ಕೀರ್ತನೆಗಳು 50 : 1 (ERVKN)
ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು.
ಕೀರ್ತನೆಗಳು 50 : 2 (ERVKN)
ಸೌಂದರ್ಯದಿಂದ ಕಂಗೊಳಿಸುತ್ತಿರುವ ಚೀಯೋನಿನಲ್ಲಿ ದೇವರು ಪ್ರಕಾಶಿಸುತ್ತಾನೆ.
ಕೀರ್ತನೆಗಳು 50 : 3 (ERVKN)
ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸುವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು.
ಕೀರ್ತನೆಗಳು 50 : 4 (ERVKN)
ಯೆಹೋವನು ತನ್ನ ಜನರಿಗೆ ನ್ಯಾಯವಿಚಾರಣೆಗಾಗಿ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆಯುವನು.
ಕೀರ್ತನೆಗಳು 50 : 5 (ERVKN)
ದೇವರು ಇಂತೆನ್ನುವನು: “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆ ಮಾಡಿಕೊಂಡ ನನ್ನ ಪವಿತ್ರ ಪ್ರಜೆಗಳೇ, ನನ್ನ ಸುತ್ತಲೂ ಸೇರಿ ಬನ್ನಿರಿ” ಎಂದು ಆಜ್ಞಾಪಿಸುವನು.
ಕೀರ್ತನೆಗಳು 50 : 6 (ERVKN)
ದೇವರೊಬ್ಬನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುವುದು.
ಕೀರ್ತನೆಗಳು 50 : 7 (ERVKN)
ದೇವರು ಇಂತೆನ್ನುತ್ತಾನೆ: “ನನ್ನ ಜನರೇ, ಇಸ್ರೇಲರೇ, ನನಗೆ ಕಿವಿಗೊಡಿರಿ! ನಾನು ನಿಮಗೆ ವಿರುದ್ಧವಾಗಿ ಸಾಕ್ಷಿ ಹೇಳುವೆನು. ದೇವರಾದ ನಾನೇ ನಿಮ್ಮ ದೇವರು!
ಕೀರ್ತನೆಗಳು 50 : 8 (ERVKN)
ನಿಮ್ಮ ಯಜ್ಞಗಳ ಬಗ್ಗೆ ನಾನು ದೂರು ಹೇಳುತ್ತಿಲ್ಲ. ಇಸ್ರೇಲರಾದ ನೀವು ನನಗೆ ಸರ್ವಾಂಗ ಹೋಮಗಳನ್ನು ನಿತ್ಯವೂ ಅರ್ಪಿಸುತ್ತಲೇ ಇದ್ದೀರಿ.
ಕೀರ್ತನೆಗಳು 50 : 9 (ERVKN)
ನಿಮ್ಮಮನೆಗಳಿಂದ ನಾನು ಹೋರಿಗಳನ್ನು ತೆಗೆದುಕೊಳ್ಳುವುದಿಲ್ಲ; ನಿಮ್ಮ ದೊಡ್ಡಿಗಳಿಂದ ಆಡುಗಳನ್ನು ತೆಗೆದುಕೊಳ್ಳುವುದಿಲ್ಲ.
ಕೀರ್ತನೆಗಳು 50 : 10 (ERVKN)
ನನಗೆ ಆ ಪಶುಗಳ ಅಗತ್ಯವಿಲ್ಲ. ಕಾಡಿನಲ್ಲಿರುವ ಸರ್ವ ಮೃಗಗಳೂ ಗುಡ್ಡಗಳ ಮೇಲಿರುವ ಸಾವಿರಾರು ಪಶುಗಳು ನನ್ನವೇ.
ಕೀರ್ತನೆಗಳು 50 : 11 (ERVKN)
ಅತ್ಯಂತ ಉನ್ನತವಾದ ಬೆಟ್ಟಗಳ ಮೇಲಿರುವ ಪಕ್ಷಿಗಳೆಲ್ಲಾ ನನಗೆ ಗೊತ್ತುಂಟು. ಬೆಟ್ಟಗಳ ಮೇಲೆ ಚಲಿಸುವ ಜೀವಜಂತುಗಳೆಲ್ಲಾ ನನ್ನವೇ.
ಕೀರ್ತನೆಗಳು 50 : 12 (ERVKN)
ನನಗೆ ಹಸಿವೆಯಾಗಿದ್ದರೆ, ಆಹಾರಕ್ಕಾಗಿ ನಿಮ್ಮನ್ನು ಕೇಳಬೇಕಿಲ್ಲ. ಲೋಕವೂ ಅದರಲ್ಲಿರುವ ಸಮಸ್ತವೂ ನನ್ನದೇ.
ಕೀರ್ತನೆಗಳು 50 : 13 (ERVKN)
ನಾನು ಹೋರಿಗಳ ಮಾಂಸವನ್ನು ತಿನ್ನುವೆನೇ? ನಾನು ಆಡುಗಳ ರಕ್ತವನ್ನು ಕುಡಿಯುವೆನೇ?”
ಕೀರ್ತನೆಗಳು 50 : 14 (ERVKN)
ಕೃತಜ್ಞತಾ ಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.
ಕೀರ್ತನೆಗಳು 50 : 15 (ERVKN)
ದೇವರು ಇಂತೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”
ಕೀರ್ತನೆಗಳು 50 : 16 (ERVKN)
ದೇವರು ದುಷ್ಟರಿಗೆ ಇಂತೆನ್ನುವನು: “ನೀವು ನನ್ನ ಕಟ್ಟಳೆಗಳ ಕುರಿತು ಮಾತಾಡುವಿರಿ; ನನ್ನ ಒಡಂಬಡಿಕೆಯ ಕುರಿತು ಮಾತಾಡುವಿರಿ.
ಕೀರ್ತನೆಗಳು 50 : 17 (ERVKN)
ಹೀಗಿರಲು ನೀವು ನನ್ನ ಸುಶಿಕ್ಷಣವನ್ನು ದ್ವೇಷಿಸುವುದೇಕೆ? ನಾನು ಹೇಳುವುದನ್ನು ನೀವು ತುಚ್ಛೀಕರಿಸುವುದೇಕೆ?
ಕೀರ್ತನೆಗಳು 50 : 18 (ERVKN)
ನೀವು ಕಳ್ಳನನ್ನು ಕಂಡು ಅವನೊಂದಿಗೆ ಸೇರಿಕೊಳ್ಳಲು ಓಡಿಹೋಗುವಿರಿ; ವ್ಯಭಿಚಾರಿಗಳ ಒಡನಾಟ ಮಾಡುವಿರಿ.
ಕೀರ್ತನೆಗಳು 50 : 19 (ERVKN)
ನಿಮ್ಮ ಬಾಯಿಂದ ಕೇಡನ್ನು ಕಲ್ಪಿಸುವಿರಿ. ನಿಮ್ಮ ನಾಲಿಗೆಯಿಂದ ಮೋಸವನ್ನು ನೇಯುವಿರಿ.
ಕೀರ್ತನೆಗಳು 50 : 20 (ERVKN)
ಬೇರೆಯವರ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಕೆಟ್ಟದ್ದನ್ನು ಹೇಳುತ್ತಲೇ ಇರುತ್ತೀರಿ.
ಕೀರ್ತನೆಗಳು 50 : 21 (ERVKN)
ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!
ಕೀರ್ತನೆಗಳು 50 : 22 (ERVKN)
ದೇವರನ್ನು ಮರೆತುಬಿಟ್ಟವರೇ, ಇದನ್ನು ಗಮನಕ್ಕೆ ತಂದುಕೊಳ್ಳಿರಿ. ಇಲ್ಲವಾದರೆ ತುಂಡುತಂಡು ಮಾಡುವೆನು; ಯಾರೂ ನಿಮ್ಮನ್ನು ರಕ್ಷಿಸಲಾರರು!
ಕೀರ್ತನೆಗಳು 50 : 23 (ERVKN)
ನನಗೆ ಕೃತಜ್ಞತಾಯಜ್ಞವನ್ನು ಅರ್ಪಿಸುವವನೇ ನನ್ನನ್ನು ಸನ್ಮಾನಿಸುವವನು. ಆದರೆ ನೀತಿವಂತನಾಗಿ ಜೀವಿಸುವವನಿಗೆ ನನ್ನ ರಕ್ಷಣಾಶಕ್ತಿಯನ್ನು ತೋರಿಸುವೆನು.

1 2 3 4 5 6 7 8 9 10 11 12 13 14 15 16 17 18 19 20 21 22 23

BG:

Opacity:

Color:


Size:


Font: