ಕೀರ್ತನೆಗಳು 39 : 1 (ERVKN)
“ನಾನು ಜಾಗರೂಕನಾಗಿ ಮಾತಾಡುವೆ. ನನ್ನ ನಾಲಿಗೆ ನನ್ನನ್ನು ಪಾಪಕ್ಕೆ ಸಿಕ್ಕಿಸದಂತೆ ನೋಡಿಕೊಳ್ಳುವೆ. ದುಷ್ಟರ ಮಧ್ಯದಲ್ಲಿ ಬಾಯಿಮುಚ್ಚಿಕೊಂಡಿರುವೆ” ಎಂದುಕೊಂಡೆನು.
ಕೀರ್ತನೆಗಳು 39 : 2 (ERVKN)
ನಾನು ಮೌನವಾಗಿದ್ದೆನು. ಒಳ್ಳೆಯದನ್ನೂ ಹೇಳದೆ ಸುಮ್ಮನಿದ್ದೆನು. ಆದರೆ ನನ್ನ ವೇದನೆಯು ಹೆಚ್ಚಾಯಿತು.
ಕೀರ್ತನೆಗಳು 39 : 3 (ERVKN)
ನಾನು ಬಹುಕೋಪಗೊಂಡಿದ್ದೆ. ಅದರ ಕುರಿತು ಆಲೋಚಿಸಿದಷ್ಟೂ ಕೋಪವು ಅಧಿಕವಾಯಿತು. ಆಗ ನಾನು ಬಾಯಿತೆರೆದು,
ಕೀರ್ತನೆಗಳು 39 : 4 (ERVKN)
ಯೆಹೋವನೇ, ನನ್ನ ಗತಿಯನ್ನು ತಿಳಿಸು! ನನ್ನ ಈ ಅಲ್ಪ ಜೀವಿತವು ಇನ್ನೆಷ್ಟು ಕಾಲವಿರುವುದು? ನಾನೆಷ್ಟು ಕಾಲ ಬದುಕುವೆ?
ಕೀರ್ತನೆಗಳು 39 : 5 (ERVKN)
ನೀನು ನನಗೆ ಕೇವಲ ಅಲ್ಪಾಯುಷ್ಯವನ್ನು ಕೊಟ್ಟಿರುವೆ. ನನ್ನ ಅಲ್ಪ ಜೀವಿತವು ನಿನ್ನ ದೃಷ್ಟಿಯಲ್ಲಿ ಗಣನೆಗೂ ಬಾರದು.
ಮನುಷ್ಯನ ಜೀವಿತವು ಕೇವಲ ಮೋಡದಂತೆ ಕ್ಷಣಿಕವಾಗಿದೆ. ಯಾವನೂ ಸದಾಕಾಲ ಬದುಕುವುದಿಲ್ಲ!
ಕೀರ್ತನೆಗಳು 39 : 6 (ERVKN)
ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.
ಕೀರ್ತನೆಗಳು 39 : 7 (ERVKN)
ಯೆಹೋವನೇ, ನನಗಿರುವ ನಿರೀಕ್ಷೆ ಯಾವುದು? ನನ್ನ ನಿರೀಕ್ಷೆಯು ನೀನೇ.
ಕೀರ್ತನೆಗಳು 39 : 8 (ERVKN)
ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ಬಿಡಿಸು. ಮೂರ್ಖರ ನಿಂದೆಗೆ ನನ್ನನ್ನು ಗುರಿಮಾಡಬೇಡ.
ಕೀರ್ತನೆಗಳು 39 : 9 (ERVKN)
ನಾನು ಬಾಯಿತೆರೆದು ಮಾತಾಡುವುದಿಲ್ಲ. ನೀನು ನ್ಯಾಯಕ್ಕೆ ತಕ್ಕಂತೆ ಮಾಡಿರುವೆ.
ಕೀರ್ತನೆಗಳು 39 : 10 (ERVKN)
ನನ್ನನ್ನು ಶಿಕ್ಷಿಸುವುದನ್ನು ನಿಲ್ಲಿಸು. ಇಲ್ಲವಾದರೆ, ನಾನು ಸತ್ತೇ ಹೋಗುವೆನು.
ಕೀರ್ತನೆಗಳು 39 : 11 (ERVKN)
ನೀನು ಅಪರಾಧಗಳಿಗೆ ತಕ್ಕಂತೆ ಜನರನ್ನು ದಂಡಿಸಿ, ನಿನ್ನ ಜೀವಮಾರ್ಗವನ್ನು ಅವರಿಗೆ ಉಪದೇಶಿಸುವೆ. ನುಸಿಯು ಬಟ್ಟೆಯನ್ನು ತಿಂದುಬಿಡುವಂತೆ ಜನರಿಗೆ ಇಷ್ಟವಾದವುಗಳನ್ನು ನೀನು ನಾಶಮಾಡುವೆ. ಹೌದು, ನಮ್ಮ ಜೀವಿತಗಳು ಬೇಗನೆ ಕಣ್ಮರೆಯಾಗುವ ಒಂದು ಚಿಕ್ಕ ಮೋಡದಂತಿವೆ.
ಕೀರ್ತನೆಗಳು 39 : 12 (ERVKN)
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು! ನನ್ನ ಮೊರೆಗೆ ಕಿವಿಗೊಡು! ನನ್ನ ಕಣ್ಣೀರನ್ನು ನೋಡು!
ನಾನು ಈ ಜೀವಿತವನ್ನು ಕೇವಲ ಒಬ್ಬ ಪ್ರಯಾಣಿಕನಂತೆ ನಿನ್ನೊಂದಿಗೆ ಸಾಗಿಸುತ್ತಿರುವೆ. ನನ್ನ ಎಲ್ಲಾ ಪೂರ್ವಿಕರಂತೆ, ನಾನು ಇಲ್ಲಿ ಕೇವಲ ಸ್ವಲ್ಪಕಾಲ ಜೀವಿಸುವೆನು.
ಕೀರ್ತನೆಗಳು 39 : 13 (ERVKN)
ನೀನು ಕೋಪದಿಂದ ನನ್ನ ಕಡೆಗೆ ನೋಡಬೇಡ! ಸಾಯುವುದಕ್ಕಿಂತ ಮೊದಲು ನನಗೆ ಸಂತೋಷವಿರಲಿ. ಇನ್ನು ಸ್ವಲ್ಪಕಾಲದಲ್ಲಿ ನಾನು ಇಲ್ಲವಾಗುವೆನು!

1 2 3 4 5 6 7 8 9 10 11 12 13