ಕೀರ್ತನೆಗಳು 65 : 1 (ERVKN)
ದೇವರೇ, ಚೀಯೋನಿನಲ್ಲಿ ನಾವು ನಿನ್ನನ್ನು ಸ್ತುತಿಸುವೆವು. ನಾವು ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆವು.
ಕೀರ್ತನೆಗಳು 65 : 2 (ERVKN)
ಪ್ರಾರ್ಥನೆಯನ್ನು ಕೇಳುವಾತನೇ, ಜನರೆಲ್ಲರೂ ನಿನ್ನ ಬಳಿಗೆ ಬರುವರು.
ಕೀರ್ತನೆಗಳು 65 : 3 (ERVKN)
ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ; ನಮ್ಮನ್ನು ಆ ಪಾಪಗಳಿಂದ ಬಿಡಿಸು.
ಕೀರ್ತನೆಗಳು 65 : 4 (ERVKN)
ನಿನ್ನ ಸೇವಕರನ್ನು ಆರಿಸಿಕೊಂಡಾತನು ನೀನೇ.
ನಿನ್ನ ಆಲಯಕ್ಕೆ ಬಂದು ನಿನ್ನನ್ನು ಆರಾಧಿಸಲು ನಮ್ಮನ್ನು ಆರಿಸಿಕೊಂಡಾತನು ನೀನೇ.
ನಿನ್ನ ಮಹಾಪವಿತ್ರ ಆಲಯದ ಸೌಭಾಗ್ಯದಿಂದ ನಾವು ಉಲ್ಲಾಸಗೊಂಡಿದ್ದೇವೆ.
ಕೀರ್ತನೆಗಳು 65 : 5 (ERVKN)
ನಮ್ಮ ರಕ್ಷಕನಾದ ದೇವರೇ, ನೀತಿವಂತರ ಪ್ರಾರ್ಥನೆಗೆ ಸದುತ್ತರವನ್ನು ದಯಪಾಲಿಸು;
ಅವರಿಗೋಸ್ಕರ ಮಹತ್ಕಾರ್ಯಗಳನ್ನು ನಡೆಸು. ಸರ್ವಭೂನಿವಾಸಿಗಳ ನಂಬಿಕೆಗೆ ನೀನೇ ಆಧಾರ.
ಕೀರ್ತನೆಗಳು 65 : 6 (ERVKN)
ಸ್ವಬಲದಿಂದ ಪರ್ವತಗಳನ್ನು ನಿರ್ಮಿಸಿದಾತನು ದೇವರೇ. ಆತನು “ಶೌರ್ಯ” ಎಂಬ ನಡುಕಟ್ಟನ್ನು ಬಿಗಿದುಕೊಂಡಿದ್ದಾನೆ.
ಕೀರ್ತನೆಗಳು 65 : 7 (ERVKN)
ಭೋರ್ಗರೆಯುವ ಸಮುದ್ರಗಳನ್ನೂ ಅನ್ಯಜನಾಂಗಗಳ ದಂಗೆಯನ್ನೂ ಶಾಂತಗೊಳಿಸುವಾತನು ದೇವರೇ.
ಕೀರ್ತನೆಗಳು 65 : 8 (ERVKN)
ಭೂಲೋಕದಾದ್ಯಂತದಲ್ಲಿರುವ ಜನರು ನಿನ್ನ ಮಹತ್ಕಾರ್ಯಗಳಿಂದ ಆಶ್ಚರ್ಯಚಕಿತರಾಗಿದ್ದಾರೆ. ಸೂರ್ಯೋದಯವೂ ಸೂರ್ಯಸ್ತಮಾನವೂ ನಮ್ಮನ್ನು ಹರ್ಷಗೊಳಿಸುತ್ತವೆ.
ಕೀರ್ತನೆಗಳು 65 : 9 (ERVKN)
ದೇವರೇ, ಭೂಪಾಲಕನು ನೀನೇ. ಭೂಮಿಗೆ ನೀರೆರೆದು ಹದಗೊಳಿಸುವಾತನು ನೀನೇ.
ತೊರೆಗಳನ್ನು ತುಂಬಿಸಿ ಸುಗ್ಗಿಯನ್ನು ಬರಮಾಡುವಾತನು ನೀನೇ.
ಕೀರ್ತನೆಗಳು 65 : 10 (ERVKN)
ಉತ್ತಿರುವ ಹೊಲಗಳ ಮೇಲೆ ಮಳೆ ಸುರಿಸಿ, ಹೆಂಟೆಗಳನ್ನು ಕರಗಿಸಿ,
ಭೂಮಿಯನ್ನು ಮೃದುಗೊಳಿಸಿ, ಎಳೆ ಸಸಿಗಳನ್ನು ಬೆಳೆಸುವಾತನು ನೀನೇ.
ಕೀರ್ತನೆಗಳು 65 : 11 (ERVKN)
ಹೊಸ ವರ್ಷವನ್ನು ಸಮೃದ್ಧಿಕರವಾದ ಸುಗ್ಗಿಯೊಂದಿಗೆ ಆರಂಭಿಸುವಾತನು ನೀನೇ. ಅನೇಕ ಬೆಳೆಗಳಿಂದ ಬಂಡಿಗಳನ್ನು ತುಂಬಿಸುವಾತನು ನೀನೇ.
ಕೀರ್ತನೆಗಳು 65 : 12 (ERVKN)
ಅರಣ್ಯವು ಹುಲ್ಲಿನಿಂದ ಆವೃತವಾಗಿದೆ. ಬೆಟ್ಟಗುಡ್ಡಗಳು ಸಮೃದ್ಧಿಕರ ಫಸಲಿನಿಂದ ಕಂಗೊಳಿಸುತ್ತವೆ.
ಕೀರ್ತನೆಗಳು 65 : 13 (ERVKN)
ಹುಲ್ಲುಗಾವಲುಗಳು ಕುರಿಗಳಿಂದ ತುಂಬಿಹೋಗಿವೆ. ಕಣಿವೆಗಳು ಧಾನ್ಯದಿಂದ ತುಂಬಿತುಳುಕುತ್ತಿವೆ.
ಎಲ್ಲರೂ ಹಾಡುತ್ತಾ ಆನಂದಘೋಷ ಮಾಡುತ್ತಿದ್ದಾರೆ.

1 2 3 4 5 6 7 8 9 10 11 12 13