ಕೀರ್ತನೆಗಳು 31 : 1 (ERVKN)
ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ಕರುಣೆತೋರಿ ನನ್ನನ್ನು ರಕ್ಷಿಸು.
ಕೀರ್ತನೆಗಳು 31 : 2 (ERVKN)
ನನಗೆ ಕಿವಿಗೊಡು. ಬೇಗನೆ ಬಂದು, ನನ್ನನ್ನು ರಕ್ಷಿಸು.
ನನಗೆ ಬಂಡೆಯೂ ನನ್ನ ಆಶ್ರಯಸ್ಥಾನವೂ ಕೋಟೆಯೂ ಆಗಿದ್ದು ನನ್ನನ್ನು ಕಾಪಾಡು!
ಕೀರ್ತನೆಗಳು 31 : 3 (ERVKN)
ನೀನೇ ನನ್ನ ಬಂಡೆಯೂ ಕೋಟೆಯೂ ಆಗಿರುವುದರಿಂದ ನಿನ್ನ ಹೆಸರಿನ ಘನತೆಗಾಗಿ ನನ್ನನ್ನು ನಡೆಸು; ನನಗೆ ಮಾರ್ಗದರ್ಶನ ನೀಡು.
ಕೀರ್ತನೆಗಳು 31 : 4 (ERVKN)
ನನ್ನ ವೈರಿಗಳು ನನಗೆ ಬಲೆಬೀಸಿದ್ದಾರೆ. ಅವನ ಬಲೆಗೆ ಸಿಕ್ಕಿಬೀಳದಂತೆ ನನ್ನನ್ನು ರಕ್ಷಿಸು. ನೀನೇ ನನ್ನ ಆಶ್ರಯಸ್ಥಾನವಾಗಿರುವೆ.
ಕೀರ್ತನೆಗಳು 31 : 5 (ERVKN)
ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ. ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿರುವೆ. ನನ್ನನ್ನು ರಕ್ಷಿಸು!
ಕೀರ್ತನೆಗಳು 31 : 6 (ERVKN)
ಸುಳ್ಳುದೇವರುಗಳನ್ನು ಪೂಜಿಸುವವರನ್ನು ನಾನು ದ್ವೇಷಿಸುವೆನು. ನಾನು ಯೆಹೋವನಲ್ಲಿಯೇ ಭರವಸವಿಡುವೆನು.
ಕೀರ್ತನೆಗಳು 31 : 7 (ERVKN)
ದೇವರೇ, ನಿನ್ನ ಕರುಣೆಯು ನನ್ನನ್ನು ಉಲ್ಲಾಸಗೊಳಿಸುವುದು. ನನ್ನ ಸಂಕಟವನ್ನು ನೀನು ನೋಡಿರುವೆ; ನನಗಿರುವ ಆಪತ್ತುಗಳು ನಿನಗೆ ತಿಳಿದಿವೆ.
ಕೀರ್ತನೆಗಳು 31 : 8 (ERVKN)
ವೈರಿಗಳು ನನ್ನನ್ನು ಸೆರೆಹಿಡಿದೊಯ್ಯಲು ನೀನು ಬಿಟ್ಟುಕೊಡುವುದಿಲ್ಲ; ನನ್ನನ್ನು ಅವರ ಬಲೆಗಳಿಂದ ಬಿಡುಗಡೆ ಮಾಡುವೆ.
ಕೀರ್ತನೆಗಳು 31 : 9 (ERVKN)
ಯೆಹೋವನೇ, ನನಗೆ ಅನೇಕ ಇಕ್ಕಟ್ಟುಗಳಿವೆ; ನನ್ನನ್ನು ಕರುಣಿಸು. ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ, ನನ್ನ ಗಂಟಲು ನೋಯುತ್ತಿದೆ, ಹೊಟ್ಟೆಯೂ ನೋಯುತ್ತಿದೆ.
ಕೀರ್ತನೆಗಳು 31 : 10 (ERVKN)
ನನ್ನ ಜೀವಿತವು *ಜೀವಿತ ಅಕ್ಷರಶಃ, “ಪ್ರಾಣ. “ ದುಃಖದಲ್ಲಿ ಕೊನೆಗೊಳ್ಳುತ್ತಿದೆ. ನನ್ನ ವರ್ಷಗಳು ನಿಟ್ಟುಸಿರಿನಲ್ಲೇ ಕಳೆದುಹೋಗುತ್ತಿವೆ.
ನನ್ನ ಇಕ್ಕಟ್ಟುಗಳು ನನ್ನ ಶಕ್ತಿಯನ್ನು ಕುಂದಿಸುತ್ತಿವೆ. ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ. ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ ಅಕ್ಷರಶಃ, “ನನ್ನ ಎಲುಬುಗಳು ಸವೆದುಹೋಗುತ್ತಿವೆ.”
ಕೀರ್ತನೆಗಳು 31 : 11 (ERVKN)
ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ; ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು;
ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು; ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು.
ಕೀರ್ತನೆಗಳು 31 : 12 (ERVKN)
ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು. ಕಳೆದುಹೋದ ಉಪಕರಣದಂತೆ ಅವರು ನನ್ನನ್ನು ಮರೆತೇಬಿಟ್ಟಿದ್ದಾರೆ.
ಕೀರ್ತನೆಗಳು 31 : 13 (ERVKN)
ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ. ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ.
ಕೀರ್ತನೆಗಳು 31 : 14 (ERVKN)
ಯೆಹೋವನೇ, ನಾನಂತೂ ನಿನ್ನಲ್ಲೇ ಭರವಸವಿಟ್ಟಿದ್ದೇನೆ. ನೀನೇ ನನ್ನ ದೇವರು.
ಕೀರ್ತನೆಗಳು 31 : 15 (ERVKN)
ನನ್ನ ಜೀವವು ನಿನ್ನ ಕೈಗಳಲ್ಲಿದೆ. ವೈರಿಗಳಿಂದ ನನ್ನನ್ನು ರಕ್ಷಿಸು; ನನ್ನನ್ನು ಅಟ್ಟಿಸಿಕೊಂಡು ಅಟ್ಟಿಸಿಕೊಂಡು ಅಥವಾ “ನನ್ನನ್ನು ಹಿಂಸಿಸುತ್ತಿರುವ,” “ನನ್ನನ್ನು ನೋಯಿಸುತ್ತಿರುವ.” ಬರುತ್ತಿರುವ ಜನರಿಂದ ನನ್ನನ್ನು ರಕ್ಷಿಸು.
ಕೀರ್ತನೆಗಳು 31 : 16 (ERVKN)
ದಯವಿಟ್ಟು ನಿನ್ನ ಸೇವಕನನ್ನು ಸ್ವೀಕರಿಸಿಕೊ. ಕರುಣೆಯಿಂದ ನನ್ನನ್ನು ರಕ್ಷಿಸು!
ಕೀರ್ತನೆಗಳು 31 : 17 (ERVKN)
ಯೆಹೋವನೇ, ನಾನು ನಿನ್ನಲ್ಲಿ ಪ್ರಾರ್ಥಿಸಿದೆನು. ಆದ್ದರಿಂದ ನಾನು ನಿರಾಶನಾಗುವುದಿಲ್ಲ.
ಕೆಡುಕರಾದರೋ ನಿರಾಶರಾಗುವರು. ಅವರು ಮೌನವಾಗಿ ಸಮಾಧಿಗೆ ಹೋಗುವರು.
ಕೀರ್ತನೆಗಳು 31 : 18 (ERVKN)
ಕೆಡುಕರು ಜಂಬಕೊಚ್ಚಿಕೊಳ್ಳುತ್ತಾ ಒಳ್ಳೆಯವರ ಬಗ್ಗೆ ಸುಳ್ಳು ಹೇಳುವರು.
ಅವರು ದುರಹಂಕಾರಿಗಳಾಗಿದ್ದಾರೆ; ಅವರ ಸುಳ್ಳುತುಟಿಗಳು ಮೌನಗೊಳ್ಳುತ್ತವೆ.
ಕೀರ್ತನೆಗಳು 31 : 19 (ERVKN)
ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ. ನಿನ್ನಲ್ಲಿ ಭರವಸವಿಟ್ಟಿರುವ ಜನರಿಗಾಗಿ ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ.
ಕೀರ್ತನೆಗಳು 31 : 20 (ERVKN)
ನೀತಿವಂತರಿಗೆ ಕೇಡುಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ. ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ; ಅವರನ್ನು ನಿನ್ನ ಆಶ್ರಯಸ್ಥ್ಥಾನದಲ್ಲಿ ಅಡಗಿಸಿಡುವೆ.
ಕೀರ್ತನೆಗಳು 31 : 21 (ERVKN)
ಯೆಹೋವನಿಗೆ ಸ್ತೋತ್ರವಾಗಲಿ! ವೈರಿಗಳು ಈ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಆತನು ತನ್ನ ಶಾಶ್ವತ ಪ್ರೀತಿಯನ್ನು ಆಶ್ಚರ್ಯಕರವಾಗಿ ತೋರಿದ್ದಾನೆ.
ಕೀರ್ತನೆಗಳು 31 : 22 (ERVKN)
ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ.
ಕೀರ್ತನೆಗಳು 31 : 23 (ERVKN)
ದೇವರ ಭಕ್ತರೇ, ನೀವು ಯೆಹೋವನನ್ನು ಪ್ರೀತಿಸಲೇಬೇಕು! ಆತನು ನಂಬಿಗಸ್ತರನ್ನು ಕಾಪಾಡುವನು; ಗರ್ವಿಷ್ಠರನ್ನಾದರೋ ದಂಡಿಸುವನು.
ಕೀರ್ತನೆಗಳು 31 : 24 (ERVKN)
ಯೆಹೋವನನ್ನು ನಿರೀಕ್ಷಿಸಿಕೊಂಡಿರುವವರೇ, ದೃಢವಾಗಿಯೂ ಧೈರ್ಯವಾಗಿಯೂ ಇರಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24