ಕೀರ್ತನೆಗಳು 34 : 1 (ERVKN)
ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು. ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿರುವುದು.
ಕೀರ್ತನೆಗಳು 34 : 2 (ERVKN)
ದೀನರೇ, ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದನ್ನು ಕೇಳಿ ಸಂತೋಷಪಡಿರಿ.
ಕೀರ್ತನೆಗಳು 34 : 3 (ERVKN)
ನನ್ನೊಂದಿಗೆ ಯೆಹೋವನನ್ನು ಸ್ತುತಿಸಿರಿ. ನಾವು ಒಟ್ಟಾಗಿ ಆತನ ಹೆಸರನ್ನು ಸನ್ಮಾನಿಸೋಣ.
ಕೀರ್ತನೆಗಳು 34 : 4 (ERVKN)
ನಾನು ಯೆಹೋವನ ಸನ್ನಿಧಿಯಲ್ಲಿ ಮೊರೆಯಿಟ್ಟಾಗ ಆತನು ನನಗೆ ಸಹಾಯಮಾಡಿದನು. ನನ್ನನ್ನು ಎಲ್ಲಾ ಭೀತಿಗಳಿಂದ ಬಿಡಿಸಿದನು.
ಕೀರ್ತನೆಗಳು 34 : 5 (ERVKN)
ಆತನನ್ನೇ ದೃಷ್ಟಿಸುವವರು ಸಹಾಯವನ್ನು ಹೊಂದಿಕೊಳ್ಳುವರು. †ಆತನನ್ನೇ … ಹೊಂದಿಕೊಳ್ಳುವರು ಅಕ್ಷರಶಃ, “ಆತನ ಕಡೆಗೆ ನೋಡಿರಿ ಮತ್ತು ಹೊಳೆಯಿರಿ, ನಿಮ್ಮ ಮುಖವು ಕಳೆಗುಂದದಿರಲಿ.” ಅವರಿಗೆ ಆಶಾಭಂಗವಾಗದು.
ಕೀರ್ತನೆಗಳು 34 : 6 (ERVKN)
ಕಷ್ಟದಲ್ಲಿದ್ದ ಈ ಬಡಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದನು.
ಕೀರ್ತನೆಗಳು 34 : 7 (ERVKN)
ಯೆಹೋವನ ಭಕ್ತರ ಸುತ್ತಲೂ ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುವನು.
ಕೀರ್ತನೆಗಳು 34 : 8 (ERVKN)
ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ. ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು.
ಕೀರ್ತನೆಗಳು 34 : 9 (ERVKN)
ಯೆಹೋವನ ಜನರೇ, ಆತನನ್ನು ಆರಾಧಿಸಿರಿ. ಆತನ ಭಕ್ತರಿಗೆ ಬೇರೆ ಯಾವ ಆಶ್ರಯಸ್ಥಾನವೂ ಇಲ್ಲ.
ಕೀರ್ತನೆಗಳು 34 : 10 (ERVKN)
ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು. ಆದರೆ ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರು ಸುವರಗಳನ್ನು ಹೊಂದಿಕೊಳ್ಳುವರು.
ಕೀರ್ತನೆಗಳು 34 : 11 (ERVKN)
ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ಯೆಹೋವನಲ್ಲಿ ನಿಮಗಿರಬೇಕಾದ ಭಯಭಕ್ತಿಯನ್ನು ಕಲಿಸಿಕೊಡುವೆನು.
ಕೀರ್ತನೆಗಳು 34 : 12 (ERVKN)
ದೀರ್ಘಾಯುಷ್ಯವು ಬೇಕೋ? ಬಹುಕಾಲ ಸುಖವನ್ನು ಅನುಭವಿಸಬೇಕೋ?
ಕೀರ್ತನೆಗಳು 34 : 13 (ERVKN)
ಹಾಗಾದರೆ ಕೆಟ್ಟದ್ದನ್ನು ಮಾತಾಡದಂತೆ ನಾಲಿಗೆಯನ್ನು ಕಾದುಕೊಳ್ಳಿರಿ. ಸುಳ್ಳಾಡದಂತೆ ತುಟಿಗಳನ್ನು ಇಟ್ಟುಕೊಳ್ಳಿರಿ.
ಕೀರ್ತನೆಗಳು 34 : 14 (ERVKN)
ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ. ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ.
ಕೀರ್ತನೆಗಳು 34 : 15 (ERVKN)
ಯೆಹೋವನು ನೀತಿವಂತರನ್ನು ಕಾಪಾಡುವನು. ಆತನು ಅವರ ಪ್ರಾರ್ಥನೆಗಳಿಗೆ ಕಿವಿಗೊಡುವನು.
ಕೀರ್ತನೆಗಳು 34 : 16 (ERVKN)
ಕೆಡುಕರಿಗಾದರೋ ಯೆಹೋವನು ವಿರೋಧವಾಗಿರುವನು. ಆತನು ಅವರನ್ನು ಸಂಪೂರ್ಣವಾಗಿ ನಾಶಮಾಡುವನು.
ಕೀರ್ತನೆಗಳು 34 : 17 (ERVKN)
ಯೆಹೋವನಿಗೆ ಪ್ರಾರ್ಥಿಸಿರಿ, ಆತನು ನಿಮಗೆ ಕಿವಿಗೊಡುವನು; ನಿಮ್ಮನ್ನು ಎಲ್ಲಾ ಇಕ್ಕಟ್ಟುಗಳಿಂದ ರಕ್ಷಿಸುವನು.
ಕೀರ್ತನೆಗಳು 34 : 18 (ERVKN)
ಮನಗುಂದಿದವರಿಗೆ ಯೆಹೋವನು ಸಮೀಪವಾಗಿದ್ದಾನೆ; ಕುಗ್ಗಿಹೋದ ಅವರನ್ನು ಆತನು ರಕ್ಷಿಸುವನು.
ಕೀರ್ತನೆಗಳು 34 : 19 (ERVKN)
ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು.
ಕೀರ್ತನೆಗಳು 34 : 20 (ERVKN)
ಆತನು ಅವರ ಎಲುಬುಗಳನ್ನೆಲ್ಲ ಕಾಪಾಡುವನು. ಅವುಗಳಲ್ಲಿ ಒಂದಾದರೂ ಮುರಿದು ಹೋಗುವುದಿಲ್ಲ.
ಕೀರ್ತನೆಗಳು 34 : 21 (ERVKN)
ದುಷ್ಟರಾದರೋ ಆಪತ್ತುಗಳಿಂದ ಸಾಯುವರು. ನೀತಿವಂತರ ವೈರಿಗಳು ನಾಶವಾಗುವರು.
ಕೀರ್ತನೆಗಳು 34 : 22 (ERVKN)
ಯೆಹೋವನು ತನ್ನ ಸೇವಕರ ಪ್ರಾಣವನ್ನು ರಕ್ಷಿಸುವನು. ಆತನನ್ನು ಆಶ್ರಯಿಸಿಕೊಂಡಿರುವವರಲ್ಲಿ ಒಬ್ಬರಾದರೂ ನಾಶವಾಗುವುದಿಲ್ಲ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22