ಕೀರ್ತನೆಗಳು 59 : 1 (ERVKN)
ನನ್ನ ದೇವರೇ, ವೈರಿಗಳಿಂದ ನನ್ನನ್ನು ಬಿಡಿಸು. ನನಗೆ ವಿರೋಧವಾಗಿ ಎದ್ದಿರುವ ಜನರಿಂದ ನನ್ನನ್ನು ಸಂರಕ್ಷಿಸು.
ಕೀರ್ತನೆಗಳು 59 : 2 (ERVKN)
ಆ ದುಷ್ಟರಿಂದ ನನ್ನನ್ನು ವಿಮೋಚಿಸು. ಆ ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
ಕೀರ್ತನೆಗಳು 59 : 3 (ERVKN)
ಇಗೋ, ನನ್ನನ್ನು ಕೊಲ್ಲಲು ಬಲಿಷ್ಠರು ಹೊಂಚುಹಾಕಿದ್ದ್ದಾರೆ. ಆದರೆ ನಾನು ಪಾಪವನ್ನಾಗಲಿ ಅಪರಾಧವನ್ನಾಗಲಿ ಮಾಡಿಲ್ಲ.
ಕೀರ್ತನೆಗಳು 59 : 4 (ERVKN)
ಅವರು ನನ್ನ ಮೇಲೆ ಆಕ್ರಮಣಮಾಡಲು ಬರುತ್ತಿದ್ದಾರೆ, ಆದರೆ ನಾನೇನು ತಪ್ಪು ಮಾಡಿಲ್ಲ. ಯೆಹೋವನೇ, ಸ್ವತಃ ನೀನೇ ಬಂದು ನೋಡು!
ಕೀರ್ತನೆಗಳು 59 : 5 (ERVKN)
ಸೇನಾಧೀಶ್ವರನಾದ ಯೆಹೋವನೇ, ಇಸ್ರೇಲರ ದೇವರೇ, ಎದ್ದೇಳು! ಅವರನ್ನು ದಂಡಿಸು!
ಆ ದುಷ್ಟ ದ್ರೋಹಿಗಳಿಗೆ ಕರುಣೆಯನ್ನೇ ತೋರಬೇಡ.
ಕೀರ್ತನೆಗಳು 59 : 6 (ERVKN)
ಗುರುಗುಟ್ಟುತ್ತಾ ಬೀದಿಗಳಲ್ಲಿ ಅಡ್ಡಾಡುವ ನಾಯಿಗಳಂತೆ ಅವರು ಸಾಯಂಕಾಲದಲ್ಲಿ ಪಟ್ಟಣದಲ್ಲೆಲ್ಲಾ ಸುತ್ತಾಡುತ್ತಾರೆ.
ಕೀರ್ತನೆಗಳು 59 : 7 (ERVKN)
ತಮ್ಮ ನಾಲಿಗೆಗಳೇ ಆಯುಧಗಳೆಂಬಂತೆ ಅಪಮಾನಕರವಾದ ನುಡಿಗಳನ್ನು ಬೊಗಳುತ್ತಾರೆ. ಯಾರು ಕೇಳಿಸಿಕೊಂಡರೂ ಅವರಿಗೆ ಚಿಂತೆಯಿಲ್ಲ.
ಕೀರ್ತನೆಗಳು 59 : 8 (ERVKN)
ಯೆಹೋವನೇ, ಅವರನ್ನು ನೋಡಿ ನಗು. ಅವರೆಲ್ಲರನ್ನು ಅಪಹಾಸ್ಯ ಮಾಡು.
ಕೀರ್ತನೆಗಳು 59 : 9 (ERVKN)
ನನ್ನ ಬಲವೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ. ದೇವರೇ, ಬೆಟ್ಟಗಳ ಶಿಖರದಲ್ಲಿರುವ ಆಶ್ರಯದುರ್ಗ ನೀನೇ.
ಕೀರ್ತನೆಗಳು 59 : 10 (ERVKN)
ದೇವರು ನನ್ನನ್ನು ಪ್ರೀತಿಸುವನು; ನನ್ನ ಜಯಕ್ಕೆ ಆತನೇ ಸಹಾಯ ಮಾಡುವನು. ನನ್ನ ಶತ್ರುಗಳನ್ನು ಸೋಲಿಸಲು ಆತನೇ ನನಗೆ ನೆರವು ನೀಡುವನು.
ಕೀರ್ತನೆಗಳು 59 : 11 (ERVKN)
ಯೆಹೋವನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಕೊಲ್ಲಬೇಡ, ಇಲ್ಲವಾದರೆ, ನನ್ನ ಜನರು ಮರೆತುಬಿಡಬಹುದು. ನನ್ನ ಒಡಯನೇ, ಸಂರಕ್ಷಕನೇ, ಅವರನ್ನು ಚದರಿಸಿಬಿಡು; ನಿನ್ನ ಬಲದಿಂದ ಸೋಲಿಸಿಬಿಡು.
ಕೀರ್ತನೆಗಳು 59 : 12 (ERVKN)
ಆ ದುಷ್ಟರು ಶಪಿಸುತ್ತಾರೆ, ಸುಳ್ಳಾಡುತ್ತಾರೆ. ಅವರ ಮಾತುಗಳ ನಿಮಿತ್ತವೇ ಅವರನ್ನು ದಂಡಿಸು. ಅವರು ತಮ್ಮ ಗರ್ವದಿಂದಲೇ ಸಿಕ್ಕಿಬೀಳಲಿ.
ಕೀರ್ತನೆಗಳು 59 : 13 (ERVKN)
ನೀನು ಅವರನ್ನು ಕೋಪದಿಂದ ನಾಶಮಾಡು. ಅವರನ್ನು ಸಂಪೂರ್ಣವಾಗಿ ನಾಶಮಾಡು.
ಯಾಕೋಬನ ವಂಶದವರನ್ನು ಆಳುತ್ತಿರುವವನು ನೀನೇ ಎಂದು ಆಗ ಲೋಕದವರಿಗೆಲ್ಲಾ ಗೊತ್ತಾಗುವುದು.
ಕೀರ್ತನೆಗಳು 59 : 14 (ERVKN)
ಗುರುಗುಟ್ಟುತ್ತಾ ಬೀದಿಗಳಲ್ಲಿ ಅಡ್ಡಾಡುವ ನಾಯಿಗಳಂತೆ ಅವರು ಸಾಯಂಕಾಲದಲ್ಲಿ ಪಟ್ಟಣದಲ್ಲೆಲ್ಲಾ ಸುತ್ತಾಡುತ್ತಾರೆ.
ಕೀರ್ತನೆಗಳು 59 : 15 (ERVKN)
ಅವರು ಊಟಕ್ಕಾಗಿ ಹುಡುಕಾಡಿದರೂ ಸಿಕ್ಕುವುದಿಲ್ಲ; ಮಲಗಲು ಸ್ಥಳವೂ ಸಿಕ್ಕುವುದಿಲ್ಲ.
ಕೀರ್ತನೆಗಳು 59 : 16 (ERVKN)
ನಾನಾದರೋ ಮುಂಜಾನೆ ನಿನಗೆ ಸ್ತುತಿಗೀತೆಗಳನ್ನು ಹಾಡುವೆ; ನಿನ್ನ ಪ್ರೀತಿಯ ಕುರಿತು ಕೊಂಡಾಡುವೆನು;
ಯಾಕೆಂದರೆ ಇಕ್ಕಟ್ಟಿನಲ್ಲಿ ನೀನೇ ನನಗೆ ಆಶ್ರಯದುರ್ಗವಾಗಿರುವೆ.
ಕೀರ್ತನೆಗಳು 59 : 17 (ERVKN)
ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆ. ಯಾಕೆಂದರೆ ನೀನೇ ನನಗೆ ಆಶ್ರಯದುರ್ಗವಾಗಿರುವೆ. ನನ್ನನ್ನು ಪ್ರೀತಿಸುವ ದೇವರು ನೀನೇ!
❮
❯
1
2
3
4
5
6
7
8
9
10
11
12
13
14
15
16
17