ಕೀರ್ತನೆಗಳು 74 : 1 (ERVKN)
ದೇವರೇ, ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವೆಯಾ? [QBR2] ನಿನ್ನ ಜನರ ಮೇಲೆ ಇನ್ನೂ ಕೋಪದಿಂದಿರುವೆಯಾ? [QBR]
ಕೀರ್ತನೆಗಳು 74 : 2 (ERVKN)
ಬಹುಕಾಲದ ಹಿಂದೆ ನೀನು ಕೊಂಡುಕೊಂಡ ನಿನ್ನ ಜನರನ್ನು ಜ್ಞಾಪಿಸಿಕೊ. [QBR2] ನೀನು ನಮ್ಮನ್ನು ರಕ್ಷಿಸಿದೆ. ನಾವು ನಿನ್ನವರೇ. [QBR] ನೀನು ವಾಸಿಸಿದ ಚೀಯೋನ್ ಪರ್ವತವನ್ನು ಜ್ಞಾಪಿಸಿಕೊ. [QBR]
ಕೀರ್ತನೆಗಳು 74 : 3 (ERVKN)
ಬಹುಕಾಲದಿಂದ ಹಾಳುಬಿದ್ದಿರುವ ಕಟ್ಟಡಗಳ ಬಳಿಗೆ ಆಗಮಿಸು. [QBR2] ಶತ್ರುವು ನಾಶಮಾಡಿದ ನಿನ್ನ ಪವಿತ್ರ ಸ್ಥಳಕ್ಕೆ ಹಿಂತಿರುಗಿ ಬಾ.
ಕೀರ್ತನೆಗಳು 74 : 4 (ERVKN)
ಆಲಯದಲ್ಲಿ ಶತ್ರುಗಳು ಯುದ್ಧಾರ್ಭಟ ಮಾಡಿದರು. [QBR2] ಆಲಯದಲ್ಲಿ ತಮ್ಮ ಧ್ವಜಾರೋಹಣ ಮಾಡಿ ತಮ್ಮ ಜಯವನ್ನು ಸೂಚಿಸಿದರು. [QBR]
ಕೀರ್ತನೆಗಳು 74 : 5 (ERVKN)
ಶತ್ರು ಸೈನಿಕರಾದರೋ ಕಳೆಗುದ್ದಲಿಯಿಂದ [QBR2] ಕಳೆ ಕೀಳುತ್ತಿರುವ ಜನರಂತಿದ್ದಾರೆ. [QBR]
ಕೀರ್ತನೆಗಳು 74 : 6 (ERVKN)
ನಿನ್ನ ಆಲಯದ ಕೆತ್ತನೆ ಕೆಲಸಗಳನ್ನು ಅವರು ಕೊಡಲಿಗಳಿಂದಲೂ [QBR2] ಮಚ್ಚುಗತ್ತಿಗಳಿಂದಲೂ ಕತ್ತರಿಸಿ ಹಾಕಿದರು. [QBR]
ಕೀರ್ತನೆಗಳು 74 : 7 (ERVKN)
ಆ ಸೈನಿಕರು ನಿನ್ನ ಪವಿತ್ರ ಸ್ಥಳವನ್ನು ಸುಟ್ಟು ನೆಲಸಮಮಾಡಿದರು. [QBR2] ಆ ಆಲಯವು ನಿನ್ನ ನಾಮ ಘನತೆಗಾಗಿ ಕಟ್ಟಲ್ಪಟ್ಟಿತ್ತಲ್ಲಾ! [QBR]
ಕೀರ್ತನೆಗಳು 74 : 8 (ERVKN)
ನಮ್ಮನ್ನು ಸಂಪೂರ್ಣವಾಗಿ ಜಜ್ಜಿಹಾಕಲು ಶತ್ರುಗಳು ನಿರ್ಧರಿಸಿ [QBR2] ದೇಶದ ಪ್ರತಿಯೊಂದು ಪವಿತ್ರ ಸ್ಥಳವನ್ನೂ ಸುಟ್ಟುಹಾಕಿದರು. [QBR]
ಕೀರ್ತನೆಗಳು 74 : 9 (ERVKN)
ನಮ್ಮ ಯಾವ ಚಿಹ್ನೆಗಳೂ ನಮಗೆ ಕಾಣಲಿಲ್ಲ. [QBR2] ಪ್ರವಾದಿಗಳಲ್ಲಿ ಯಾರೂ ಉಳಿದಿಲ್ಲ. [QBR2] ಯಾರಿಗೂ ದಿಕ್ಕೇ ತೋಚುತ್ತಿಲ್ಲ. [QBR]
ಕೀರ್ತನೆಗಳು 74 : 10 (ERVKN)
ದೇವರೇ, ಇನ್ನೆಷ್ಟರವರೆಗೆ ಶತ್ರುಗಳು ನಮ್ಮನ್ನು ಗೇಲಿಮಾಡುತ್ತಿರಬೇಕು? [QBR2] ನಿನ್ನ ಹೆಸರಿಗೆ ಅವರು ಅವಮಾನ ಮಾಡುತ್ತಲೇ ಇರಬೇಕೇ? [QBR]
ಕೀರ್ತನೆಗಳು 74 : 11 (ERVKN)
ನೀನು ನಮ್ಮನ್ನು ಬಹು ಕಠಿಣವಾಗಿ ದಂಡಿಸಿದ್ದೇಕೆ? [QBR2] ನಿನ್ನ ಮಹಾಶಕ್ತಿಯಿಂದ ನಮ್ಮನ್ನು ಸಂಪೂರ್ಣವಾಗಿ ನಾಶಮಾಡಿರುವಿಯಲ್ಲಾ! [QBR]
ಕೀರ್ತನೆಗಳು 74 : 12 (ERVKN)
ದೇವರೇ, ಬಹುಕಾಲದಿಂದ ನೀನು ನಮ್ಮರಾಜ. [QBR2] ಈ ದೇಶದಲ್ಲಿ ಅನೇಕ ಯುದ್ಧಗಳನ್ನು ಗೆಲ್ಲಲು ನೀನು ನಮಗೆ ಸಹಾಯಮಾಡಿದೆ. [QBR]
ಕೀರ್ತನೆಗಳು 74 : 13 (ERVKN)
ಮಹಾಶಕ್ತಿಯಿಂದ ಕೆಂಪು ಸಮುದ್ರವನ್ನು ಇಬ್ಭಾಗ ಮಾಡಿದಾತನು ನೀನೇ. [QBR2] ಸಮುದ್ರದಲ್ಲಿ ಮಹಾ ತಿಮಿಂಗಲಗಳ ತಲೆಗಳನ್ನು ಜಜ್ಜಿ ಹಾಕಿದಾತನು ನೀನೇ. [QBR]
ಕೀರ್ತನೆಗಳು 74 : 14 (ERVKN)
ಲಿವ್ಯಾತಾನನ ತಲೆಗಳನ್ನು ಜಜ್ಜಿಹಾಕಿ ಪ್ರಾಣಿಗಳಿಗೆ ಆಹಾರವನ್ನಾಗಿ ಮಾಡಿದಾತನು ನೀನೇ. [QBR]
ಕೀರ್ತನೆಗಳು 74 : 15 (ERVKN)
ತೊರೆಗಳೂ ನದಿಗಳೂ ಹರಿಯುವಂತೆ ಮಾಡುವಾತನು ನೀನೇ. [QBR2] ನದಿಗಳನ್ನು ಒಣಗಿಸುವಾತನೂ ನೀನೇ. [QBR]
ಕೀರ್ತನೆಗಳು 74 : 16 (ERVKN)
ನೀನು ಹಗಲನ್ನೂ ರಾತ್ರಿಯನ್ನೂ ನಿನ್ನ ಹತೋಟಿಯಲ್ಲಿಟ್ಟುಕೊಂಡಿರುವೆ. [QBR2] ಸೂರ್ಯನನ್ನೂ ಚಂದ್ರನನ್ನೂ ಸೃಷ್ಟಿಮಾಡಿದಾತನು ನೀನೇ. [QBR]
ಕೀರ್ತನೆಗಳು 74 : 17 (ERVKN)
ಭೂಮಿಯ ಮೇಲೆ ಮೇರೆಗಳನ್ನು ಹಾಕಿರುವಾತನು ನೀನೇ. [QBR2] ಬೇಸಿಗೆಕಾಲವನ್ನೂ ಚಳಿಗಾಲವನ್ನೂ ನಿರ್ಮಿಸಿದಾತನು ನೀನೇ. [QBR]
ಕೀರ್ತನೆಗಳು 74 : 18 (ERVKN)
ದೇವರೇ, ಇವುಗಳನ್ನೆಲ್ಲಾ ಜ್ಞಾಪಿಸಿಕೊ. [QBR2] ವೈರಿಯು ನಿನಗೆ ಮಾಡಿದ ಅವಮಾನವನ್ನು ನೆನಸಿಕೊ! [QBR2] ಆ ಮೂರ್ಖರು ನಿನ್ನ ನಾಮವನ್ನು ದ್ವೇಷಿಸುತ್ತಾರೆ. [QBR]
ಕೀರ್ತನೆಗಳು 74 : 19 (ERVKN)
ದೇವರೇ, ನಿನ್ನ ಪಾರಿವಾಳವನ್ನು ಆ ದುಷ್ಟ ಪ್ರಾಣಿಗಳು ತೆಗೆದುಕೊಳ್ಳದಿರಲಿ. [QBR2] ನಿನ್ನ ಬಡಜನರನ್ನು ಮರೆತುಬಿಡಬೇಡ. [QBR]
ಕೀರ್ತನೆಗಳು 74 : 20 (ERVKN)
ನಿನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊ. [QBR2] ಈ ದೇಶದ ಕತ್ತಲೆಯ ಸ್ಥಳಗಳಲ್ಲೆಲ್ಲಾ ಹಿಂಸೆಯೂ ತುಂಬಿಕೊಂಡಿದೆ. [QBR]
ಕೀರ್ತನೆಗಳು 74 : 21 (ERVKN)
ದೇವರೇ, ನಿನ್ನ ಜನರಿಗೆ ಅವಮಾನವಾಗಿದೆ. [QBR2] ಅವರಿಗೆ ಕೇಡಾಗಲು ಬಿಡಬೇಡ. [QBR2] ನಿನ್ನ ಬಡಜನರೂ ನಿಸ್ಸಹಾಯಕರೂ ನಿನ್ನನ್ನು ಕೊಂಡಾಡಲಿ. [QBR]
ಕೀರ್ತನೆಗಳು 74 : 22 (ERVKN)
ದೇವರೇ, ಎದ್ದು ಹೋರಾಡು! [QBR2] ನಿನಗೆ ಸವಾಲೊಡ್ಡಿದ ಆ ನಿಂದಕರನ್ನು ಜ್ಞಾಪಿಸಿಕೊ! [QBR]
ಕೀರ್ತನೆಗಳು 74 : 23 (ERVKN)
ನಿನ್ನ ವೈರಿಗಳ ಆರ್ಭಟವನ್ನು ಮರೆತುಬಿಡಬೇಡ. [QBR2] ಅವರು ನಿನಗೆ ಪದೇಪದೇ ಅವಮಾನಮಾಡಿದರು. [PE]
❮
❯