ಕೀರ್ತನೆಗಳು 72 : 1 (ERVKN)
ದೇವರೇ, ನಿನ್ನಂತೆ ನ್ಯಾಯವಾಗಿ ತೀರ್ಪುನೀಡಲು ರಾಜನಿಗೆ ಕಲಿಸಿಕೊಡು. ನಿನ್ನ ನೀತಿಯನ್ನು ಕಲಿತುಕೊಳ್ಳಲು ರಾಜಕುಮಾರನಿಗೆ ಸಹಾಯಮಾಡು.
ಕೀರ್ತನೆಗಳು 72 : 2 (ERVKN)
ನಿನ್ನ ಜನರಿಗೆ ನೀತಿಯಿಂದಲೂ ನಿನ್ನ ಬಡಜನರಿಗೆ ನ್ಯಾಯವಾಗಿಯೂ ತೀರ್ಪುಮಾಡಲು ಅವನಿಗೆ ಸಹಾಯಮಾಡು.
ಕೀರ್ತನೆಗಳು 72 : 3 (ERVKN)
ಪ್ರಖ್ಯಾತವಾದ ಬೆಟ್ಟಗುಡ್ಡಗಳಲ್ಲೆಲ್ಲಾ, ದೇಶದಲ್ಲೆಲ್ಲಾ ಶಾಂತಿಯೂ ನ್ಯಾಯವೂ ನೆಲೆಸಿರಲಿ.
ಕೀರ್ತನೆಗಳು 72 : 4 (ERVKN)
ರಾಜನು ಬಡವರಿಗೆ ನ್ಯಾಯ ದೊರಕಿಸಿಕೊಡಲಿ; ನಿಸ್ಸಹಾಯಕರಿಗೆ ಸಹಾಯಮಾಡಲಿ. ಅವರಿಗೆ ಕೇಡುಮಾಡುವವರನ್ನು ರಾಜನು ದಂಡಿಸಲಿ.
ಕೀರ್ತನೆಗಳು 72 : 5 (ERVKN)
ಸೂರ್ಯಚಂದ್ರರು ಆಕಾಶದಲ್ಲಿ ಇರುವವರೆಗೂ ಜನರು ರಾಜನಿಗೆ ಭಯಪಡಲಿ; ಅವನನ್ನು ಗೌರವಿಸಲಿ.
ಕೀರ್ತನೆಗಳು 72 : 6 (ERVKN)
ಹುಲ್ಲುಗಾವಲಿನ ಮೇಲೆ ಸುರಿಯುವ ಮಳೆಯಂತೆಯೂ ಭೂಮಿಯನ್ನು ಹದಗೊಳಿಸುವ ಹಿತವಾದ ಮಳೆಯಂತೆಯೂ ನೀನು ಅವನಿಗೆ ಸಹಾಯಕನಾಗಿರು.
ಕೀರ್ತನೆಗಳು 72 : 7 (ERVKN)
ಅವನ ಆಡಳಿತದ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ. ಚಂದ್ರನಿರುವವರೆಗೂ ಶಾಂತಿ ನೆಲಸಿರಲಿ.
ಕೀರ್ತನೆಗಳು 72 : 8 (ERVKN)
ಅವನ ರಾಜ್ಯವು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೇಟೀಸ್ ನದಿಯಿಂದ ಭೂಮಿಯ ಬಹುದೂರದ ಸ್ಥಳದವರೆಗೂ ಬೆಳೆಯಲಿ.
ಕೀರ್ತನೆಗಳು 72 : 9 (ERVKN)
ಅರಣ್ಯದಲ್ಲಿ ವಾಸಿಸುತ್ತಿರುವ ಜನರು ಅವನಿಗೆ ಅಡ್ಡಬೀಳಲಿ. ಅವನ ವೈರಿಗಳೆಲ್ಲ ಅವನ ಮುಂದೆ ಬಿದ್ದು ಮಣ್ಣುಮುಕ್ಕಲಿ.
ಕೀರ್ತನೆಗಳು 72 : 10 (ERVKN)
ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ.
ಕೀರ್ತನೆಗಳು 72 : 11 (ERVKN)
ಅರಸರುಗಳೆಲ್ಲಾ ನಮ್ಮ ರಾಜನಿಗೆ ಅಡ್ಡಬೀಳಲಿ. ಜನಾಂಗಗಳೆಲ್ಲಾ ಅವನ ಸೇವೆಮಾಡಲಿ.
ಕೀರ್ತನೆಗಳು 72 : 12 (ERVKN)
ನಮ್ಮ ರಾಜನು ನಿಸ್ಸಹಾಯಕರಿಗೆ ಸಹಾಯ ಮಾಡುವನು. ನಮ್ಮ ರಾಜನು ಬಡವರಿಗೂ ಅಸಹಾಯಕರಿಗೂ ಸಹಾಯ ಮಾಡುವನು.
ಕೀರ್ತನೆಗಳು 72 : 13 (ERVKN)
ಬಡವರೂ ಅಸಹಾಯಕರೂ ಅವನನ್ನೇ ಅವಲಂಬಿಸಿಕೊಳ್ಳುವರು. ರಾಜನು ಅವರ ಪ್ರಾಣಗಳನ್ನು ಕಾಪಾಡುವನು.
ಕೀರ್ತನೆಗಳು 72 : 14 (ERVKN)
ಕ್ರೂರಿಗಳಿಂದ ಅವರನ್ನು ತಪ್ಪಿಸಿ ರಕ್ಷಿಸುವನು. ಆ ಬಡವರ ಜೀವಗಳು ರಾಜನಿಗೆ ಅಮೂಲ್ಯವಾಗಿವೆ.
ಕೀರ್ತನೆಗಳು 72 : 15 (ERVKN)
ರಾಜನು ಬಹುಕಾಲ ಬಾಳಲಿ! ಅವನಿಗೆ ಶೆಬಾ ಪ್ರಾಂತ್ಯದಿಂದ ಬಂಗಾರವು ಬರಲಿ.
ರಾಜನಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ. ಪ್ರತಿದಿನವೂ ಅವನನ್ನು ಆಶೀರ್ವದಿಸಿರಿ.
ಕೀರ್ತನೆಗಳು 72 : 16 (ERVKN)
ಹೊಲಗಳು ಯಥೇಚ್ಚವಾಗಿ ಧಾನ್ಯಬೆಳೆಯಲಿ. ಬೆಟ್ಟಗಳು ಬೆಳೆಗಳಿಂದ ತುಂಬಿಹೋಗಲಿ.
ಹೊಲಗಳು ಲೆಬನೋನಿನಲ್ಲಿರುವ ಹೊಲಗಳಂತೆ ಫಲವತ್ತಾಗಿರಲಿ. ಬಯಲುಗಳು ಹುಲ್ಲಿನಿಂದ ಆವೃತಿಯಾಗಿರುವಂತೆ ಪಟ್ಟಣಗಳು ಜನರಿಂದ ತುಂಬಿಹೋಗಲಿ.
ಕೀರ್ತನೆಗಳು 72 : 17 (ERVKN)
ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ.
ಅವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ.
ಕೀರ್ತನೆಗಳು 72 : 18 (ERVKN)
ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ. ಅಂಥ ಅದ್ಭುತಕಾರ್ಯಗಳನ್ನು ದೇವರೊಬ್ಬನೇ ಮಾಡಬಲ್ಲನು!
ಕೀರ್ತನೆಗಳು 72 : 19 (ERVKN)
ಆತನ ಪ್ರಭಾವಪೂರ್ಣವಾದ ಹೆಸರನ್ನು ಎಂದೆಂದಿಗೂ ಕೊಂಡಾಡಿರಿ! ಆತನ ಮಹಿಮೆ ಭೂಲೋಕವನ್ನೆಲ್ಲಾ ತುಂಬಿಕೊಳ್ಳಲಿ! ಅಆಮೆನ್, ಆಮೆನ್!
ಕೀರ್ತನೆಗಳು 72 : 20 (ERVKN)
(ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಇಲ್ಲಿಗೆ ಮುಕ್ತಾಯಗೊಂಡವು.)

1 2 3 4 5 6 7 8 9 10 11 12 13 14 15 16 17 18 19 20