ಕೀರ್ತನೆಗಳು 29 : 1 (ERVKN)
ದೇವಪುತ್ರರೇ, ಯೆಹೋವನನ್ನು ಸ್ತುತಿಸಿರಿ! ಆತನ ಮಹಿಮೆಯನ್ನೂ ಶಕ್ತಿಯನ್ನೂ ಸ್ತುತಿಸಿರಿ.
ಕೀರ್ತನೆಗಳು 29 : 2 (ERVKN)
ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನ ಪಡಿಸಿರಿ. ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ.
ಕೀರ್ತನೆಗಳು 29 : 3 (ERVKN)
ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು. ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾ ಸ್ವರೂಪನಾದ ದೇವರ ಸ್ವರವು ಕೇಳಿ ಬರುವುದು.
ಕೀರ್ತನೆಗಳು 29 : 4 (ERVKN)
ಯೆಹೋವನ ಸ್ವರವು ಆತನ ಶಕ್ತಿಯನ್ನೂ ಮಹಿಮೆಯನ್ನೂ ತೋರ್ಪಡಿಸುವುದು.
ಕೀರ್ತನೆಗಳು 29 : 5 (ERVKN)
ಯೆಹೋವನ ಸ್ವರವು ದೇವದಾರು ವೃಕ್ಷಗಳನ್ನು ತುಂಡುತುಂಡು ಮಾಡುತ್ತದೆ. ಯೆಹೋವನು ಲೆಬನೋನಿನ ದೇವದಾರು ವೃಕ್ಷಗಳನ್ನೂ ಮುರಿದು ಹಾಕುವನು.
ಕೀರ್ತನೆಗಳು 29 : 6 (ERVKN)
ಯೆಹೋವನು ಲೆಬನೋನನ್ನು ನಡುಗಿಸಲು ಅದು ನರ್ತಿಸುತ್ತಿರುವ ಎಳೆಕರುವಿನಂತೆ ಕಾಣುತ್ತದೆ; ಸಿರ್ಯೋನ್ ಪರ್ವತವು ಕಂಪಿಸುವಾಗ ಕುಣಿದಾಡುವ ಆಡಿನಮರಿಯಂತೆ ಕಾಣುತ್ತದೆ.
ಕೀರ್ತನೆಗಳು 29 : 7 (ERVKN)
ಯೆಹೋವನ ಗರ್ಜನಕ್ಕೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ.
ಕೀರ್ತನೆಗಳು 29 : 8 (ERVKN)
ಯೆಹೋವನ ಗರ್ಜನದಿಂದ ಅರಣ್ಯವು ಕಂಪಿಸುವುದು. ಆತನ ಗರ್ಜನಕ್ಕೆ ಕಾದೇಶ್ ಅರಣ್ಯವು ನಡುಗುವುದು.
ಕೀರ್ತನೆಗಳು 29 : 9 (ERVKN)
ಯೆಹೋವನ ಗರ್ಜನಕ್ಕೆ ಜಿಂಕೆಗಳು ಹೆದರಿಕೊಳ್ಳುತ್ತವೆ; ಕಾಡಿನ ಮರಗಳು ಬರಿದಾಗುತ್ತವೆ. ಆದರೆ ಆತನ ಆಲಯದಲ್ಲಿ ಜನರು ಆತನ ಮಹಿಮೆಯನ್ನು ಹಾಡಿಕೊಂಡಾಡುವರು.
ಕೀರ್ತನೆಗಳು 29 : 10 (ERVKN)
ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು. ಯೆಹೋವನು ಸದಾಕಾಲ ರಾಜನಾಗಿರುವನು.
ಕೀರ್ತನೆಗಳು 29 : 11 (ERVKN)
ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ. ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.

1 2 3 4 5 6 7 8 9 10 11

BG:

Opacity:

Color:


Size:


Font: