ಕೀರ್ತನೆಗಳು 44 : 1 (ERVKN)
ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ [QBR2] ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ. [QBR2] ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು. [QBR]
ಕೀರ್ತನೆಗಳು 44 : 2 (ERVKN)
ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು [QBR2] ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. [QBR] ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. [QBR2] ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ. [QBR]
ಕೀರ್ತನೆಗಳು 44 : 3 (ERVKN)
ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. [QBR2] ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. [QBR] ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. [QBR2] ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು. [QBR]
ಕೀರ್ತನೆಗಳು 44 : 4 (ERVKN)
ನನ್ನ ದೇವರೇ, ನೀನೇ ನನ್ನ ರಾಜನು. [QBR2] ಆಜ್ಞಾಪಿಸಿ ಯಾಕೋಬನಿಗೆ ಜಯವನ್ನು ದಯಪಾಲಿಸು. [QBR]
ಕೀರ್ತನೆಗಳು 44 : 5 (ERVKN)
ನಿನ್ನ ಸಹಾಯದಿಂದಲೇ ನಮ್ಮ ಶತ್ರುಗಳನ್ನು ಹಿಂದಟ್ಟುವೆವು. [QBR2] ನಿನ್ನ ಹೆಸರಿನಿಂದ, ನಮ್ಮ ಶತ್ರುಗಳ ಮೇಲೆ ನಡೆದಾಡುವೆವು. [QBR]
ಕೀರ್ತನೆಗಳು 44 : 6 (ERVKN)
ನನ್ನ ಬಿಲ್ಲುಬಾಣಗಳಲ್ಲಿ ನಾನು ಭರವಸೆವಿಡುವುದಿಲ್ಲ. [QBR2] ನನ್ನ ಖಡ್ಗವು ನನ್ನನ್ನು ರಕ್ಷಿಸಲಾರದು. [QBR]
ಕೀರ್ತನೆಗಳು 44 : 7 (ERVKN)
ನೀನು ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದೆ. [QBR2] ನಮ್ಮ ಶತ್ರುಗಳನ್ನು ನಾಚಿಕೆಗೆ ಗುರಿಮಾಡಿದೆ. [QBR]
ಕೀರ್ತನೆಗಳು 44 : 8 (ERVKN)
ದಿನವೆಲ್ಲಾ ದೇವರನ್ನು ಕೊಂಡಾಡಿದೆವು. [QBR2] ನಿನ್ನ ಹೆಸರನ್ನು ಸದಾಕಾಲ ಸ್ತುತಿಸುವೆವು.
ಕೀರ್ತನೆಗಳು 44 : 9 (ERVKN)
ಆದರೆ, ದೇವರೇ, ಈಗ ನೀನು ನಮ್ಮನ್ನು ಕೈಬಿಟ್ಟಿರುವೆ. [QBR2] ನಮ್ಮನ್ನು ಅವಮಾನಕ್ಕೆ ಗುರಿಮಾಡಿರುವೆ. ನೀನು ನಮ್ಮೊಂದಿಗೆ ಯುದ್ಧಕ್ಕೆ ಬರಲಿಲ್ಲ. [QBR]
ಕೀರ್ತನೆಗಳು 44 : 10 (ERVKN)
ನಮ್ಮ ವೈರಿಗಳು ನಮ್ಮನ್ನು ಹಿಂದಟ್ಟುವಂತೆ ಮಾಡಿದೆ. [QBR2] ನಮ್ಮ ವೈರಿಗಳು ನಮ್ಮ ಐಶ್ವರ್ಯವನ್ನು ತೆಗೆದುಕೊಂಡರು. [QBR]
ಕೀರ್ತನೆಗಳು 44 : 11 (ERVKN)
ಕೊಯ್ಯಲ್ಪಡುವ ಕುರಿಗಳೋ ಎಂಬಂತೆ ನೀನು ನಮ್ಮನ್ನು ಅವರಿಗೆ ಒಪ್ಪಿಸಿಕೊಟ್ಟಿರುವೆ; [QBR2] ಅನ್ಯ ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಟ್ಟಿರುವೆ. [QBR]
ಕೀರ್ತನೆಗಳು 44 : 12 (ERVKN)
ನಿನ್ನ ಜನರನ್ನು ಅತ್ಯಲ್ಪ ಬೆಲೆಗೆ ಮಾರಿಬಿಟ್ಟೆ. [QBR2] ಬೆಲೆಯ ಬಗ್ಗೆ ವಾದವನ್ನೂ ನೀನು ಮಾಡಲಿಲ್ಲ. [QBR]
ಕೀರ್ತನೆಗಳು 44 : 13 (ERVKN)
ನೀನು ನಮ್ಮನ್ನು ನೆರೆಹೊರೆಯವರಿಗೆ ತಮಾಷೆಯನ್ನಾಗಿ ಮಾಡಿರುವೆ. [QBR2] ನಮ್ಮ ನೆರೆಹೊರೆಯವರು ನಮ್ಮನ್ನು ಕಂಡು ನಗುತ್ತಾರೆ; ನಮ್ಮನ್ನು ಗೇಲಿ ಮಾಡುತ್ತಾರೆ. [QBR]
ಕೀರ್ತನೆಗಳು 44 : 14 (ERVKN)
ನಾವು ಜನರಿಗೆ ಗಾದೆಯ ಮಾತಾಗಿದ್ದೇವೆ. [QBR2] ಸ್ವದೇಶವನ್ನು ಹೊಂದಿಲ್ಲದವರು ಸಹ ನಮ್ಮನ್ನು ಕಂಡು ತಲೆಯಾಡಿಸುತ್ತಾ ನಗುತ್ತಾರೆ. [QBR]
ಕೀರ್ತನೆಗಳು 44 : 15 (ERVKN)
ನಾಚಿಕೆಯು ನನ್ನನ್ನು ಕವಿದುಕೊಂಡಿದೆ. [QBR2] ಅವಮಾನವು ದಿವವೆಲ್ಲಾ ನನ್ನೆದುರಿನಲ್ಲೇ ಇದೆ. [QBR]
ಕೀರ್ತನೆಗಳು 44 : 16 (ERVKN)
ನನ್ನ ವೈರಿಗಳ ಮತ್ತು ದೂಷಕರ [QBR2] ನಿಂದೆಯ ಮಾತುಗಳು ನನ್ನೆದುರಿನಲ್ಲಿ ಇವೆ. [QBR]
ಕೀರ್ತನೆಗಳು 44 : 17 (ERVKN)
ನಾವು ನಿನ್ನನ್ನು ಮರೆತಿಲ್ಲದಿದ್ದರೂ [QBR2] ನಾವು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿಲ್ಲದಿದ್ದರೂ ಇವೆಲ್ಲಾ ನಮಗೆ ಬಂದಿವೆ. [QBR]
ಕೀರ್ತನೆಗಳು 44 : 18 (ERVKN)
ನಾವು ನಿನಗೆ ವಿಮುಖರಾಗದೆ [QBR2] ನಿನ್ನನ್ನೇ ಹಿಂಬಾಲಿಸಿದೆವು. [QBR]
ಕೀರ್ತನೆಗಳು 44 : 19 (ERVKN)
ಆದರೆ ನರಿಗಳು ವಾಸಿಸುವ ಈ ಸ್ಥಳದಲ್ಲಿ ನೀನು ನಮ್ಮನ್ನು ಜಜ್ಜಿಹಾಕಿರುವೆ. [QBR2] ಮರಣದಂತೆ ಕತ್ತಲಾಗಿರುವ ಈ ಸ್ಥಳದಲ್ಲಿ ನೀನು ನಮ್ಮನ್ನು ತೊರೆದುಬಿಟ್ಟಿರುವೆ. [QBR]
ಕೀರ್ತನೆಗಳು 44 : 20 (ERVKN)
ನಮ್ಮ ದೇವರ ಹೆಸರನ್ನು ನಾವು ಮರೆತುಬಿಟ್ಟೆವೋ? [QBR2] ಅನ್ಯದೇವರುಗಳಿಗೆ ನಾವು ಪ್ರಾರ್ಥಿಸಿದೆವೋ? ಇಲ್ಲ! [QBR]
ಕೀರ್ತನೆಗಳು 44 : 21 (ERVKN)
ದೇವರಿಗೆ ಇವು ಖಂಡಿತವಾಗಿ ತಿಳಿದಿವೆ. [QBR2] ನಮ್ಮ ಅಂತರಾಳದ ರಹಸ್ಯಗಳನ್ನು ಸಹ ಆತನು ಬಲ್ಲನು. [QBR]
ಕೀರ್ತನೆಗಳು 44 : 22 (ERVKN)
ನಿನ್ನ ನಿಮಿತ್ತ ನಾವು ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; [QBR2] ಕೊಯ್ಯಲು ಕೊಂಡೊಯ್ಯುವ ಕುರಿಗಳಂತಾಗಿದ್ದೇವೆ. [QBR]
ಕೀರ್ತನೆಗಳು 44 : 23 (ERVKN)
ನನ್ನ ಒಡೆಯನೇ, ಎದ್ದೇಳು! [QBR2] ನೀನು ನಿದ್ರಿಸುತ್ತಿರುವುದೇಕೆ? [QBR2] ಎದ್ದೇಳು! ನಮ್ಮನ್ನು ಶಾಶ್ವತವಾಗಿ ಕೈಬಿಡಬೇಡ. [QBR]
ಕೀರ್ತನೆಗಳು 44 : 24 (ERVKN)
ನೀನು ನಮಗೆ ಮರೆಯಾಗಿರುವುದೇಕೆ? [QBR2] ನೀನು ನಮ್ಮ ನೋವುಗಳನ್ನೂ ತೊಂದರೆಗಳನ್ನೂ ಮರೆತುಬಿಟ್ಟಿರುವೆಯಾ? [QBR]
ಕೀರ್ತನೆಗಳು 44 : 25 (ERVKN)
ನಾವು ಧೂಳಿಗೆ ತಳ್ಳಲ್ಪಟ್ಟವರಾಗಿದ್ದೇವೆ. [QBR2] ನಮ್ಮ ಶರೀರವು ನೆಲಕ್ಕೆ ಹತ್ತಿಕೊಂಡಿದೆ. [QBR]
ಕೀರ್ತನೆಗಳು 44 : 26 (ERVKN)
ಎದ್ದು ಸಹಾಯಮಾಡು! [QBR2] ನಿನ್ನ ಶಾಶ್ವತವಾದ ಪ್ರೀತಿಯ ನಿಮಿತ್ತ ನಮ್ಮನ್ನು ರಕ್ಷಿಸು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26

BG:

Opacity:

Color:


Size:


Font: