ಕೀರ್ತನೆಗಳು 39 : 1 (ERVKN)
“ನಾನು ಜಾಗರೂಕನಾಗಿ ಮಾತಾಡುವೆ. [QBR2] ನನ್ನ ನಾಲಿಗೆ ನನ್ನನ್ನು ಪಾಪಕ್ಕೆ ಸಿಕ್ಕಿಸದಂತೆ ನೋಡಿಕೊಳ್ಳುವೆ. [QBR2] ದುಷ್ಟರ ಮಧ್ಯದಲ್ಲಿ ಬಾಯಿಮುಚ್ಚಿಕೊಂಡಿರುವೆ” ಎಂದುಕೊಂಡೆನು.
ಕೀರ್ತನೆಗಳು 39 : 2 (ERVKN)
ನಾನು ಮೌನವಾಗಿದ್ದೆನು. [QBR2] ಒಳ್ಳೆಯದನ್ನೂ ಹೇಳದೆ ಸುಮ್ಮನಿದ್ದೆನು. [QBR2] ಆದರೆ ನನ್ನ ವೇದನೆಯು ಹೆಚ್ಚಾಯಿತು. [QBR]
ಕೀರ್ತನೆಗಳು 39 : 3 (ERVKN)
ನಾನು ಬಹುಕೋಪಗೊಂಡಿದ್ದೆ. [QBR2] ಅದರ ಕುರಿತು ಆಲೋಚಿಸಿದಷ್ಟೂ ಕೋಪವು ಅಧಿಕವಾಯಿತು. [QBR2] ಆಗ ನಾನು ಬಾಯಿತೆರೆದು,
ಕೀರ್ತನೆಗಳು 39 : 4 (ERVKN)
ಯೆಹೋವನೇ, ನನ್ನ ಗತಿಯನ್ನು ತಿಳಿಸು! [QBR2] ನನ್ನ ಈ ಅಲ್ಪ ಜೀವಿತವು ಇನ್ನೆಷ್ಟು ಕಾಲವಿರುವುದು? [QBR2] ನಾನೆಷ್ಟು ಕಾಲ ಬದುಕುವೆ? [QBR]
ಕೀರ್ತನೆಗಳು 39 : 5 (ERVKN)
ನೀನು ನನಗೆ ಕೇವಲ ಅಲ್ಪಾಯುಷ್ಯವನ್ನು ಕೊಟ್ಟಿರುವೆ. [QBR2] ನನ್ನ ಅಲ್ಪ ಜೀವಿತವು ನಿನ್ನ ದೃಷ್ಟಿಯಲ್ಲಿ ಗಣನೆಗೂ ಬಾರದು. [QBR] ಮನುಷ್ಯನ ಜೀವಿತವು ಕೇವಲ ಮೋಡದಂತೆ ಕ್ಷಣಿಕವಾಗಿದೆ. ಯಾವನೂ ಸದಾಕಾಲ ಬದುಕುವುದಿಲ್ಲ!
ಕೀರ್ತನೆಗಳು 39 : 6 (ERVKN)
ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. [QBR2] ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. [QBR2] ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.
ಕೀರ್ತನೆಗಳು 39 : 7 (ERVKN)
ಯೆಹೋವನೇ, ನನಗಿರುವ ನಿರೀಕ್ಷೆ ಯಾವುದು? [QBR2] ನನ್ನ ನಿರೀಕ್ಷೆಯು ನೀನೇ. [QBR]
ಕೀರ್ತನೆಗಳು 39 : 8 (ERVKN)
ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ಬಿಡಿಸು. [QBR2] ಮೂರ್ಖರ ನಿಂದೆಗೆ ನನ್ನನ್ನು ಗುರಿಮಾಡಬೇಡ. [QBR]
ಕೀರ್ತನೆಗಳು 39 : 9 (ERVKN)
ನಾನು ಬಾಯಿತೆರೆದು ಮಾತಾಡುವುದಿಲ್ಲ. [QBR2] ನೀನು ನ್ಯಾಯಕ್ಕೆ ತಕ್ಕಂತೆ ಮಾಡಿರುವೆ. [QBR]
ಕೀರ್ತನೆಗಳು 39 : 10 (ERVKN)
ನನ್ನನ್ನು ಶಿಕ್ಷಿಸುವುದನ್ನು ನಿಲ್ಲಿಸು. [QBR2] ಇಲ್ಲವಾದರೆ, ನಾನು ಸತ್ತೇ ಹೋಗುವೆನು. [QBR]
ಕೀರ್ತನೆಗಳು 39 : 11 (ERVKN)
ನೀನು ಅಪರಾಧಗಳಿಗೆ ತಕ್ಕಂತೆ ಜನರನ್ನು ದಂಡಿಸಿ, ನಿನ್ನ ಜೀವಮಾರ್ಗವನ್ನು ಅವರಿಗೆ ಉಪದೇಶಿಸುವೆ. [QBR2] ನುಸಿಯು ಬಟ್ಟೆಯನ್ನು ತಿಂದುಬಿಡುವಂತೆ ಜನರಿಗೆ ಇಷ್ಟವಾದವುಗಳನ್ನು ನೀನು ನಾಶಮಾಡುವೆ. [QBR2] ಹೌದು, ನಮ್ಮ ಜೀವಿತಗಳು ಬೇಗನೆ ಕಣ್ಮರೆಯಾಗುವ ಒಂದು ಚಿಕ್ಕ ಮೋಡದಂತಿವೆ.
ಕೀರ್ತನೆಗಳು 39 : 12 (ERVKN)
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು! [QBR2] ನನ್ನ ಮೊರೆಗೆ ಕಿವಿಗೊಡು! [QBR2] ನನ್ನ ಕಣ್ಣೀರನ್ನು ನೋಡು! [QBR] ನಾನು ಈ ಜೀವಿತವನ್ನು ಕೇವಲ ಒಬ್ಬ ಪ್ರಯಾಣಿಕನಂತೆ ನಿನ್ನೊಂದಿಗೆ ಸಾಗಿಸುತ್ತಿರುವೆ. [QBR2] ನನ್ನ ಎಲ್ಲಾ ಪೂರ್ವಿಕರಂತೆ, ನಾನು ಇಲ್ಲಿ ಕೇವಲ ಸ್ವಲ್ಪಕಾಲ ಜೀವಿಸುವೆನು. [QBR]
ಕೀರ್ತನೆಗಳು 39 : 13 (ERVKN)
ನೀನು ಕೋಪದಿಂದ ನನ್ನ ಕಡೆಗೆ ನೋಡಬೇಡ! ಸಾಯುವುದಕ್ಕಿಂತ ಮೊದಲು ನನಗೆ ಸಂತೋಷವಿರಲಿ. [QBR2] ಇನ್ನು ಸ್ವಲ್ಪಕಾಲದಲ್ಲಿ ನಾನು ಇಲ್ಲವಾಗುವೆನು! [PE]
❮
❯