಕೊಡಬೇಡ. [QBR]
ಕೀರ್ತನೆಗಳು 27 : 13 (ERVKN)
ಯೆಹೋವನ ಒಳ್ಳೆಯತನವನ್ನು [QBR2] ನಾನು ಸಾಯುವುದಕ್ಕಿಂತ ಮುಂಚೆ [*ನಾನು ಸಾಯುವುದಕ್ಕಿಂತ ಮುಂಚೆ ಅಕ್ಷರಶಃ “ಜೀವಿಸುವವರ ನಾಡಿನಲಿ.”] ನೋಡುತ್ತೇನೆ ಎಂಬ ದೃಢನಂಬಿಕೆ ನನ್ನಲ್ಲಿದೆ. [QBR]
ಕೀರ್ತನೆಗಳು 27 : 14 (ERVKN)
ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ! [QBR2] ಬಲವಾಗಿಯೂ ಧೈರ್ಯವಾಗಿಯೂ ಇರಿ! [QBR2] ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ! [PE]

1 2 3 4 5 6 7 8 9 10 11 12 13 14

BG:

Opacity:

Color:


Size:


Font: