ಕೀರ್ತನೆಗಳು 64 : 1 (ERVKN)
ದೇವರೇ, ನನಗೆ ಕಿವಿಗೊಡು. ವೈರಿಯು ನನಗೆ ಬೆದರಿಕೆ ಹಾಕಿದ್ದಾನೆ. ನನ್ನ ಪ್ರಾಣವನ್ನು ರಕ್ಷಿಸು.
ಕೀರ್ತನೆಗಳು 64 : 2 (ERVKN)
ನನ್ನ ಶತ್ರುಗಳ ಒಳಸಂಚುಗಳಿಂದ ನನ್ನನ್ನು ಸಂರಕ್ಷಿಸು. ಆ ದುಷ್ಟರಿಗೆ ಸಿಕ್ಕದಂತೆ ನನ್ನನ್ನು ಮರೆಮಾಡು.
ಕೀರ್ತನೆಗಳು 64 : 3 (ERVKN)
ಅವರು ನನ್ನ ಬಗ್ಗೆ ಕಡುಸುಳ್ಳುಗಳನ್ನು ಹೇಳಿದ್ದಾರೆ. ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ. ಅವರ ಮಾತುಗಳು ವಿಷಬಾಣಗಳಂತಿವೆ.
ಕೀರ್ತನೆಗಳು 64 : 4 (ERVKN)
ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿದ್ದು ನಿರ್ಭಯದಿಂದ *ನಿರ್ಭಯದಿಂದ ಅಥವಾ ಅಗೌರವದಿಂದ. ನೀತಿವಂತನ ಮೇಲೆ ಆ ಬಾಣಗಳನ್ನು ಎಸೆಯುತ್ತಾರೆ.
ಕೀರ್ತನೆಗಳು 64 : 5 (ERVKN)
ಕೇಡುಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲೆಯೊಡ್ಡಲು ಆಲೋಚಿಸುವರು. “ತಮ್ಮ ಬಲೆಗಳು ಯಾರಿಗೂ ಕಾಣುವುದಿಲ್ಲ” ಎಂದು ಮಾತಾಡಿಕೊಳ್ಳುವರು.
ಕೀರ್ತನೆಗಳು 64 : 6 (ERVKN)
ಅವರು ತಮ್ಮ ಬಲೆಗಳನ್ನು ಅಡಗಿಸಿಟ್ಟಿದ್ದಾರೆ; ಬೇಟೆಗಳಿಗಾಗಿ ಎದುರುನೋಡುತ್ತಿದ್ದಾರೆ. ಜನರು ಕುತಂತ್ರಿಗಳಾಗಿದ್ದರೆ, ಅವರ ಆಲೋಚನೆಗಳನ್ನು ತಿಳಿದುಕೊಳ್ಳುವುದು ಬಹು ಕಷ್ಟ. †ಅವರು … ಬಹು ಕಷ್ಟ ಅಥವಾ, “ಅವರು ದುಷ್ಟ ಯೋಜನೆಗಳಿಗಾಗಿ ಎದುರುನೋಡುತ್ತಾ, ನಮ್ಮಲ್ಲಿ ಸಂಪೂರ್ಣವಾದ ಯೋಜನೆಯಿದೆ” ಎನ್ನುತ್ತಾರೆ.
ಕೀರ್ತನೆಗಳು 64 : 7 (ERVKN)
ಆದರೆ ದೇವರು ಇದ್ದಕ್ಕಿದ್ದಂತೆ ತನ್ನ ಬಾಣಗಳನ್ನು ಎಸೆಯುವನು. ಆಗ ಆ ದುಷ್ಟರು ಗಾಯಗೊಳ್ಳುವರು.
ಕೀರ್ತನೆಗಳು 64 : 8 (ERVKN)
ದುಷ್ಟರು ಬೇರೆಯವರಿಗೆ ಕೇಡುಮಾಡಲು ಆಲೋಚಿಸುವರು. ಆದರೆ ಆ ಕೇಡುಗಳು ಅವರಿಗೇ ಸಂಭವಿಸುವಂತೆ ದೇವರು ಮಾಡುವನು.
ಆಗ ಅವರನ್ನು ಕಂಡ ಪ್ರತಿಯೊಬ್ಬನೂ ಆಶ್ಚರ್ಯದಿಂದ ತಲೆಯಾಡಿಸುವನು.
ಕೀರ್ತನೆಗಳು 64 : 9 (ERVKN)
ದೇವರ ಕಾರ್ಯವನ್ನು ಜನರು ಕಂಡು ಅದರ ಬಗ್ಗೆ ಬೇರೆಯವರಿಗೂ ತಿಳಿಸುವರು.
ಹೀಗೆ ಪ್ರತಿಯೊಬ್ಬರೂ ದೇವರ ಬಗ್ಗೆ ಹೆಚ್ಚಾಗಿ ಕಲಿತುಕೊಂಡು ಆತನಲ್ಲಿ ಭಯಭಕ್ತಿಯುಳ್ಳವರಾಗುವರು.
ಕೀರ್ತನೆಗಳು 64 : 10 (ERVKN)
ಸಜ್ಜನರು ಯೆಹೋವನಲ್ಲಿ ಸಂತೋಷಿಸುತ್ತಾ ಆತನನ್ನೇ ಆಶ್ರಯಿಸಿಕೊಳ್ಳುವರು.
ಯಥಾರ್ಥವಂತರು ಯೆಹೋವನನ್ನು ಕೊಂಡಾಡುವರು.
❮
❯