ಕೀರ್ತನೆಗಳು 29 : 1 (ERVKN)
ದೇವಪುತ್ರರೇ, *ದೇವಪುತ್ರರು “ಯಾಜಕರು” ಅಥವಾ “ದೇವದೂತರು” ಎಂಬರ್ಥವನ್ನು ಇದು ಕೊಡುತ್ತದೆ. ಯೆಹೋವನನ್ನು ಸ್ತುತಿಸಿರಿ! ಆತನ ಮಹಿಮೆಯನ್ನೂ ಶಕ್ತಿಯನ್ನೂ ಸ್ತುತಿಸಿರಿ.
ಕೀರ್ತನೆಗಳು 29 : 2 (ERVKN)
ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನಪಡಿಸಿರಿ. ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ. †ಪರಿಶುದ್ಧ … ಆರಾಧಿಸಿರಿ ಅಥವಾ “ನಿಮ್ಮ ಮಹಿಮಾಪೂರಿತವಾದ ಪರಿಶುದ್ಧ ಬಟ್ಟೆಗಳನ್ನು ಧರಿಸಿಕೊಂಡು ಆತನ ಮುಂದೆ ಅಡ್ಡಬೀಳಿರಿ.”
ಕೀರ್ತನೆಗಳು 29 : 3 (ERVKN)
ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು. ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾ ಸ್ವರೂಪನಾದ ದೇವರ ಸ್ವರವು ಕೇಳಿಬರುವುದು.
ಕೀರ್ತನೆಗಳು 29 : 4 (ERVKN)
ಯೆಹೋವನ ಸ್ವರವು ಆತನ ಶಕ್ತಿಯನ್ನೂ ಮಹಿಮೆಯನ್ನೂ ತೋರ್ಪಡಿಸುವುದು.
ಕೀರ್ತನೆಗಳು 29 : 5 (ERVKN)
ಯೆಹೋವನ ಸ್ವರವು ದೇವದಾರು ವೃಕ್ಷಗಳನ್ನು ತುಂಡುತುಂಡು ಮಾಡುತ್ತದೆ. ಯೆಹೋವನು ಲೆಬನೋನಿನ ದೇವದಾರು ವೃಕ್ಷಗಳನ್ನೂ ಮುರಿದುಹಾಕುವನು.
ಕೀರ್ತನೆಗಳು 29 : 6 (ERVKN)
ಯೆಹೋವನು ಲೆಬನೋನನ್ನು ನಡುಗಿಸಲು ಅದು ನರ್ತಿಸುತ್ತಿರುವ ಎಳೆಕರುವಿನಂತೆ ಕಾಣುತ್ತದೆ; ಸಿರ್ಯೋನ್ ಪರ್ವತವು ಕಂಪಿಸುವಾಗ ಕುಣಿದಾಡುವ ಎಳೆ ಹೋರಿಯಂತೆ ಕಾಣುತ್ತದೆ.
ಕೀರ್ತನೆಗಳು 29 : 7 (ERVKN)
ಯೆಹೋವನ ಗರ್ಜನಕ್ಕೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ.
ಕೀರ್ತನೆಗಳು 29 : 8 (ERVKN)
ಯೆಹೋವನ ಗರ್ಜನದಿಂದ ಅರಣ್ಯವು ಕಂಪಿಸುವುದು. ಆತನ ಗರ್ಜನಕ್ಕೆ ಕಾದೇಶ್ ಅರಣ್ಯವು ನಡುಗುವುದು.
ಕೀರ್ತನೆಗಳು 29 : 9 (ERVKN)
ಯೆಹೋವನ ಗರ್ಜನಕ್ಕೆ ಜಿಂಕೆಗಳು ಹೆದರಿಕೊಳ್ಳುತ್ತವೆ; ಕಾಡಿನ ಮರಗಳು ಬರಿದಾಗುತ್ತವೆ; ಆದರೆ ಆತನ ಆಲಯದಲ್ಲಿ ಜನರು ಆತನ ಮಹಿಮೆಯನ್ನು ಹಾಡಿಕೊಂಡಾಡುವರು.
ಕೀರ್ತನೆಗಳು 29 : 10 (ERVKN)
ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು. ಯೆಹೋವನು ಸದಾಕಾಲ ರಾಜನಾಗಿರುವನು.
ಕೀರ್ತನೆಗಳು 29 : 11 (ERVKN)
ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ. ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.
❮
❯