ಕೀರ್ತನೆಗಳು 35 : 1 (ERVKN)
ಯೆಹೋವನೇ, ನನ್ನ ವ್ಯಾಜ್ಯಗಳಲ್ಲಿ ವಾದಿಸು! ನನ್ನ ಯುದ್ಧಗಳಲ್ಲಿ ಹೋರಾಡು!
ಕೀರ್ತನೆಗಳು 35 : 2 (ERVKN)
ಯೆಹೋವನೇ, ಗುರಾಣಿಗಳನ್ನು ಹಿಡಿದುಕೊಂಡು ನನಗೆ ಸಹಾಯಕನಾಗಿ ನಿಲ್ಲು.
ಕೀರ್ತನೆಗಳು 35 : 3 (ERVKN)
ಈಟಿಯನ್ನೂ ಭಲ್ಲೆಯನ್ನೂ ತೆಗೆದುಕೊ. ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿರುವ ವೈರಿಗಳೊಡನೆ ಹೋರಾಡು. “ನಾನು ನಿನ್ನನ್ನು ರಕ್ಷಿಸುತ್ತೇನೆ” ಎಂಬ ಅಭಯವಚನ ನೀಡು.
ಕೀರ್ತನೆಗಳು 35 : 4 (ERVKN)
ನನ್ನನ್ನು ಕೊಲ್ಲಬೇಕೆಂದಿರುವವರು ನಿರಾಶೆಗೊಂಡು ನಾಚಿಕೆಗೀಡಾಗಲಿ. ನನಗೆ ಕೇಡು ಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ.
ಕೀರ್ತನೆಗಳು 35 : 5 (ERVKN)
ಅವರು ಗಾಳಿಬಡಿದುಕೊಂಡು ಹೋಗುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಹಿಂದಟ್ಟಲಿ.
ಕೀರ್ತನೆಗಳು 35 : 6 (ERVKN)
ಯೆಹೋವನೇ, ಅವರ ರಸ್ತೆಯು ಕತ್ತಲಾಗಿರಲಿ; ಜಾರುತ್ತಿರಲಿ. ಯೆಹೋವನ ದೂತನು ಅವರನ್ನು ಹಿಂದಟ್ಟಲಿ.
ಕೀರ್ತನೆಗಳು 35 : 7 (ERVKN)
ನಾನು ನಿರಪರಾಧಿಯಾಗಿದ್ದರೂ ಅವರು ನನಗೆ ಬಲೆಯೊಡ್ಡಿದ್ದಾರೆ. ನಿಷ್ಕಾರಣವಾಗಿ ಅವರು ನನಗೆ ಬಲೆಯೊಡ್ಡಿದ್ದಾರೆ.
ಕೀರ್ತನೆಗಳು 35 : 8 (ERVKN)
ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಕೊಳ್ಳಲಿ; ತಾವು ತೋಡಿದ ಗುಂಡಿಯೊಳಗೆ ತಾವೇ ಮುಗ್ಗರಿಸಿ ಬೀಳಲಿ. ಇದ್ದಕ್ಕಿದಂತೆ ಅಪಾಯವು ಅವರನ್ನು ಹಿಡಿದುಕೊಳ್ಳಲಿ.
ಕೀರ್ತನೆಗಳು 35 : 9 (ERVKN)
ಆಗ ನಾನು ಯೆಹೋವನಲ್ಲಿ ಹರ್ಷಿಸುವೆನು. ಆತನು ನನ್ನನ್ನು ರಕ್ಷಿಸಿದ್ದರಿಂದ ಸಂತೋಷಪಡುವೆನು.
ಕೀರ್ತನೆಗಳು 35 : 10 (ERVKN)
ಯೆಹೋವನೇ, ಹೃದಯಪೂರ್ವಕವಾಗಿ ಹೇಳುವೆ, “ನಿನಗೆ ಸಮಾನರು ಇಲ್ಲವೇ ಇಲ್ಲ. ಬಡವರನ್ನು ಬಲಿಷ್ಠರಿಂದ ತಪ್ಪಿಸಿ ರಕ್ಷಿಸುವಾತನು ನೀನೇ. ಬಲಿಷ್ಠರನ್ನು ಸೂರೆಮಾಡಿ ಬಡವರಿಗೂ ಅಸಹಾಯಕರಿಗೂ ಕೊಡುವಾತನು ನೀನೇ.”
ಕೀರ್ತನೆಗಳು 35 : 11 (ERVKN)
ಸುಳ್ಳುಸಾಕ್ಷಿಗಳು ನನಗೆ ಕೇಡು ಮಾಡಬೇಕೆಂದಿದ್ದಾರೆ. ನನಗೆ ತಿಳಿಯದ ವಿಷಯಗಳ ಮೇಲೆ ಅವರು ಪ್ರಶ್ನೆಗಳನ್ನು ಕೇಳುವರು.
ಕೀರ್ತನೆಗಳು 35 : 12 (ERVKN)
ನಾನು ಅವರಿಗೆ ಉಪಕಾರಗಳನ್ನು ಮಾಡಿದ್ದರೂ ಅವರು ನನಗೆ ಅಪಕಾರಗಳನ್ನೇ ಮಾಡುತ್ತಾರೆ. ಯೆಹೋವನೇ, ನನಗೆ ಯೋಗ್ಯವಾದವುಗಳನ್ನು ದಯಪಾಲಿಸು.
ಕೀರ್ತನೆಗಳು 35 : 13 (ERVKN)
ಅವರು ಅಸ್ವಸ್ಥರಾಗಿದ್ದಾಗ ನಾನು ದುಃಖಪಟ್ಟೆನು; ಉಪವಾಸ ಮಾಡಿದೆನು. ನಾನು ಅವರಿಗೋಸ್ಕರ ಪ್ರಾರ್ಥಿಸಿದ್ದಕ್ಕೆ ಇದು ನನಗೆ ಪ್ರತಿಫಲವೇ?
ಕೀರ್ತನೆಗಳು 35 : 14 (ERVKN)
ಅವರು ಅಸ್ವಸ್ಥರಾಗಿದ್ದಾಗ ಶೋಕವಸ್ತ್ರಗಳನ್ನು ಧರಿಸುತ್ತಿದ್ದೆನು. ಅವರನ್ನು ನನ್ನ ಸ್ನೇಹಿತರಂತೆಯೂ ಸಹೋದರರಂತೆಯೂ ಉಪಚರಿಸಿದೆನು. ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅತ್ತೆನು.
ಕೀರ್ತನೆಗಳು 35 : 15 (ERVKN)
ಆದರೆ ನಾನು ಆಪತ್ತಿನಲ್ಲಿದ್ದಾಗ ಅವರು ನನ್ನನ್ನು ಗೇಲಿಮಾಡಿದರು, ಅವರು ನನ್ನ ನಿಜವಾದ ಸ್ನೇಹಿತರಲ್ಲ. ಅವರ ಪರಿಚಯವೂ ನನಗಿರಲಿಲ್ಲ. ಅವರು ನನ್ನ ಸುತ್ತಲೂ ಸೇರಿಬಂದು ನನ್ನ ಮೇಲೆ ಆಕ್ರಮಣ ಮಾಡಿದರು.
ಕೀರ್ತನೆಗಳು 35 : 16 (ERVKN)
ಅವರು ಕೆಟ್ಟಮಾತಿನಿಂದ ನನ್ನನ್ನು ಹಾಸ್ಯಮಾಡಿದರು; ನನ್ನ ಮೇಲಿನ ಕೋಪದಿಂದ ಹಲ್ಲುಕಡಿದರು.
ಕೀರ್ತನೆಗಳು 35 : 17 (ERVKN)
ನನ್ನ ಒಡೆಯನೇ, ಇವುಗಳನ್ನು ಇನ್ನೆಷ್ಟುಕಾಲ ನೋಡುತ್ತಾ ಇರುವೆ? ಅವರು ನನ್ನನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ. ನನ್ನ ಪ್ರಾಣವನ್ನು ರಕ್ಷಿಸು. ಸಿಂಹಗಳಂತಿರುವ ಆ ದುಷ್ಟರಿಂದ ನನ್ನ ಪ್ರಿಯ ಪ್ರಾಣವನ್ನು ರಕ್ಷಿಸು.
ಕೀರ್ತನೆಗಳು 35 : 18 (ERVKN)
ಆಗ ನಾನು ನಿನ್ನನ್ನು ಮಹಾಸಭೆಯಲ್ಲಿ ಸ್ತುತಿಸುವೆನು; ಬಲಿಷ್ಠರ ಸಮೂಹದಲ್ಲಿ ನಿನ್ನನ್ನು ಕೊಂಡಾಡುವೆನು.
ಕೀರ್ತನೆಗಳು 35 : 19 (ERVKN)
ಸುಳ್ಳುಗಾರರಾದ ನನ್ನ ವೈರಿಗಳು ಇನ್ನು ಮೇಲೆ ಹಿಗ್ಗಲಾರರು. ನನ್ನ ವೈರಿಗಳು ತಮ್ಮ ಒಳಸಂಚುಗಳಿಗೆ ಖಂಡಿತವಾಗಿ ದಂಡಿಸಲ್ಪಡುವರು.
ಕೀರ್ತನೆಗಳು 35 : 20 (ERVKN)
ನನ್ನ ವೈರಿಗಳು ಶಾಂತಿಸ್ಥಾಪನೆಗಾಗಿ ಯಾವ ಆಲೋಚನೆಗಳನ್ನೂ ಮಾಡುತ್ತಿಲ್ಲ. ಈ ದೇಶದಲ್ಲಿ ಶಾಂತಿಯಿಂದಿರುವ ಜನರಿಗೆ ಕೇಡುಮಾಡಲು ಅವರು ಒಳಸಂಚುಗಳನ್ನು ಮಾಡುತ್ತಿದ್ದಾರೆ.
ಕೀರ್ತನೆಗಳು 35 : 21 (ERVKN)
ನನ್ನ ವೈರಿಗಳು ನನ್ನನ್ನು ದೂಷಿಸುವರು. “ಆಹಾ! ನೀನು ಮಾಡುತ್ತಿರುವುದು ನಮಗೆ ಗೊತ್ತು!” ಎನ್ನುವರು.
ಕೀರ್ತನೆಗಳು 35 : 22 (ERVKN)
ಯೆಹೋವನೇ, ಇದೆಲ್ಲವನ್ನೂ ನೀನು ನೋಡಿರುವೆ, ಆದ್ದಿರಂದ ಸುಮ್ಮನಿರಬೇಡ; ನನ್ನ ಕೈ ಬಿಡಬೇಡ.
ಕೀರ್ತನೆಗಳು 35 : 23 (ERVKN)
ಎಚ್ಚರಗೊಳ್ಳು! ಎದ್ದೇಳು! ನನ್ನ ದೇವರೇ, ಯೆಹೋವನೇ, ನನಗಾಗಿ ಹೋರಾಡು; ನನಗೆ ನ್ಯಾಯವನ್ನು ದೊರಕಿಸು.
ಕೀರ್ತನೆಗಳು 35 : 24 (ERVKN)
ನನ್ನ ದೇವರಾದ ಯೆಹೋವನೇ, ನಿನ್ನ ನೀತಿಗನುಸಾರವಾಗಿ ನನಗೆ ನ್ಯಾಯದೊರಕಿಸು. ಅವರು ನನ್ನನ್ನು ನೋಡಿ ನಗಲು ಆಸ್ಪದಕೊಡಬೇಡ.
ಕೀರ್ತನೆಗಳು 35 : 25 (ERVKN)
ಅವರು, “ಆಹಾ! ನಾವು ಬಯಸಿದ್ದನ್ನೇ ಪಡೆದೆವು!” ಎಂದು ಹೇಳಲು ಅವಕಾಶಕೊಡಬೇಡ. “ನಾವು ಅವನನ್ನು ನಾಶಮಾಡಿದೆವು!” ಎಂದು ಹೇಳಲು ಅವರಿಗೆ ಆಸ್ಪದಕೊಡಬೇಡ.
ಕೀರ್ತನೆಗಳು 35 : 26 (ERVKN)
ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ.
ಕೀರ್ತನೆಗಳು 35 : 27 (ERVKN)
ನನಗೆ ನ್ಯಾಯ ದೊರೆಯಲೆಂದು ಅಪೇಕ್ಷಿಸುವವರು ಸಂತೋಷಪಡಲಿ. “ಯೆಹೋವನು ಎಷ್ಟೋ ದೊಡ್ಡವನು! ಆತನು ತನ್ನ ಸೇವಕನಿಗೆ ಅತ್ಯುತ್ತಮವಾದುದನ್ನೇ ಮಾಡಿದನು” ಎಂದು ಅವರು ಹೇಳುತ್ತಲೇ ಇರಲಿ.
ಕೀರ್ತನೆಗಳು 35 : 28 (ERVKN)
ನಿನ್ನ ನೀತಿಯ ಕುರಿತು ನಾನು ಜನರಿಗೆ ಹೇಳುವೆನು; ಪ್ರತಿದಿನವೂ ನಿನ್ನನ್ನು ಸ್ತುತಿಸುವೆನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28

BG:

Opacity:

Color:


Size:


Font: