ಕೀರ್ತನೆಗಳು 63 : 1 (ERVKN)
ರಚನೆಗಾರ : ದಾವೀದ. ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.
ಕೀರ್ತನೆಗಳು 63 : 2 (ERVKN)
ಹೌದು, ನಿನ್ನನ್ನು ನಿನ್ನಾಲಯದಲ್ಲಿ ನೋಡಿದ್ದೇನೆ, ನಿನ್ನ ಶಕ್ತಿಯನ್ನೂ ಮಹಿಮೆಯನ್ನೂ ಕಂಡಿದ್ದೇನೆ.
ಕೀರ್ತನೆಗಳು 63 : 3 (ERVKN)
ನಿನ್ನ ಪ್ರೀತಿಯು ಜೀವಕ್ಕಿಂತಲೂ ಶ್ರೇಷ್ಠ. ನನ್ನ ತುಟಿಗಳು ನಿನ್ನನ್ನು ಕೊಂಡಾಡುತ್ತವೆ.
ಕೀರ್ತನೆಗಳು 63 : 4 (ERVKN)
ಹೌದು, ನನ್ನ ಜೀವಮಾನವೆಲ್ಲಾ ನಿನ್ನನ್ನು ಕೊಂಡಾಡುವೆನು. ನಿನ್ನ ಹೆಸರಿನಲ್ಲಿ ಕೈಮುಗಿದು ಪ್ರಾರ್ಥಿಸುವೆನು.
ಕೀರ್ತನೆಗಳು 63 : 5 (ERVKN)
ಮೃಷ್ಟಾನ್ನವನ್ನು ತಿಂದಿರುವವನಂತೆ ತೃಪ್ತನಾಗಿರುವೆನು. ನನ್ನ ಬಾಯಿ ನಿನ್ನನ್ನು ಕೊಂಡಾಡುವುದು.
ಕೀರ್ತನೆಗಳು 63 : 6 (ERVKN)
ಹಾಸಿಗೆಯು ಮೇಲೆ ಮಲಗಿರುವಾಗಲೂ ನಿನ್ನನ್ನು ಜ್ಞಾಪಿಸಿಕೊಳ್ಳುವೆನು. ಮಧ್ಯರಾತ್ರಿಯಲ್ಲಿಯೂ ನಿನ್ನನ್ನು ನೆನಸಿಕೊಳ್ಳುವೆನು.
ಕೀರ್ತನೆಗಳು 63 : 7 (ERVKN)
ನಿಜವಾಗಿಯೂ ನೀನೇ ನನಗೆ ಸಹಾಯಕ. ನಿನ್ನ ರೆಕ್ಕೆಗಳ ಮರೆಯಲ್ಲಿ ಆನಂದಘೋಷ ಮಾಡುವೆನು.
ಕೀರ್ತನೆಗಳು 63 : 8 (ERVKN)
ನನ್ನ ಆತ್ಮವು ನಿನ್ನನ್ನು ಅಂಟಿಕೊಂಡಿರುವುದು. ನಿನ್ನ ಬಲಗೈ ನನ್ನ ಕೈಹಿಡಿದು ನಡೆಸುವುದು.
ಕೀರ್ತನೆಗಳು 63 : 9 (ERVKN)
ನನ್ನನ್ನು ಕೊಲ್ಲಬೇಕೆಂದಿರುವವರು ಪಾತಾಳಕ್ಕೆ ಇಳಿದು ಹೋಗುವರು.
ಕೀರ್ತನೆಗಳು 63 : 10 (ERVKN)
ಅವರು ಖಡ್ಗಗಳಿಂದ ಕೊಲ್ಲಲ್ಪಡುವರು. ಅವರ ಶವಗಳು ನರಿಗಳ ಪಾಲಾಗುವವು.
ಕೀರ್ತನೆಗಳು 63 : 11 (ERVKN)
ರಾಜನಾದರೊ ತನ್ನ ದೇವರಲ್ಲಿಯೇ ಸಂತೋಷಿಸುವನು. ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, ಯಾಕಂದರೆ ಆ ಸುಳ್ಳುಗರರನ್ನೆಲ್ಲಾ ಆತನು ಸೋಲಿಸಿದ್ದಾನೆ.

1 2 3 4 5 6 7 8 9 10 11

BG:

Opacity:

Color:


Size:


Font: