ಕೀರ್ತನೆಗಳು 48 : 1 (ERVKN)
ಯೆಹೋವನೇ ಮಹೋನ್ನತನು. ನಮ್ಮ ದೇವರನ್ನು ಆತನ ಪವಿತ್ರ ಪರ್ವತ ಪಟ್ಟಣದಲ್ಲಿ ಜನರು ಬಹಳವಾಗಿ ಕೊಂಡಾಡುವರು.
ಕೀರ್ತನೆಗಳು 48 : 2 (ERVKN)
ದೇವರ ಪವಿತ್ರ ಪಟ್ಟಣವು ರಮ್ಯವಾಗಿದೆ. ಭೂಲೋಕದಲ್ಲೆಲ್ಲಾ ಇರುವ ಜನರನ್ನು ಅದು ಸಂತೋಷಗೊಳಿಸುವುದು.
ಸಿಯೋನ್ ಪರ್ವತವೇ ದೇವರ ನಿಜವಾದ ಪರ್ವತ. ಅದೇ ಆ ಮಹಾರಾಜನ ಪರ್ವತ.
ಕೀರ್ತನೆಗಳು 48 : 3 (ERVKN)
ದೇವರು ಆ ಪಟ್ಟಣಗಳ ಅರಮನೆಗಳಲ್ಲಿ, ತಾನೇ ಆಶ್ರಯದುರ್ಗವೆಂದು ಹೆಸರುವಾಸಿಯಾಗಿದ್ದಾನೆ.
ಕೀರ್ತನೆಗಳು 48 : 4 (ERVKN)
ಒಮ್ಮೆ, ಕೆಲವು ರಾಜರು ಒಟ್ಟಾಗಿ ಸೇರಿಬಂದರು. ಆ ಪಟ್ಟಣದ ಮೇಲೆ ದಾಳಿ ಮಾಡಲೆಂದು ಅವರೆಲ್ಲ ಅದರತ್ತ ನಡೆದರು.
ಕೀರ್ತನೆಗಳು 48 : 5 (ERVKN)
ಆದರೆ ಅವರು ಅದನ್ನು ಕಂಡಾಗ ದಿಗ್ಭ್ರಮೆಗೊಂಡರು; ಭಯದಿಂದ ಓಡಿಹೋದರು.
ಕೀರ್ತನೆಗಳು 48 : 6 (ERVKN)
ಭಯವು ಅವರನ್ನು ಪ್ರಸವವೇದನೆಯಂತೆ ಆವರಿಸಿಕೊಂಡಿತು.
ಕೀರ್ತನೆಗಳು 48 : 7 (ERVKN)
ಪೂರ್ವದ ಬಿರುಗಾಳಿಯಿಂದ ಒಡೆದುಹೋದ ಹಡಗುಗಳಂತೆ ನೀನು ಅವರನ್ನು ನಾಶಮಾಡಿದೆ.
ಕೀರ್ತನೆಗಳು 48 : 8 (ERVKN)
ಹೌದು, ಆ ರಾಜರುಗಳಿಗೆ ಸಂಭವಿಸಿದ್ದನ್ನು ನಾವು ಕಿವಿಯಾರೆ ಕೇಳಿದಂತೆಯೇ ಕಣ್ಣಾರೆಯೂ ಕಂಡೆವು. ನಮ್ಮ ದೇವರೂ ಸೇನಾಧೀಶ್ವರನೂ ಆಗಿರುವ ಯೆಹೋವನ ಪಟ್ಟಣದಲ್ಲಿ ನಾವು ಅದನ್ನು ನೋಡಿದ್ದೇವೆ.
ದೇವರು ಆ ಪಟ್ಟಣವನ್ನು ಶಾಶ್ವತವಾಗಿ ಭದ್ರಗೊಳಿಸುವನು.
ಕೀರ್ತನೆಗಳು 48 : 9 (ERVKN)
ದೇವರೇ, ನಿನ್ನ ಆಲಯದಲ್ಲಿ ನಿನ್ನ ಶಾಶ್ವತ ಪ್ರೀತಿಯ ಕುರಿತು ಧ್ಯಾನಿಸುವೆವು.
ಕೀರ್ತನೆಗಳು 48 : 10 (ERVKN)
ದೇವರೇ, ನೀನು ಪ್ರಖ್ಯಾತನಾಗಿರುವೆ. ಭೂಮಿಯ ಮೇಲೆಲ್ಲಾ ಜನರು ನಿನ್ನನ್ನು ಕೊಂಡಾಡುವರು. ನೀನು ಎಷ್ಟು ಒಳ್ಳೆಯವನೆಂಬುದು ಪ್ರತಿಯೊಬ್ಬರಿಗೂ ತಿಳಿದಿದೆ.
ಕೀರ್ತನೆಗಳು 48 : 11 (ERVKN)
ನಿನ್ನ ನ್ಯಾಯನಿರ್ಣಯಗಳಿಂದ ಚೀಯೋನ್ ಪರ್ವತವು ಹರ್ಷಿಸಲಿ; ಯೆಹೂದದ ಊರುಗಳು ಉಲ್ಲಾಸಿಸಲಿ.
ಕೀರ್ತನೆಗಳು 48 : 12 (ERVKN)
ಚೀಯೋನಿನ ಸುತ್ತಲೂ ಸಂಚರಿಸಿ, ಆ ಪಟ್ಟಣವನ್ನು ನೋಡಿರಿ. ಅದರ ಬುರುಜುಗಳನ್ನು ಎಣಿಸಿರಿ.
ಕೀರ್ತನೆಗಳು 48 : 13 (ERVKN)
ಅದರ ಕೋಟೆಗಳನ್ನು ನೋಡಿರಿ. ಚೀಯೋನಿನ ಅರಮನೆಗಳನ್ನು ಹೊಗಳಿರಿ.
ಆಗ ನೀವು ನಿಮ್ಮ ಮುಂದಿನ ಸಂತತಿಯವರಿಗೆ ಅದರ ಬಗ್ಗೆ ಹೇಳಬಲ್ಲಿರಿ.
ಕೀರ್ತನೆಗಳು 48 : 14 (ERVKN)
ಈ ದೇವರೇ ಎಂದೆಂದಿಗೂ ನಮ್ಮ ದೇವರು! ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ!

1 2 3 4 5 6 7 8 9 10 11 12 13 14