ಕೀರ್ತನೆಗಳು 38 : 1 (ERVKN)
ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ. ರೋಷದಿಂದ ನನ್ನನ್ನು ಶಿಸ್ತುಗೊಳಿಸಬೇಡ.
ಕೀರ್ತನೆಗಳು 38 : 2 (ERVKN)
ನಿನ್ನಿಂದ ನನಗೆ ನೋವಾಗಿದೆ. ನಿನ್ನ ಬಾಣಗಳು ನನಗೆ ನಾಟಿಕೊಂಡಿವೆ.
ಕೀರ್ತನೆಗಳು 38 : 3 (ERVKN)
ನೀನು ಶಿಕ್ಷಿಸಿದ್ದರಿಂದ ನನ್ನ ಇಡೀ ದೇಹ ಹುಣ್ಣಾಗಿದೆ. ನಾನು ಪಾಪಮಾಡಿದ್ದರಿಂದ ನನ್ನ ಎಲುಬುಗಳೆಲ್ಲ ನೋಯುತ್ತಿವೆ.
ಕೀರ್ತನೆಗಳು 38 : 4 (ERVKN)
ನಾನು ಅಪರಾಧಿಯಾಗಿದ್ದೇನೆ. ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ.
ಕೀರ್ತನೆಗಳು 38 : 5 (ERVKN)
ನಾನೊಂದು ಮೂರ್ಖ ಕೆಲಸವನ್ನು ಮಾಡಿದೆನು. ಈಗ ನನಗೆ ಕೀವು ಸೋರಿ ದುರ್ವಾಸನೆಯಿಂದಿರುವ ಹುಣ್ಣುಗಳಾಗಿವೆ.
ಕೀರ್ತನೆಗಳು 38 : 6 (ERVKN)
ನಾನು ಬಾಗಿ ಕುಗ್ಗಿಹೋಗಿದ್ದೇನೆ. ನಾನು ದಿನವೆಲ್ಲಾ ನಿರುತ್ಸಾಹನಾಗಿದ್ದೇನೆ.
ಕೀರ್ತನೆಗಳು 38 : 7 (ERVKN)
ನನಗೆ ಜ್ವರವಿದೆ, ನನ್ನ ಇಡೀ ದೇಹ ನೋಯುತ್ತಿದೆ.
ಕೀರ್ತನೆಗಳು 38 : 8 (ERVKN)
ನನಗೆ ಬಹಳ ನೋವಿರುವುದರಿಂದ ಜೋಮು ಹಿಡಿದಂತಿದೆ. ಹೃದಯದ ವೇದನೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.
ಕೀರ್ತನೆಗಳು 38 : 9 (ERVKN)
ನನ್ನ ಒಡೆಯನೇ, ನೀನು ನನ್ನ ನರಳಾಟವನ್ನು ಕೇಳಿರುವೆ. ನನ್ನ ನಿಟ್ಟುಸಿರುಗಳು ನಿನಗೆ ಮರೆಯಾಗಿಲ್ಲ.
ಕೀರ್ತನೆಗಳು 38 : 10 (ERVKN)
ನನ್ನ ಹೃದಯದ ವೇದನೆಯಿಂದ ಶಕ್ತಿಯು ಕುಂದಿಹೋಗಿದೆ; ನನ್ನ ದೃಷ್ಟಿಯು ಹಿಂಗಿಹೋಗಿದೆ.
ಕೀರ್ತನೆಗಳು 38 : 11 (ERVKN)
ನಾನು ಅಸ್ವಸ್ಥನಾಗಿರುವುದರಿಂದ ನನ್ನ ಸ್ನೇಹಿತರಾಗಲಿ ನೆರೆಯವರಾಗಲಿ ನನ್ನನ್ನು ನೋಡಲು ಬರುವುದಿಲ್ಲ. ನನ್ನ ಕುಟುಂಬದವರು ನನ್ನ ಸಮೀಪಕ್ಕೂ ಬರುವುದಿಲ್ಲ.
ಕೀರ್ತನೆಗಳು 38 : 12 (ERVKN)
ನನ್ನ ವೈರಿಗಳು ಬಲೆಗಳನ್ನು ಒಡ್ಡಿದ್ದಾರೆ; ನನ್ನ ನಾಶನದ ಕುರಿತು ಅವರು ಮಾತಾಡುತ್ತಿದ್ದಾರೆ; ದಿನವೆಲ್ಲಾ ಕುತಂತ್ರವನ್ನು ಮಾಡುತ್ತಿದ್ದಾರೆ.
ಕೀರ್ತನೆಗಳು 38 : 13 (ERVKN)
ಆದರೆ ನಾನು ಕಿವುಡನಂತೆ ಕೇಳದವನಾಗಿದ್ದೇನೆ. ಮೂಕನಂತೆ ಮಾತಾಡದವನಾಗಿದ್ದೇನೆ.
ಕೀರ್ತನೆಗಳು 38 : 14 (ERVKN)
ನಾನು ಕಿವಿಕೇಳಿಸದವನಂತೆಯೂ ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು.
ಕೀರ್ತನೆಗಳು 38 : 15 (ERVKN)
ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ. ನನ್ನ ಒಡೆಯನಾದ ದೇವರೇ, ನನಗೆ ಉತ್ತರ ನೀಡು.
ಕೀರ್ತನೆಗಳು 38 : 16 (ERVKN)
ನಾನು ಏನೇ ಹೇಳಿದರೂ ವೈರಿಗಳು ನನ್ನನ್ನು ನೋಡಿ ನಗುವರು. ನನ್ನ ಕಾಯಿಲೆಯು ಪಾಪದ ಫಲವೆಂದು ಹೇಳುವರು.
ಕೀರ್ತನೆಗಳು 38 : 17 (ERVKN)
ನಾನು ಅಪರಾಧಿಯೆಂದು ನನಗೆ ಗೊತ್ತಿದೆ; ನನ್ನ ನೋವನ್ನು ಮರೆಯಲಾರೆ.
ಕೀರ್ತನೆಗಳು 38 : 18 (ERVKN)
ನನ್ನ ಅಪರಾಧಗಳನ್ನು ನಿನಗೆ ಅರಿಕೆ ಮಾಡಿಕೊಂಡಿದ್ದೇನೆ. ನನ್ನ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟಿದ್ದೇನೆ.
ಕೀರ್ತನೆಗಳು 38 : 19 (ERVKN)
ನನ್ನ ವೈರಿಗಳು ಚುರುಕಾಗಿಯೂ ಬಲಶಾಲಿಗಳಾಗಿಯೂ ಇದ್ದಾರೆ. ಅವರು ಎಷ್ಟೋ ಸುಳ್ಳುಗಳನ್ನು ಹೇಳಿದರು.
ಕೀರ್ತನೆಗಳು 38 : 20 (ERVKN)
ನಾನು ಉಪಕಾರವನ್ನು ಮಾಡಿದ್ದರೂ ನನ್ನ ವೈರಿಗಳು ನನಗೆ ಅಪಕಾರವನ್ನೇ ಮಾಡುವರು.
ನಾನು ಒಳ್ಳೆಯದನ್ನು ಮಾಡಬೇಕೆಂದರೂ ಅವರು ನನ್ನನ್ನು ವಿರೋಧಿಸುತ್ತಾರೆ.
ಕೀರ್ತನೆಗಳು 38 : 21 (ERVKN)
ಯೆಹೋವನೇ, ನನ್ನನ್ನು ಕೈಬಿಡಬೇಡ! ನನ್ನ ದೇವರೇ, ನನ್ನ ಸಮೀಪದಲ್ಲೇ ಇರು!
ಕೀರ್ತನೆಗಳು 38 : 22 (ERVKN)
ಯೆಹೋವನೇ, ನನ್ನ ರಕ್ಷಕನೇ, ಬೇಗನೆ ಬಂದು ನನಗೆ ಸಹಾಯಮಾಡು!
❮
❯
1
2
3
4
5
6
7
8
9
10
11
12
13
14
15
16
17
18
19
20
21
22